ಎಲ್.ಕೆ.ಅಡ್ವಾಣಿ 
ದೇಶ

'ಬಿಜೆಪಿ ಭೀಷ್ಮ' ಅಡ್ವಾಣಿಗೆ 96ನೇ ಜನ್ಮದಿನ: ಪ್ರಧಾನಿ ಮೋದಿ, ಅಮಿತ್ ಶಾ ಶುಭಾಶಯ

ಬಿಜೆಪಿ ಹಿರಿಯ ನಾಯಕ  ನಾಯಕ ಎಲ್ ಕೆ ಅಡ್ವಾಣಿ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿ ಗಣ್ಯರುಜನ್ಮದಿನದ ಶುಭಾಶಯ ಕೋರಿದ್ದಾರೆ.

ನವದೆಹಲಿ: ಬಿಜೆಪಿ ಹಿರಿಯ ನಾಯಕ  ನಾಯಕ ಎಲ್ ಕೆ ಅಡ್ವಾಣಿ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿ ಗಣ್ಯರುಜನ್ಮದಿನದ ಶುಭಾಶಯ ಕೋರಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ (ಟ್ವಿಟರ್)ನಲ್ಲಿ ಪೋಸ್ಟ್ ಮಾಡಿರುವ ಮೋದಿಯವರು, “ಎಲ್‌ಕೆ ಅಡ್ವಾಣಿ ಜಿ ಅವರಿಗೆ ಜನ್ಮದಿನದ ಶುಭಾಶಯಗಳು. ಅವರು ನಮ್ಮ ರಾಷ್ಟ್ರವನ್ನು ಬಲಪಡಿಸಿದ ಸ್ಮರಣೀಯ ಕೊಡುಗೆಗಳನ್ನು ನೀಡಿದ ಸಮಗ್ರತೆ ಮತ್ತು ಸಮರ್ಪಣೆಗೆ ದಾರಿದೀಪವಾಗಿದ್ದಾರೆ. ಅವರ ದೂರದೃಷ್ಟಿಯ ನಾಯಕತ್ವವು ರಾಷ್ಟ್ರೀಯ ಪ್ರಗತಿ ಮತ್ತು ಏಕತೆಯನ್ನು ಹೆಚ್ಚಿಸಿದೆ” ಎಂದು ಹೇಳಿದ್ದಾರೆ.

“ನಾನು ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯವನ್ನು ಬಯಸುತ್ತೇನೆ. ರಾಷ್ಟ್ರ ನಿರ್ಮಾಣದ ಕಡೆಗೆ ಅವರ ಪ್ರಯತ್ನಗಳು 140 ಕೋಟಿ ಭಾರತೀಯರಿಗೆ ಸ್ಫೂರ್ತಿ ನೀಡುತ್ತಲೇ ಇರುತ್ತವೆ” ಎಂದು ತಿಳಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೂಡ ಹಿರಿಯ ನಾಯಕನಿಗೆ ಶುಭ ಹಾರೈಸಿದ್ದಾರೆ ಮತ್ತು 96 ವರ್ಷ ವರ್ಷದ ಅಡ್ವಾಣಿ ಎಲ್ಲಾ ಬಿಜೆಪಿ ಕಾರ್ಯಕರ್ತರಿಗೆ ಸ್ಫೂರ್ತಿಯ ಮೂಲವಾಗಿದ್ದಾರೆ ಎಂದು ಹೇಳಿದ್ದಾರೆ.

“ಗೌರವಾನ್ವಿತ ಲಾಲ್ ಕೃಷ್ಣ ಅಡ್ವಾಣಿ ಜೀ ಅವರಿಗೆ ಜನ್ಮದಿನದ ಶುಭಾಶಯಗಳು. ಅಡ್ವಾಣಿ ಜೀ ಅವರು ತಮ್ಮ ಅವಿರತ ಶ್ರಮ ಮತ್ತು ಸಂಘಟನಾ ಕೌಶಲ್ಯದಿಂದ ಪಕ್ಷವನ್ನು ಬೆಳೆಸಲು ಮತ್ತು ಕಾರ್ಯಕರ್ತರನ್ನು ಕಟ್ಟಲು ಶ್ರಮಿಸಿದ್ದಾರೆ. ಬಿಜೆಪಿಯ ಪ್ರಾರಂಭದಿಂದ ಅಧಿಕಾರಕ್ಕೆ ಬರುವವರೆಗೆ ಅಡ್ವಾಣಿ ಜಿ ಅವರು ಅನುಪಮ ಕೊಡುಗೆ ನೀಡಿದ್ದಾರೆ. ಅವರು ಪ್ರತಿಯೊಬ್ಬ ಕಾರ್ಯರ್ತನಿಗೆ ಸ್ಫೂರ್ತಿ. ಅವರ ದೀರ್ಘಾಯುಷ್ಯ ಮತ್ತು ಉತ್ತಮ ಆರೋಗ್ಯಕ್ಕಾಗಿ ನಾನು ದೇವರನ್ನು ಪ್ರಾರ್ಥಿಸುತ್ತೇನೆ” ಎಂದು ಶಾ ಟ್ವೀಟ್ ಮಾಡಿದ್ದಾರೆ.

ಲಾಲ್‌ ಕೃಷ್ಣ ಅಡ್ವಾಣಿ ಎಲ್‌ಕೆ ಅಡ್ವಾಣಿ ಅವರ ಪೂರ್ಣ ಹೆಸರು. ಇವರು ನವೆಂಬರ್‌ 8, 1927ರಲ್ಲಿ ಸ್ವಾತಂತ್ರ್ಯ ಪೂರ್ವ ಭಾರತದ ಸಿಂಧ್‌ ಪಾಂತ್ಯದ ಗೊರೆಗಾಂವ್‌ನಲ್ಲಿ ಜನಿಸಿದರು. ಶ್ರೀ ಕಿಶಿಂಚಂದ್‌ ಅಡ್ವಾಣಿ ಹಾಗೂ ಜ್ಞಾನಿದೇವಿ ಇವರ ತಂದೆ-ತಾಯಿ. ಇವರಿಗೆ ಶೀಲಾ ಎಂಬ ಸಹೋದರಿ ಇದ್ದಾರೆ. ಅಡ್ವಾಣಿ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ದ ಮೂಲಕ ಭಾರತದ ರಾಜಕೀಯ ರಂಗಕ್ಕೆ ಧುಮುಕಿದವರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

SCROLL FOR NEXT