ರೇವಂತ್ ರೆಡ್ಡಿ 
ದೇಶ

500 ರು. ಗೆ ಗ್ಯಾಸ್ ಸಿಲಿಂಡರ್; ಅತ್ತೆಗೆ 4 ಸಾವಿರ, ಸೊಸೆಗೆ ಎರಡೂವರೆ ಸಾವಿರ: ಆರು ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್

ಕರ್ನಾಟಕ ವಿಧಾಸಭಾ ಚುನಾವಣೆಯಲ್ಲಿ ಐದು ಗ್ಯಾರಂಟಿಗಳ ಮೂಲಕ ಗೆಲವು ಸಾಧಿಸಿ ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಮುಖಭಂಗ ಮಾಡಿದ ಕಾಂಗ್ರೆಸ್‌ ಈಗ ಅದೇ ತಂತ್ರವನ್ನು ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲೂ ಪ್ರಯೋಗಿಸುತ್ತಿದೆ. 

ಹೈದರಾಬಾದ್: ಕರ್ನಾಟಕ ವಿಧಾಸಭಾ ಚುನಾವಣೆಯಲ್ಲಿ ಐದು ಗ್ಯಾರಂಟಿಗಳ ಮೂಲಕ ಗೆಲವು ಸಾಧಿಸಿ ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಮುಖಭಂಗ ಮಾಡಿದ ಕಾಂಗ್ರೆಸ್‌ ಈಗ ಅದೇ ತಂತ್ರವನ್ನು ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲೂ ಪ್ರಯೋಗಿಸುತ್ತಿದೆ.

ತೆಲಂಗಾಣಕ್ಕೆ ಆರು ಗ್ಯಾರಂಟಿ'ಗಳನ್ನು ಘೋಷಿಸಿರುವ ಕಾಂಗ್ರೆಸ್, ಕರ್ನಾಟಕದಲ್ಲಿ ನೀಡಿದ್ದ ಭರವಸೆಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿರುವುದನ್ನು ಮತದಾರರ ಮುಂದಿಡಲು ಪ್ರಯತ್ನಿಸುತ್ತಿದೆ.

ಕರ್ನಾಟಕ ಮಾದರಿಯನ್ನು ಉತ್ತೇಜಿಸುವ ಭಾಗವಾಗಿ ಕಾಂಗ್ರೆಸ್, ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ನೆರೆಯ ರಾಜ್ಯದ ಕೆಲವು ನಾಯಕರೊಂದಿಗೆ ಹಲವಾರು ಸಭೆಗಳು, ರೋಡ್ ಶೋಗಳನ್ನು ಯೋಜಿಸಿದೆ.

ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಆರು ಗ್ಯಾರಂಟಿಗಳನ್ನು ಘೋಷಿಸಿದ್ದಾರೆ.  ಕಾಮಾರೆಡ್ಡಿ ಕ್ಷೇತ್ರದಲ್ಲಿ ರೇವಂತ್ ರೆಡ್ಡಿ ಪರ ಸಿಎಂ ಸಿದ್ದರಾಮಯ್ಯ ಪ್ರಚಾರ ನಡೆಸಿದ್ರು. ಸಿಎಂ ಕೆಸಿಆರ್ ವಿರುದ್ಧ ರೇವಂತ್ ಗೆಲ್ಲುವುದು ಖಚಿತ ಎಂದು ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದ ನೂರು ದಿನದಲ್ಲಿ ಗ್ಯಾರಂಟಿಗಳನ್ನು ಜಾರಿ ಮಾಡಲಾಗುತ್ತೆ ಎಂಬ ಭರವಸೆಯನ್ನು ಸಿಎಂ ಸಿದ್ದರಾಮಯ್ಯ ನೀಡಿದರು. ಕೆಸಿಆರ್ ಕರ್ನಾಟಕಕ್ಕೆ ಬಂದು ಗ್ಯಾರಂಟಿಗಳ ಜಾರಿಯನ್ನು ನೋಡಲಿ ಎಂದು ಸವಾಲ್ ಹಾಕಿದ್ರು.

ತೆಲಂಗಾಣದಲ್ಲಿ ಕಾಂಗ್ರೆಸ್‍ನಲ್ಲಿ ಆರು ಗ್ಯಾರಂಟಿ..!
ಗ್ಯಾರಂಟಿ 1 – ಪ್ರತಿ ತಿಂಗಳು ಅತ್ತೆಗೆ 4,000 ರೂ., ಸೊಸೆಗೆ 2,500 ರೂ.
ಗ್ಯಾರಂಟಿ 2 – ಪ್ರತಿ ಹೆಣ್ಣುಮಗುವಿನ ಖಾತೆಗೆ ಪ್ರತಿ ತಿಂಗಳು 2,500 ರೂ. (ಮಹಾಲಕ್ಷ್ಮಿ ಯೋಜನೆ)
ಗ್ಯಾರಂಟಿ 3 – ಪಿಂಚಣಿ ಮೊತ್ತ 2,000 ರೂ.ನಿಂದ 4,000 ರೂ.ಗೆ ಹೆಚ್ಚಳ
ಗ್ಯಾರಂಟಿ 4 – 500 ರೂಪಾಯಿಗೆ ಒಂದು ಗ್ಯಾಸ್ ಸಿಲಿಂಡರ್
ಗ್ಯಾರಂಟಿ 5 – ಮನೆ ನಿರ್ಮಾಣಕ್ಕೆ 5 ಲಕ್ಷ ರೂ. ನೆರವು
ಗ್ಯಾರಂಟಿ 6 – ಬಡವರಿಗೆ 200 ಯೂನಿಟ್‍ವರೆಗೂ ಉಚಿತ ವಿದ್ಯುತ್

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

IPL 2026: MI vs RCB; ವಾಂಖೆಡೆ ಕ್ರೀಡಾಂಗಣದಲ್ಲಿ ಇತಿಹಾಸ ಬರೆದ ಬೆಂಗಳೂರು, ಅತ್ಯಧಿಕ ಮೊತ್ತ!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

SCROLL FOR NEXT