ದೇಶ

ಈ ಹಬ್ಬ ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ, ಸಮೃದ್ಧಿ ತರಲಿ: ದೇಶದ ಜನತೆಗೆ ದೀಪಾವಳಿ ಶುಭಾಶಯ ಕೋರಿದ ಪ್ರಧಾನಿ ಮೋದಿ

Manjula VN

ನವದೆಹಲಿ: ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಸಂಭ್ರಮ ದೇಶದಾದ್ಯಂತ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ (ಟ್ವಿಟರ್)ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿಯವರು, "ಎಲ್ಲರಿಗೂ ದೀಪಾವಳಿಯ ಶುಭಾಶಯಗಳು. ಈ ವಿಶೇಷ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ, ಸಮೃದ್ಧಿ ಮತ್ತು ಆರೋಗ್ಯವನ್ನು ತರಲಿ ಎಂದು ಹೇಳಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೂಡ ದೇಶದ ಜನತೆಗೆ ದೀಪಾವಳಿ ಶುಭಾಶಯಗಳನ್ನು ಕೋರಿದ್ದಾರೆ.

ಬೆಳಕಿನ ಹಬ್ಬ ದೀಪಾವಳಿ ಭಾರತದಲ್ಲಿ ಅತ್ಯಂತ ಜನಪ್ರಿಯ ಹಬ್ಬವಾಗಿದೆ. ದೀಪಾವಳಿಯನ್ನು ಇಂದು (ಅಕ್ಟೋಬರ್ 24) ದೇಶಾದ್ಯಂತ ಆಚರಿಸಲಾಗುತ್ತಿದೆ. ದೀಪಾವಳಿಯ ಸಮಯದಲ್ಲಿ ಹಿಂದೂಗಳು ಆರೋಗ್ಯ, ಸಮೃದ್ಧಿ, ಸಂಪತ್ತು ಮತ್ತು ಸಂತೋಷಕ್ಕಾಗಿ ಲಕ್ಷ್ಮಿ ದೇವತೆ ಮತ್ತು ಗಣೇಶನನ್ನು ಪೂಜಿಸುತ್ತಾರೆ. ಈ ದಿನ ಕಾಳಿ ದೇವಿ ಮತ್ತು ಕುಬೇರನನ್ನೂ ಪೂಜಿಸಲಾಗುತ್ತದೆ.

SCROLL FOR NEXT