ದೇಶ

ಕಾಂಗ್ರೆಸ್, ಬಿಆರ್‌ಎಸ್ ಕಾರ್ಯಕರ್ತರ ನಡುವೆ ಘರ್ಷಣೆ: ಬಿಆರ್‌ಎಸ್ ಶಾಸಕ ಆಸ್ಪತ್ರೆಗೆ ದಾಖಲು

Nagaraja AB

ನಾಗರಕರ್ನೂಲ್: ತೆಲಂಗಾಣ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿರುವಂತೆಯೇ, ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆಯುತ್ತಿದೆ. 

ನಾಗರಕರ್ನೂಲ್ ಜಿಲ್ಲೆಯ ಅಚಂಪೇಟೆ ಪಟ್ಟಣದಲ್ಲಿ ಶನಿವಾರ ರಾತ್ರಿ 11 ಗಂಟೆಯಲ್ಲಿ ನಡೆದ ಘರ್ಷಣೆಯಲ್ಲಿ ಆಡಳಿತ ಪಕ್ಷದ ಶಾಸಕ ಗುವ್ವಲ ಬಾಲರಾಜು ಗಾಯಗೊಂಡಿದ್ದಾರೆ ಮತ್ತು ಇತರರೊಂದಿಗೆ ಹೈದರಾಬಾದ್‌ನ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಶಾಸಕರು ಮತದಾರರಿಗೆ ಹಣ ಹಂಚುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ಶಂಕಿಸಿದ್ದಾರೆ. ಇದು ಮಾತಿನ ಚಕಮಕಿಗೆ ಕಾರಣವಾಗಿದ್ದು, ಘರ್ಷಣೆ ಉಂಟಾಗಿದೆ. ಕೆಲವು ಕಾಂಗ್ರೆಸ್ ಮುಖಂಡರು ಶಾಸಕರ ಮೇಲೆ ಹಲ್ಲೆಗೆ ಯತ್ನಿಸಿದರು ಎಂದು ಅಚ್ಚಂಪೇಟೆಯ ವೃತ್ತ ನಿರೀಕ್ಷಕ ಅನುದೀಪ್ ಹೇಳಿದ್ದಾರೆ. 

ಇನ್ನು ಪ್ರಕರಣ ದಾಖಲಿಸಿಕೊಳ್ಳಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶನಿವಾರ ಸಂಜೆ ಪ್ರಚಾರ ಮುಗಿಸಿ ಅಚಂಪೇಟೆ ಪಟ್ಟಣಕ್ಕೆ ಆಗಮಿಸಿದ್ದ ಹಾಲಿ ಬಿಆರ್‌ಎಸ್‌ ಶಾಸಕರ ಮೇಲೆ ಕೆಲ ಕಾಂಗ್ರೆಸ್‌ ಮುಖಂಡರು ಅಡ್ಡಿಪಡಿಸಿ ಹಲ್ಲೆಗೆ ಯತ್ನಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

SCROLL FOR NEXT