ಸಿಆರ್ ಪಿಎಫ್ ಸಿಬ್ಬಂದಿ 
ದೇಶ

ಛತ್ತೀಸ್‌ಗಢ ಚುನಾವಣೆ: ಮತಗಟ್ಟೆ ಬಳಿ ಪೊಲೀಸರ ಮೇಲೆ ನಕ್ಸಲರ ಗುಂಡಿನ ದಾಳಿ

ಛತ್ತೀಸ್‌ಗಢದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದ್ದು, ರಾಜ್ಯದ ಬಂದಾ ಮತಗಟ್ಟೆ ಬಳಿ ನಿಯೋಜಿಸಿದ ಜಿಲ್ಲಾ ಮೀಸಲು ಪಡೆ ಸಿಬ್ಬಂದಿ ಮೇಲೆ ನಕ್ಸಲರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಸುಕ್ಮಾ: ಛತ್ತೀಸ್‌ಗಢದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದ್ದು, ರಾಜ್ಯದ ಬಂದಾ ಮತಗಟ್ಟೆ ಬಳಿ ನಿಯೋಜಿಸಿದ ಜಿಲ್ಲಾ ಮೀಸಲು ಪಡೆ ಸಿಬ್ಬಂದಿ ಮೇಲೆ ನಕ್ಸಲರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಭದ್ರತಾ ಪಡೆಗಳು ಕೂಡಾ ಪ್ರತಿದಾಳಿ ನಡೆಸಿದ್ದು, ನಕ್ಸಲರು ತಮ್ಮ ದಾಳಿ ನಿಲ್ಲಿಸುವ ಮುನ್ನ 10 ನಿಮಿಷಗಳ ಕಾಲ ಗುಂಡಿನ ಚಕಮಕಿ ನಡೆಸಿದರು ಎಂದು ಸುಕ್ಮಾ ಪೊಲೀಸರು ತಿಳಿಸಿದ್ದಾರೆ.

ಜಿಲ್ಲಾ ಮೀಸಲು ಪಡೆ ಸಿಬ್ಬಂದಿ ಬಂದಾ ಮತಗಟ್ಟೆಯಿಂದ ಸುಮಾರು 2 ಕಿಲೋಮೀಟರ್‌ಗಳಷ್ಟು ದೂರದಲ್ಲಿ ನಿಂತಿದ್ದರಿಂದ ನಕ್ಸಲರು ಗುಂಡಿನ ದಾಳಿ ನಡೆಸಿದ್ದಾರೆ. ಗುಂಡಿನ ಚಕಮಕಿ ವೇಳೆ ಎಲ್ಲಾ ಯೋಧರು ಸುರಕ್ಷಿತವಾಗಿದ್ದು, ಮತದಾನ ಪ್ರಕ್ರಿಯೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿರುವುದಾಗಿ ಎಎನ್ ಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಛತ್ತೀಸ್‌ಗಢ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನದಲ್ಲಿ 20 ಕ್ಷೇತ್ರಗಳಲ್ಲಿ ಮಧ್ಯಾಹ್ನ 1 ಗಂಟೆಯವರೆಗೆ ಶೇಕಡಾ 44 ಕ್ಕಿಂತ ಹೆಚ್ಚು ಮತದಾನವಾಗಿದೆ ಎಂದು ಚುನಾವಣಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮತ್ತೊಂದು ಘಟನೆಯಲ್ಲಿ ನಕ್ಸಲೀಯರು ನಡೆಸಿದ ಐಇಡಿ ಸ್ಫೋಟದಲ್ಲಿ ಸಿಆರ್‌ಪಿಎಫ್ ಕಮಾಂಡೋ ಗಾಯಗೊಂಡಿದ್ದಾರೆ. ಚುನಾವಣಾ ಸಮಯದಲ್ಲಿ ಭದ್ರತೆ ಖಚಿತಪಡಿಸಿಕೊಳ್ಳಲು ಸಿಆರ್ ಪಿಎಫ್ ಆ ಪ್ರದೇಶದಲ್ಲಿ ಮಹತ್ವದ ಕಾರ್ಯಾಚರಣೆ ಕೈಗೊಳ್ಳುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT