ಮುಖ್ಯಮಂತ್ರಿ ನಿತೀಶ್ ಕುಮಾರ್, ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ 
ದೇಶ

ಬಿಹಾರ ಜಾತಿ ಸಮೀಕ್ಷೆಯ ಆಧಾರದ ಮೇಲೆ SC, ST ಮತ್ತು OBC ಕೋಟಾ ಹೆಚ್ಚಳ: ನಿತೀಶ್ ಕುಮಾರ್

ಬಿಹಾರ ಸರ್ಕಾರ ಇತ್ತೀಚಿಗೆ ನಡೆಸಿದ ಜಾತಿ ಸಮೀಕ್ಷೆಯ ಆಧಾರದ ಮೇಲೆ ರಾಜ್ಯ ಸರ್ಕಾರಿ ಉದ್ಯೋಗದಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಇತರ ಹಿಂದುಳಿದ ವರ್ಗ(ಒಬಿಸಿ), ಪರಿಶಿಷ್ಟ ಜಾತಿ(ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಗಳ(ಎಸ್‌ಟಿ) ಮೀಸಲಾತಿಯನ್ನು...

ಪಾಟ್ನ: ಬಿಹಾರ ಸರ್ಕಾರ ಇತ್ತೀಚಿಗೆ ನಡೆಸಿದ ಜಾತಿ ಸಮೀಕ್ಷೆಯ ಆಧಾರದ ಮೇಲೆ ರಾಜ್ಯ ಸರ್ಕಾರಿ ಉದ್ಯೋಗದಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಇತರ ಹಿಂದುಳಿದ ವರ್ಗ(ಒಬಿಸಿ), ಪರಿಶಿಷ್ಟ ಜಾತಿ(ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಗಳ(ಎಸ್‌ಟಿ) ಮೀಸಲಾತಿಯನ್ನು ಹೆಚ್ಚಿಸುವ ಮಹತ್ವದ ಪ್ರಸ್ತಾಪವನ್ನು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮಂಗಳವಾರ ಮಾಡಿದ್ದಾರೆ. 

ಪ್ರಸ್ತುತ ನಡೆಯುತ್ತಿರುವ ವಿಧಾನಸಭೆ ಅಧಿವೇಶನದಲ್ಲಿ ಮೀಸಲಾತಿ ಹೆಚ್ಚಳ ಸಂಬಂಧ ಮಸೂದೆ ಮಂಡಿಸಲಾಗುವುದು ಎಂದು ಬಿಹಾರ ಸಿಎಂ ತಿಳಿಸಿದ್ದಾರೆ.

"ಎಸ್‌ಸಿ ಮತ್ತು ಎಸ್‌ಟಿ ಸೇರಿ ಪ್ರಸ್ತುತ ಶೇ.17 ರಷ್ಟು ಮೀಸಲಾತಿ ನೀಡಲಾಗುತ್ತಿದೆ. ಅದನ್ನು ಶೇಕಡಾ 22 ಕ್ಕೆ ಹೆಚ್ಚಿಸಬೇಕು. ಅದೇ ರೀತಿ ಒಬಿಸಿ ಮೀಸಲಾತಿ ಪ್ರಸ್ತುತ ಶೇಕಡಾ 50 ರಿಂದ ಶೇಕಡಾ 65 ಕ್ಕೆ ಏರಿಸಬೇಕು" ಎಂದು ನಿತೀಶ್ ಕುಮಾರ್ ಹೇಳಿದ್ದಾರೆ.

OBCಗಳು ಹಾಗೂ ಅತ್ಯಂತ ಹಿಂದುಳಿದ ವರ್ಗಗಳ(EBC) ಮೀಸಲಾತಿಯನ್ನು ಶೇ. 50 ರಿಂದ ಶೇ. 65ಕ್ಕೆ ಹೆಚ್ಚಿಸುವುದು ರಾಜಕೀಯವಾಗಿ ಅತ್ಯಂತ ಮಹತ್ವದ್ದಾಗಿದೆ. 

ಅಕ್ಟೋಬರ್ 2, 2023 ರಂದು ಬಿಡುಗಡೆಯಾದ ರಾಜ್ಯ ಸರ್ಕಾರದ ಜಾತಿ ಆಧಾರಿತ ಸಮೀಕ್ಷೆಯ ಪ್ರಕಾರ, ಒಬಿಸಿಗಳು ಮತ್ತು ಇಬಿಸಿಗಳು ಒಟ್ಟಾರೆಯಾಗಿ ಬಿಹಾರದ ಜನಸಂಖ್ಯೆಯ ಶೇಕಡಾ 60 ಕ್ಕಿಂತ ಹೆಚ್ಚು ಇದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

40 ಲಕ್ಷ ರೂ ಸಂಬಳ, ದಿಢೀರ್ ಕೆಲಸದಿಂದ ವಜಾ; 1.4 ಕೋಟಿ ಮೌಲ್ಯದ ಮನೆ EMI ತೀರಿಸಲು Rapido ಚಾಲಕನಾದ ಟೆಕ್ಕಿ!

ಇರಾನ್ ಜೊತೆಗಿನ 21 ಗಂಟೆಗಳ ಶಾಂತಿ ಮಾತುಕತೆ; ಡೊನಾಲ್ಡ್ ಟ್ರಂಪ್‌ಗೆ 'ಡಜನ್‌ಗಟ್ಟಲೆ' ಬಾರಿ ಫೋನ್ ಕರೆ ಮಾಡಿದ ಜೆಡಿ ವ್ಯಾನ್ಸ್!

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

SCROLL FOR NEXT