ಭೂಪೇಶ್ ಬಘೇಲ್ 
ದೇಶ

ಛತ್ತೀಸಗಢದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೇರಿದರೆ ಮಹಿಳೆಯರಿಗೆ ವಾರ್ಷಿಕ 15,000 ರೂ. ನೆರವು: ಭೂಪೇಶ್ ಬಘೇಲ್

ಛತ್ತೀಸಗಢದಲ್ಲಿ ಕಾಂಗ್ರೆಸ್ ಅಧಿಕಾರವನ್ನು ಉಳಿಸಿಕೊಂಡರೆ, ರಾಜ್ಯದಲ್ಲಿ ಮಹಿಳೆಯರಿಗೆ ವಾರ್ಷಿಕ 15,000 ರೂಪಾಯಿ ಆರ್ಥಿಕ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಭೂಪೇಶ್ ಬಘೇಲ್ ಭಾನುವಾರ ಹೇಳಿದ್ದಾರೆ.

ರಾಯ್ಪುರ: ಛತ್ತೀಸಗಢದಲ್ಲಿ ಕಾಂಗ್ರೆಸ್ ಅಧಿಕಾರವನ್ನು ಉಳಿಸಿಕೊಂಡರೆ, ರಾಜ್ಯದಲ್ಲಿ ಮಹಿಳೆಯರಿಗೆ ವಾರ್ಷಿಕ 15,000 ರೂಪಾಯಿ ಆರ್ಥಿಕ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಭೂಪೇಶ್ ಬಘೇಲ್ ಭಾನುವಾರ ಹೇಳಿದ್ದಾರೆ.

ನವೆಂಬರ್ 17ರಂದು ನಡೆಯಲಿರುವ ಛತ್ತೀಸ್‌ಗಢದ ಎರಡನೇ ಹಂತದ ಚುನಾವಣೆಗೆ ಮುಂಚಿತವಾಗಿ ಈ ಘೋಷಣೆ ಮಾಡಿದ್ದು, ವಿವಾಹಿತ ಮಹಿಳೆಯರಿಗೆ ವರ್ಷಕ್ಕೆ 12,000 ರೂಪಾಯಿಗಳನ್ನು ನೀಡುವ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿನ ಪ್ರತಿಪಕ್ಷ ಬಿಜೆಪಿಯ ಭರವಸೆಗೆ ಪ್ರತಿಯಾಗಿ ನೀಡಲಾಗಿದೆ.

ಇಂದು ದೀಪಾವಳಿಯ ಶುಭ ಸಂದರ್ಭದಲ್ಲಿ, ಮಾ ಲಕ್ಷ್ಮಿ ಜಿ ಮತ್ತು ಛತ್ತೀಸ್‌ಗಢ ಮಹತಾರಿ ಅವರ ಆಶೀರ್ವಾದದೊಂದಿಗೆ, ಮಹಿಳಾ ಸಬಲೀಕರಣಕ್ಕಾಗಿ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಘೇಲ್ ರಾಯ್ಪುರದಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಛತ್ತೀಸ್‌ಗಢದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ರಾಜ್ಯದ ಮಹಿಳೆಯರಿಗೆ ಛತ್ತೀಸಗಢ ಗೃಹ ಲಕ್ಷ್ಮಿ ಯೋಜನೆ ಅಡಿಯಲ್ಲಿ ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ವಾರ್ಷಿಕ 15,000 ರೂ.ಗಳ ಸಹಾಯವನ್ನು ಒದಗಿಸಲಾಗುವುದು ಎಂದು ಅವರು ಹೇಳಿದರು.

ಇದರೊಂದಿಗೆ, ಬಘೇಲ್ ರಾಜ್ಯದ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ್ದಾರೆ.

ರಾಜ್ಯದ ಒಟ್ಟು 90 ವಿಧಾನಸಭಾ ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಿಗೆ ನವೆಂಬರ್ 7ರಂದು ಮೊದಲ ಹಂತದ ಮತದಾನ ನಡೆದಿತ್ತು. ಉಳಿದ 70 ಸ್ಥಾನಗಳಿಗೆ ನವೆಂಬರ್ 17ರಂದು ಮತದಾನ ನಡೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯ ಸರ್ಕಾರದ 'ದ್ವೇಷ ಭಾಷಣ' ಮಸೂದೆಗೆ ಅಮಿತ್ ಶಾ ಅಡ್ಡಗಾಲು; ಅಸ್ತಿತ್ವದಲ್ಲಿರುವ ಕಾನೂನೇ ಸಾಕು: ಕೇಂದ್ರ

Video: 'ಕಾಂತಾರ' ಕೆಂಗಣ್ಣಿಗೆ ಗುರಿ, ಬಾಲಿವುಡ್​ನಿಂದ ಬ್ಯಾನ್; ಚಾಮುಂಡೇಶ್ವರಿಗೆ ತಲೆಬಾಗಿ ಕ್ಷಮೆಯಾಚಿಸಿದ ರಣವೀರ್ ಸಿಂಗ್!

IPL 2026: RCB vs GT ನಡುವಿನ ಕ್ವಾಲಿಫೈಯರ್ ಪಂದ್ಯಕ್ಕೆ ಮಳೆ ಆತಂಕ, ರಿಸರ್ವ್ ಡೇ ಕೂಡ ಇಲ್ಲ.. ಪಂದ್ಯ ರದ್ದಾದರೆ ಯಾರು ಫೈನಲ್ ಗೆ?

ಚೀನಾ ಏಕಪಕ್ಷೀಯ ನೀತಿಗೆ ಬ್ರೇಕ್‌: Quad ಸಭೆ ನಡುವೆ ಮಹತ್ವದ ಖನಿಜ ಒಪ್ಪಂದಕ್ಕೆ ಭಾರತ-ಅಮೆರಿಕಾ ಸಹಿ..!

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು Quad ಮಹತ್ವದ ತೀರ್ಮಾನ; ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

SCROLL FOR NEXT