ಅರವಿಂದ್ ಕೇಜ್ರಿವಾಲ್ 
ದೇಶ

ಕೇಜ್ರಿವಾಲ್ ರನ್ನು ಬಂಧಿಸಿದರೂ ಅವರೇ ಸಿಎಂ ಆಗಿ ಮುಂದುವರಿಯಬೇಕು: ಆಪ್ ಶಾಸಕರ ಆಗ್ರಹ

ಯಾವುದೇ ತನಿಖಾ ಸಂಸ್ಥೆಯಿಂದ ಬಂಧಿಸಲ್ಪಟ್ಟರೂ ದೆಹಲಿ ಮುಖ್ಯಮಂತ್ರಿಯಾಗಿ ಅರವಿಂದ್ ಕೇಜ್ರಿವಾಲ್ ಅವರನ್ನು ಮುಂದುವರಿಸಬೇಕು ಎಂದು ಪಕ್ಷದ ಎಲ್ಲಾ ಶಾಸಕರು ಒತ್ತಾಯಿಸಿರುವುದಾಗಿ ಎಎಪಿ ಸೋಮವಾರ ತಿಳಿಸಿದೆ.

ನವದೆಹಲಿ: ಯಾವುದೇ ತನಿಖಾ ಸಂಸ್ಥೆಯಿಂದ ಬಂಧಿಸಲ್ಪಟ್ಟರೂ ದೆಹಲಿ ಮುಖ್ಯಮಂತ್ರಿಯಾಗಿ ಅರವಿಂದ್ ಕೇಜ್ರಿವಾಲ್ ಅವರನ್ನು ಮುಂದುವರಿಸಬೇಕು ಎಂದು ಪಕ್ಷದ ಎಲ್ಲಾ ಶಾಸಕರು ಒತ್ತಾಯಿಸಿರುವುದಾಗಿ ಎಎಪಿ ಸೋಮವಾರ ತಿಳಿಸಿದೆ.

ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಿ ಎಂದು ಕಳೆದ ವಾರ ಜಾರಿ ನಿರ್ದೇಶನಾಲಯ ದೆಹಲಿ ಸಿಎಂ ಕೇಜ್ರಿವಾಲ್ ಅವರಿಗೆ ಸಮನ್ಸ್ ಜಾರಿ ಮಾಡಿತ್ತು. ಆದರೆ ಇದು "ರಾಜಕೀಯ ಪ್ರೇರಿತ" ಎಂದ ಕೇಜ್ರಿವಾಲ್ ಅವರು ವಿಚಾರಣೆಗೆ ಗೈರು ಆಗಿದ್ದಾರೆ.

ಪಕ್ಷದ ಸಚಿವರು ಮತ್ತು ಮುಖಂಡರ ವಿರುದ್ಧ ಕೇಂದ್ರ ತನಿಖಾ ಸಂಸ್ಥೆಗಳ ಇತ್ತೀಚಿನ ಕ್ರಮಗಳ ಬಗ್ಗೆ ತೀವ್ರ ಆಕ್ರೋಶ ಆಪ್ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು, ಸೋಮವಾರ ಶಾಸಕರ ಸಭೆ ಕರೆದಿದ್ದರು.

ಸಭೆಯ ನಂತರ ಮಾತನಾಡಿದ ದೆಹಲಿ ಸಚಿವ ಸೌರಭ್ ಭಾರದ್ವಾಜ್ ಅವರು, ಸಭೆಯಲ್ಲಿದ್ದ ಎಲ್ಲಾ ಶಾಸಕರು, ಕೇಜ್ರಿವಾಲ್ ಅವರಿಗೆ ಸರ್ಕಾರ ನಡೆಸಲು ದೆಹಲಿ ಜನ ಆದೇಶ ನೀಡಿರುವುದರಿಂದ ಅವರನ್ನು ಬಂಧಿಸಿದರೂ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು ಎಂದು ಆಗ್ರಹಿಸಿದ್ದಾರೆ.

ಸಭೆಗಳಿಗಾಗಿ ಅಧಿಕಾರಿಗಳು ಸಹ ಜೈಲಿಗೆ ಹೋಗುತ್ತಾರೆ ಮತ್ತು "ನಮ್ಮನ್ನು ಕರೆದರೆ ನಾವು ಸಹ ಸಂತೋಷದಿಂದ ಜೈಲಿಗೆ ಹೋಗಿ ಸಭೆಯಲ್ಲಿ ಭಾಗವಹಿಸುತ್ತೇವೆ" ಎಂದು ಭಾರದ್ವಾಜ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT