ದೇಶ

ಛತ್ತೀಸ್‌ಗಢ ವಿಧಾನಸಭೆ ಚುನಾವಣೆಗೆ ಮತದಾನ: ಸುಕ್ಮಾದಲ್ಲಿ ಐಇಡಿ ಸ್ಫೋಟ; ಸಿಆರ್‌ಪಿಎಫ್ ಕಮಾಂಡೋಗೆ ಗಾಯ

Shilpa D

ರಾಯ್ಪುರ: ಛತ್ತೀಸ್‌ಗಢ ವಿಧಾನಸಭೆ ಚುನಾವಣೆಗೆ ಮೊದಲ ಹಂತದ ಮತದಾನ ಇಂದು ಬೆಳಿಗ್ಗೆ ಆರಂಭವಾಗಿದೆ. ಈ ನಡುವೆ ಸುಕ್ಮಾ ಜಿಲ್ಲೆಯಲ್ಲಿ ನಕ್ಸಲರು ನಡೆಸಿದ ಐಇಡಿ ಸ್ಫೋಟದಲ್ಲಿ ಓರ್ವ ಕೋಬ್ರಾ ಕಮಾಂಡೊ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತದಾನದ ಸಂದರ್ಭದಲ್ಲಿ ಭದ್ರತೆಯನ್ನು ಏರ್ಪಡಿಸಲು ಕೇಂದ್ರೀಯ ಮೀಸಲು ಪೊಲೀಸ್‌ ಪಡೆ (ಸಿಆರ್‌ಪಿಎಫ್‌) ಮತ್ತು ಕಮಾಂಡೊ ಬೆಟಾಲಿಯನ್ ಫಾರ್ ರೆಸೊಲ್ಯೂಟ್ ಆ್ಯಕ್ಷನ್ (ಕೋಬ್ರಾ) 206ನೇ ತುಕಡಿಯ ಜಂಟಿ ತಂಡವು ಟೊಂಡಮಾರ್ಕ ಕ್ಯಾಂಪ್‌ನಿಂದ ಎಲ್ಮಗುಂಡ ಗ್ರಾಮದಲ್ಲಿ ಗಸ್ತು ತಿರುಗುತ್ತಿದ್ದ ಸಂದರ್ಭದಲ್ಲಿ ಈ ಸ್ಫೋಟ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಕ್ಸಲರು ಆಳವಡಿಸಿದ್ದ ಐಇಡಿ ಸ್ಫೋಟಗೊಂಡು ಕೋಬ್ರಾ ಕಮಾಂಡೊ, ಇನ್‌ಸ್ಪೆಕ್ಟರ್ ಶ್ರೀಕಾಂತ್ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊಂಟ ವಿಧಾನಸಭೆ ಕ್ಷೇತ್ರಕ್ಕೆ ಸೇರಿದ ಪ್ರದೇಶ ಇದಾಗಿದೆ ಛತ್ತೀಸಗಢ ವಿಧಾನಸಭೆಗೆ ಮೊದಲ ಹಂತದಲ್ಲಿ 20 ಸ್ಥಾನಗಳಿಗೆ ಇಂದು ಚುನಾವಣೆ ನಡೆಯುತ್ತಿದೆ. ಭದ್ರತೆಗಾಗಿ 25,249 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

90 ಸದಸ್ಯ ಬಲದ ರಾಜ್ಯ ವಿಧಾನಸಭೆಗೆ ಎರಡು ಹಂತದ ಚುನಾವಣೆಯ ಮೊದಲ ಹಂತದಲ್ಲಿ ಮಂಗಳವಾರ ಮತದಾನ ನಡೆಯುತ್ತಿರುವ 20 ಕ್ಷೇತ್ರಗಳ ಪೈಕಿ ಈ ಪ್ರದೇಶವು ಕೊಂಟಾ ವಿಧಾನಸಭಾ ವಿಭಾಗದ ಅಡಿಯಲ್ಲಿ ಬರುತ್ತದೆ.

SCROLL FOR NEXT