ಶಾಸಕ ಜಸ್ವಂತ್ ಸಿಂಗ್ ಗಜ್ಜನ್ ಮಜ್ರಾ 
ದೇಶ

ಬ್ಯಾಂಕ್ ವಂಚನೆ ಪ್ರಕರಣ: ಪಂಜಾಬ್‌ ಎಎಪಿ ಶಾಸಕನನ್ನು ಬಂಧಿಸಿದ ಇಡಿ

ಬ್ಯಾಂಕ್ ಸಾಲ ಪಡೆದು ವಂಚನೆ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸೋಮವಾರ ಪಂಜಾಬ್‌ನ ಆಮ್ ಆದ್ಮಿ ಪಕ್ಷದ ಶಾಸಕ ಜಸ್ವಂತ್ ಸಿಂಗ್ ಗಜ್ಜನ್ ಮಜ್ರಾ..

ಚಂಡೀಗಢ: ಬ್ಯಾಂಕ್ ಸಾಲ ಪಡೆದು ವಂಚನೆ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸೋಮವಾರ ಪಂಜಾಬ್‌ನ ಆಮ್ ಆದ್ಮಿ ಪಕ್ಷದ ಶಾಸಕ ಜಸ್ವಂತ್ ಸಿಂಗ್ ಗಜ್ಜನ್ ಮಜ್ರಾ ಅವರನ್ನುಬಂಧಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಮಲೇರ್‌ಕೋಟ್ಲಾದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿದ್ದ ಎಎಪಿ ಶಾಸಕರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಈ ಹಿಂದೆ ಗಜ್ಜನ್ ಮಜ್ರಾ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಹಲವು ಬಾರಿ ಸಮನ್ಸ್‌ ನೀಡಲಾಗಿತ್ತು. ಆದರೆ ಅವರು ವಿಚಾರಣೆಯಿಂದ ತಪ್ಪಿಸಿಕೊಂಡಿದ್ದರು. ಆದ್ದರಿಂದ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ನಂತರ ಬಂಧಿಸಲಾಯಿತು ಎಂದು ಮೂಲಗಳು ತಿಳಿಸಿವೆ.

ಕಳೆದ ವರ್ಷ ಸೆಪ್ಟೆಂಬರ್ ತಿಂಗಳಲ್ಲಿ ಕೇಂದ್ರೀಯ ತನಿಖಾ ಸಂಸ್ಥೆಯು 40 ಕೋಟಿ ರೂ.ಗಳ ಬ್ಯಾಂಕ್ ವಂಚನೆಗೆ ಸಂಬಂಧಿಸಿದಂತೆ ಗಜ್ಜನ್ ಮಜ್ರಾ ಅವರ ಮನೆ ಸೇರಿದಂತೆ ಮೂರು ಕಡೆ ದಾಳಿ ನಡೆಸಿತ್ತು. ಈ ವೇಳೆ 16.57 ಲಕ್ಷ ನಗದು ಹಣ ಪತ್ತೆ ಆಗಿತ್ತು. ಬ್ಯಾಂಕ್ ಹಾಗೂ ಆಸ್ತಿ ದಾಖಲೆಗಳನ್ನು ವಶಕ್ಕೆ ಪಡೆದಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಅನಕ್ಷರಸ್ಥ' ಪ್ರಧಾನಿಯಿಂದಾಗಿ ಪೆಟ್ರೋಲ್-ಡೀಸೆಲ್ ಮತ್ತು ಅನಿಲ ಬೆಲೆಗಳು ಹೆಚ್ಚಳವಾಗಿದೆ: ಸಿಎಂ ಸಿದ್ದರಾಮಯ್ಯ

IPL Valuation Chart: 1.63 ಲಕ್ಷ ಕೋಟಿಗೇರಿದ ಐಪಿಎಲ್ ಮೌಲ್ಯ, CSK ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ KKR, 'ಕಿಂಗ್' ವಿರಾಟ್ ಕೊಹ್ಲಿ ಗಳಿಸಿದ್ದೆಷ್ಟು ಗೊತ್ತಾ?

ನಾಯಕತ್ವ ತ್ಯಜಿಸಿದ ಬಳಿಕ ಸಂಕಷ್ಟದಲ್ಲಿದ್ದೆ.. ನೆರವಿಗೆ ಬಂದಿದ್ದು 'ಜಾಮಿ' ಮಾತ್ರ: Virat Kohli

IPL 2026: ವೈಭವ್ ಸೂರ್ಯವಂಶಿ ಆರ್ಭಟಕ್ಕೆ ಮಕಾಡೆ ಮಲಗಿದ LSG, ಗೆದ್ದ RR ಪ್ಲೇ ಆಫ್ ಕನಸು ಜೀವಂತ!

ಮಾರ್ತಾಂಡ ಆನೆ ಕೊಂದ ಕಂಜನ್ ದಸರಾದಿಂದ ಶಾಶ್ವತ ನಿಷೇಧ: ಸಚಿವ ಈಶ್ವರ್ ಖಂಡ್ರೆ ಆದೇಶ

SCROLL FOR NEXT