ದೇಶ

ದೆಹಲಿ ಸಿಎಂ ಕೇಜ್ರಿವಾಲ್ ಪತ್ನಿ ಸುನೀತಾಗೆ ನೀಡಿದ್ದ ಸಮನ್ಸ್‌ಗೆ ಹೈಕೋರ್ಟ್ ತಡೆ

Lingaraj Badiger

ನವದೆಹಲಿ: ಪ್ರಜಾಪ್ರತಿನಿಧಿ ಕಾಯ್ದೆ(ಆರ್‌ಪಿಎ) ಉಲ್ಲಂಘಿಸಿ ಎರಡು ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಗೆ ಹೆಸರು ಸೇರಿಸಿದ ಆರೋಪ ಎದುರಿಸುತ್ತಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್‌ ಅವರಿಗೆ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನೀಡಿದ್ದ ಸಮನ್ಸ್ ಗೆ ದೆಹಲಿ ಹೈಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ.

ಸಮನ್ಸ್‌ ಪ್ರಶ್ನಿಸಿ ಸುನೀತಾ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಮಿತ್ ಬನ್ಸಾಲ್ ಅವರು ಮುಂದಿನ ವರ್ಷ ಫೆಬ್ರವರಿ 1 ರವರೆಗೆ ವಿಚಾರಣಾ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಿ, ವಿಚಾರಣೆ ಮುಂದೂಡಿದ್ದಾರೆ.

ಬಿಜೆಪಿ ನಾಯಕ ಹರೀಶ್ ಖುರಾನಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಅರ್ಜಿಂದರ್ ಕೌರ್ ಅವರು, ಆರೋಪಿ ಸುನೀತಾ ಅವರಿಗೆ ನವೆಂಬರ್ 18 ರಂದು ನ್ಯಾಯಾಲಯದ ಮುಂದೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದ್ದರು. 

ಇಬ್ಬರು ಸಾಕ್ಷಿಗಳು ನ್ಯಾಯಾಲಯಕ್ಕೆ ಸಲ್ಲಿಸಿದ ಮತದಾರರ ಪಟ್ಟಿಗಳ ಪ್ರಕಾರ, ಸುನೀತಾ ಕೇಜ್ರಿವಾಲ್ ಅವರ ಹೆಸರು ದೆಹಲಿಯ ಚಾಂದಿನಿ ಚೌಕ್ ವಿಧಾನಸಭಾ ಕ್ಷೇತ್ರದಲ್ಲಿ ಮತ್ತು ಉತ್ತರ ಪ್ರದೇಶದ ಸಾಹಿಬಾಬಾದ್ ವಿಧಾನಸಭಾ ಕ್ಷೇತ್ರದಲ್ಲಿ ಕಾಣಿಸಿಕೊಂಡಿದೆ. 
 

SCROLL FOR NEXT