ದೇಶ

ಉದ್ಯೋಗಕ್ಕಾಗಿ ಭೂ ಹಗರಣ: ಲಾಲು ಪ್ರಸಾದ್ ಕುಟುಂಬದ ಆಪ್ತನನ್ನು ಬಂಧಿಸಿದ ಇಡಿ

Lingaraj Badiger

ನವದೆಹಲಿ: ಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ(ಇಡಿ) ಶುಕ್ರವಾರ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಮತ್ತು ಅವರ ಪುತ್ರ ತೇಜಸ್ವಿ ಯಾದವ್ ಅವರ ಆಪ್ತ ಎಂದು ಹೇಳಲಾದ ಅಮಿತ್ ಕತ್ಯಾಲ್ ಅವರನ್ನು ಬಂಧಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಸಮನ್ಸ್ ಜಾರಿ ಮಾಡಿದರೂ ಸುಮಾರು ಎರಡು ತಿಂಗಳಿನಿಂದ ಇಡಿ ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿದ್ದ ಕತ್ಯಾಲ್ ಅವರನ್ನು ಇಂದು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ ಅಡಿಯಲ್ಲಿ ಕತ್ಯಾಲ್ ಅವರನ್ನು ಇಡಿ ಬಂಧಿಸಿದೆ ಎಂದು ಅವರು ತಿಳಿಸಿದ್ದಾರೆ.

ED ಪ್ರಕಾರ, ಕತ್ಯಾಲ್ ಅವರು ರಾಷ್ಟ್ರೀಯ ಜನತಾ ದಳದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ "ಆಪ್ತ ಸಹವರ್ತಿ" ಮತ್ತು AK ಇನ್ಫೋಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್‌ನ ಮಾಜಿ ನಿರ್ದೇಶಕರಾಗಿದ್ದಾರೆ.

ಲಾಲು ಪ್ರಸಾದ್ ಯಾದವ್ ಅವರು 2004 ಮತ್ತು 2009 ರ ಅವಧಿಯಲ್ಲಿ ರೈಲ್ವೆ ಸಚಿವರಾಗಿದ್ದಾಗ ಅವರ ಕುಟುಂಬಕ್ಕೆ ಉಡುಗೊರೆಯಾಗಿ ನೀಡಿದ ಅಥವಾ ಮಾರಾಟ ಮಾಡಿದ ಜಮೀನುಗಳಿಗೆ ಪ್ರತಿಯಾಗಿ ರೈಲ್ವೆಯಲ್ಲಿ ನೇಮಕಾತಿ ಮಾಡಲಾಗಿದೆ. ಜಾಹೀರಾತು ನೀಡದೆ ಅಥವಾ ಸಾರ್ವಜನಿಕರ ಗಮನಕ್ಕೂ ತರದೆ ತಮ್ಮ ನೆಚ್ಚಿನ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲಾಗಿದೆ. ಈ ನೇಮಕಾತಿಗಾಗಿ ಭಾರತೀಯ ರೈಲ್ವೆಯ ನಿಯಮಗಳು ಮತ್ತು ಕಾರ್ಯವಿಧಾನಗಳನ್ನು ಉಲ್ಲಂಘಿಸಲಾಗಿದೆ ಎಂದು ಸಿಬಿಐ ಆರೋಪಿಸಿದೆ.

SCROLL FOR NEXT