ಬಿಸಿಸಿಐ 
ದೇಶ

India vs South Africa: ಬಿಸಿಸಿಐಗೆ ನೋಟಿಸ್ ಕೊಟ್ಟ ಕೋಲ್ಕತ್ತಾ ಪೊಲೀಸರು; ಯಾಕೆ ಗೊತ್ತಾ?

ಈಡನ್ ಗಾರ್ಡನ್ಸ್‌ನಲ್ಲಿ ಭಾನುವಾರ ನಡೆಯಲಿರುವ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ವಿಶ್ವಕಪ್ ಕ್ರಿಕೆಟ್ ಪಂದ್ಯದ ಟಿಕೆಟ್‌ಗಳನ್ನು ಬ್ಲಾಕ್ ಮಾರ್ಕೆಟಿಂಗ್ ಮಾಡಿದ ಆರೋಪದ ನಡುವೆ, ಕೋಲ್ಕತ್ತಾ ಪೊಲೀಸರು ಪಂದ್ಯದ ಟಿಕೆಟ್ ಮಾರಾಟದ ಬಗ್ಗೆ ಮಾಹಿತಿ ನೀಡುವಂತೆ ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಅವರಿಗೆ ನೋಟಿಸ್ ನೀಡಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾ

ಕೋಲ್ಕತ್ತಾ: ಈಡನ್ ಗಾರ್ಡನ್ಸ್‌ನಲ್ಲಿ ಭಾನುವಾರ ನಡೆಯಲಿರುವ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ವಿಶ್ವಕಪ್ ಕ್ರಿಕೆಟ್ ಪಂದ್ಯದ ಟಿಕೆಟ್‌ಗಳನ್ನು ಬ್ಲಾಕ್ ಮಾರ್ಕೆಟಿಂಗ್ ಮಾಡಿದ ಆರೋಪದ ನಡುವೆ, ಕೋಲ್ಕತ್ತಾ ಪೊಲೀಸರು ಪಂದ್ಯದ ಟಿಕೆಟ್ ಮಾರಾಟದ ಬಗ್ಗೆ ಮಾಹಿತಿ ನೀಡುವಂತೆ ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಅವರಿಗೆ ನೋಟಿಸ್ ನೀಡಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶನಿವಾರ ಸಂಜೆ ಹೊರಡಿಸಲಾದ ನೋಟಿಸ್‌ನಲ್ಲಿ, ಟಿಕೆಟ್‌ಗಳನ್ನು ಬ್ಲಾಕ್ ಮಾರ್ಕೆಟಿಂಗ್ ಮಾಡುತ್ತಿರುವ ಕುರಿತು ದೂರುಗಳ ತನಿಖೆ ನಡೆಸುತ್ತಿರುವ ಮೈದಾನ ಪೊಲೀಸ್ ಠಾಣೆಯ ಅಧಿಕಾರಿಗೆ ದಾಖಲೆಗಳನ್ನು ಸಲ್ಲಿಸುವಂತೆ ಬಿಸಿಸಿಐ ಅಧ್ಯಕ್ಷರಿಗೆ ತಿಳಿಸಲಾಗಿದೆ ಎಂದು ಅವರು ಹೇಳಿದರು.

'ಮಂಗಳವಾರ ಮೈದಾನ ಪೊಲೀಸ್ ಠಾಣೆಯ ತನಿಖಾಧಿಕಾರಿಗೆ ವೈಯಕ್ತಿಕವಾಗಿ ಅಥವಾ ಅವರ ಸಂಸ್ಥೆಯ ಯಾವುದೇ ಸಮರ್ಥ ವ್ಯಕ್ತಿಯ ಮೂಲಕ ಟಿಕೆಟ್‌ಗಳ ಮಾರಾಟಕ್ಕೆ ಸಂಬಂಧಿಸಿದ ದಾಖಲೆಗಳು ಮತ್ತು ಮಾಹಿತಿ ಒದಗಿಸುವಂತೆ ಬಿಸಿಸಿಐ ಅಧ್ಯಕ್ಷರಿಗೆ ನೋಟಿಸ್ ಕಳುಹಿಸಲಾಗಿದೆ' ಎಂದು ಅಧಿಕಾರಿ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಕೋಲ್ಕತ್ತಾ ಪೊಲೀಸರು ಇದುವರೆಗೆ 19 ಜನರನ್ನು ಬಂಧಿಸಿದ್ದಾರೆ ಮತ್ತು ಅವರಿಂದ 108 ಟಿಕೆಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಟಿಕೆಟ್‌ಗಳ ಬ್ಲಾಕ್ ಮಾರ್ಕೆಟಿಂಗ್‌ಗೆ ಸಂಬಂಧಿಸಿದಂತೆ ಏಳು ಪ್ರಕರಣಗಳನ್ನು ದಾಖಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel