ಸಂಗ್ರಹ ಚಿತ್ರ 
ದೇಶ

ಕೇರಳ ಸರಣಿ ಬಾಂಬ್ ಸ್ಫೋಟ ಪ್ರಕರಣ: ಮತ್ತೊಬ್ಬ ಗಾಯಾಳು ಸಾವು, ಸಾವಿನ ಸಂಖ್ಯೆ 5ಕ್ಕೆ ಏರಿಕೆ

ಕೇರಳದ ಕ್ರಿಶ್ಚಿಯನ್ ಧಾರ್ಮಿಕ ಸಭೆಯಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿದೆ.

ಕೊಚ್ಚಿ: ಕೇರಳದ ಕ್ರಿಶ್ಚಿಯನ್ ಧಾರ್ಮಿಕ ಸಭೆಯಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿದೆ.

ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪ್ರದೀಪ್ ಎಂಬ ವ್ಯಕ್ತಿ ಇಂದು ಮೃತಪಟ್ಟಿದ್ದಾರೆ. ಘಟನೆ ಬಳಿಕ ಇವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗಿನ ಜಾವ ಮೃತಪಟ್ಟಿದ್ದಾರೆ.

ಎರ್ನಾಕುಲಂ ಜಿಲ್ಲೆಯ ಮಲಯತ್ತೂರ್‌ನ ಲಿಬಿನಾ ಎಂಬ 12 ವರ್ಷದ ಬಾಲಕಿ ಕೂಡ ಅಕ್ಟೋಬರ್ 30 ರಂದು ಕಲಮಸ್ಸೆರಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಳು. ನವೆಂಬರ್ 6 ರಂದು 61 ವರ್ಷದ ವೃದ್ಧ ಮಹಿಳೆ ಸಾವನ್ನಪ್ಪಿದ್ದರು. ಅಷ್ಟು ಮಾತ್ರವಲ್ಲದೆ ಘಟನೆ ನಡೆದ ದಿನವೇ ಇಬ್ಬರು ಮಹಿಳೆಯರು ಮೃತಪಟ್ಟಿದ್ದರು ಇದರೊಂದಿಗೆ ಸ್ಪೋಟದಲ್ಲಿ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.

ಕೇರಳದ ಕಲಮಸ್ಸೆರಿಯ ಅಂತಾರಾಷ್ಟ್ರೀಯ ಧಾರ್ಮಿಕ ಕೇಂದ್ರದಲ್ಲಿ ನಡೆದ ಬಹು ಸ್ಫೋಟಗಳ ಸಂದರ್ಭದಲ್ಲಿ 50 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಕೆಲವರಿಗೆ ಗಂಭೀರವಾಗಿ ಗಾಯವಾಗಿತ್ತು. ಸ್ಫೋಟ ನಡೆದ ಕೆಲವು ಗಂಟೆಗಳ ನಂತರ ಡೊಮಿನಿಕ್ ಮಾರ್ಟಿನ್ ಎಂಬ ವ್ಯಕ್ತಿ, ಸ್ಫೋಟಕ್ಕೆ ಹೊಣೆ ಹೊತ್ತುಕೊಂಡು ಪೊಲೀಸರಿಗೆ ಶರಣಾಗಿದ್ದ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel