ದೇಶ

ತೆಲಂಗಾಣ: ಕಾಂಗ್ರೆಸ್, ಬಿಆರ್ ಎಸ್ ಕಾರ್ಯಕರ್ತರ ನಡುವೆ ಭುಗಿಲೆದ್ದ ಘರ್ಷಣೆ, ಕಲ್ಲು ತೂರಾಟ- ವಿಡಿಯೋ

Nagaraja AB

ಹೈದರಾಬಾದ್‌: ತೆಲಂಗಾಣ ವಿಧಾನಸಭಾ ಚುನಾವಣೆಗೆ ಕೆಲ ದಿನಗಳು ಬಾಕಿಯಿರುವಂತೆಯೇ, ಬಿಆರ್ ಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ಭುಗಿಲೆದ್ದಿದೆ.

ಇಬ್ರಾಹಿಂಪಟ್ಟಣಂನಲ್ಲಿ ಗುರುವಾರ ಮಧ್ಯಾಹ್ನ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ  ಪರಸ್ಪರ ಕಲ್ಲು ತೂರಾಟ ನಡೆದಿದೆ. ಈ ಘಟನೆಯಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳು ಮತ್ತು ಕೆಲವು ಕಾಂಗ್ರೆಸ್ ಕಾರ್ಯಕರ್ತರು ಗಾಯಗೊಂಡಿದ್ದಾರೆ.

ಕಾಂಗ್ರೆಸ್‌ನಿಂದ ಮಾಲರೆಡ್ಡಿ ರಂಗಾರೆಡ್ಡಿ ಮತ್ತು ಬಿಆರ್‌ಎಸ್‌ನಿಂದ ಮಂಚಿರೆಡ್ಡಿ ಕಿಶನ್ ರೆಡ್ಡಿ ನಾಮಪತ್ರ ಸಲ್ಲಿಸಿದ ನಂತರ ಎರಡೂ ಕಡೆಯವರು ಪರಸ್ಪರ ಕಲ್ಲು ತೂರಾಟ ನಡೆದಿದೆ. ತಕ್ಷಣವೇ ಕಾರ್ಯಪ್ರವೃತ್ತರಾದ ಹೈದರಾಬಾದ್ ಪೊಲೀಸರು ಗುಂಪನ್ನು ಚದುರಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದರು. ಈ ಪ್ರದೇಶದಲ್ಲಿ ಯಾವುದೇ ಕರ್ಫ್ಯೂ ಅಥವಾ ನಿರ್ಬಂಧಗಳನ್ನು ವಿಧಿಸಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ತೆಲಂಗಾಣದಲ್ಲಿ ನವೆಂಬರ್ 30 ರಂದು ಚುನಾವಣೆ ನಡೆಯಲಿದ್ದು,  ಡಿಸೆಂಬರ್ 3 ರಂದು ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ. ಅಂದು 119 ಸ್ಥಾನಗಳಿಗೆ ಕಣದಲ್ಲಿರುವ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. 

SCROLL FOR NEXT