ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವುದು. 
ದೇಶ

ಉತ್ತರಕಾಶಿಯಲ್ಲಿ ನಿರ್ಮಾಣ ಹಂತದ ಸುರಂಗ ಕುಸಿತ ಪ್ರಕರಣ: 40 ಮಂದಿ ಕಾರ್ಮಿಕರು ಸುರಕ್ಷಿತ, ಆಹಾರ, ನೀರು ಪೂರೈಕೆ

ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿರುವಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಮಾಣ ಹಂತದಲ್ಲಿರುವ ಸುರಂಗ ಕುಸಿದು 30 ಗಂಟೆ ಕಳೆದಿದ್ದು, ಅದೃಷ್ಟವಶಾತ್ ಸುರಂಗದಲ್ಲಿ ಸಿಲುಕಿಕೊಂಡಿದ್ದ 40 ಮಂದಿ ಕಾರ್ಮಿಕರು ಸುರಕ್ಷಿತರಾಗಿದ್ದಾರೆಂದು ತಿಳಿದುಬಂದಿದೆ.

ಉತ್ತರಕಾಶಿ (ಉತ್ತರಾಖಂಡ): ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿರುವ ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಮಾಣ ಹಂತದಲ್ಲಿರುವ ಸುರಂಗ ಕುಸಿದು 30 ಗಂಟೆ ಕಳೆದಿದ್ದು, ಅದೃಷ್ಟವಶಾತ್ ಸುರಂಗದಲ್ಲಿ ಸಿಲುಕಿಕೊಂಡಿದ್ದ 40 ಮಂದಿ ಕಾರ್ಮಿಕರು ಸುರಕ್ಷಿತರಾಗಿದ್ದಾರೆಂದು ತಿಳಿದುಬಂದಿದೆ.

ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಸಿಬ್ಬಂದಿಗಳು ಕಾರ್ಮಿಕರೊಂದಿಗೆ ಸಂಪರ್ಕ ಸಾಧಿಸಿದ್ದು, ಎಲ್ಲರೂ ಸುರಕ್ಷಿತರಾಗಿದ್ದಾರೆಂದು ತಿಳಿಸಿದ್ದಾರೆ.

“ಸುರಂಗದಲ್ಲಿ ಸಿಲುಕಿರುವವರ ರಕ್ಷಣೆಗೆ ಕಾರ್ಯಾಚರಣೆ ನಡೆಯುತ್ತಿದೆ. ಒಳಗಿರುವ 40 ಕಾರ್ಮಿಕರ ಜೊತೆ ಸಂಪರ್ಕ ಸಾಧಿಸಲಾಗಿದೆ. ನಾವೆಲ್ಲರೂ ಸುರಕ್ಷಿತವಾಗಿದ್ದೇವೆ ಎಂದು ಕಾರ್ಮಿಕರು ನಮಗೆ ಮಾಹಿತಿ ನೀಡಿದ್ದಾರೆ. ಕುಸಿದಿರುವ ಸುರಂಗದೊಳಗೆ ಅವಶೇಷಗಳನ್ನು ತೆಗೆಯುತ್ತ 15 ಮೀಟರ್‌ ಸಾಗಿದ್ದೇವೆ. ಇನ್ನೂ 35 ಮೀಟರ್‌ ಕೊರೆದು, ಒಳಗೆ ಹೋಗಿ ಕಾರ್ಮಿಕರನ್ನು ರಕ್ಷಿಸುತ್ತೇವೆ. ಅವರಿಗೆ ನೀರು, ಆಹಾರ, ಕೃತಕ ಆಮ್ಲಜನಕ ಸೇರಿ ಹಲವು ಮೂಲ ಸೌಕರ್ಯಗಳನ್ನು ಒದಗಿಸಲಾಗಿದೆ” ಎಂದು ಉತ್ತರಕಾಶಿ ಸರ್ಕಲ್‌ ಆಫೀಸರ್‌ ಪ್ರಶಾಂತ್‌ ಕುಮಾರ್‌ ಅವರು ಹೇಳಿದ್ದಾರೆ.

ಉತ್ತರಕಾಶಿ ಜಿಲ್ಲೆಯ ಸಿಲ್‌ಕ್ಯಾರ ಹಾಗೂ ದಂಡಲ್‌ಗಾಂವ್‌ಗೆ ಸಂಪರ್ಕ ಕಲ್ಪಿಸಲು ಚಾರ್‌ ಧಾಮ್‌ ರಸ್ತೆ ಯೋಜನೆ ಅಡಿಯಲ್ಲಿ ಸುರಂಗ ಮಾರ್ಗ ನಿರ್ಮಿಸಲಾಗುತ್ತಿದೆ. ಸುಮಾರು 4.5 ಕಿಲೋ ಮೀಟರ್‌ ದೂರದ ಸುರಂಗ ನಿರ್ಮಾಣದ ವೇಳೆ ಸುಮಾರು 150 ಮೀಟರ್‌ ಉದ್ದದ ಸುರಂಗ ಕುಸಿದು ಬಿದ್ದಿತ್ತು. ಭಾನುವಾರ ಬೆಳಗಿನ (ನವೆಂಬರ್‌ 12) ಜಾವ 4 ಗಂಟೆ ಸುಮಾರಿಗೆ ಸುರಂಗ ಕುಸಿದಿ ಬಿದ್ದಿತ್ತು. ಕೂಡಲೇ ರಕ್ಷಣಾ ಸಿಬ್ಬಂದಿಯು ಸ್ಥಳಕ್ಕೆ ಆಗಮಿಸಿ, ಕಾರ್ಯಾಚರಣೆ ಆರಂಭಿಸಿದೆ.

ಸ್ಥಳಕ್ಕೆ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಭೇಟಿ, ಪರಿಶೀಲನೆ

ಈ ನಡುವೆ ಘಟನಾ ಸ್ಥಳಕ್ಕೆ ಉತ್ತರಾಖಂಡ ರಾಜ್ಯದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಭೇಟಿ ನೀಡಿದ್ದು, ರಕ್ಷಣಾ ಕಾರ್ಯಾಚರಣೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ.

ಸ್ಥಳ ಪರಿಶೀಲನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರಕಾಶಿ-ಯಮನೋತ್ರಿ ರಸ್ತೆಯಲ್ಲಿರುವ ಸಿಲ್ಕ್ಯಾರಾ ಸುರಂಗದಲ್ಲಿ 40 ಮಂದಿ ಸಿಕ್ಕಿಬಿದ್ದಿದ್ದಾರೆ. ಎಲ್ಲರೂ ಸುರಕ್ಷಿತರಾಗಿದ್ದು, ಆಕ್ಸಿಜನ್ ಜೊತೆಗೆ ಆಹಾರ ಮತ್ತು ನೀರನ್ನು ನಿರಂತರವಾಗಿ ಒದಗಿಸಲಾಗುತ್ತಿದೆ. ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರೊಂದಿಗೆ ಸಂವಹನ ನಡೆಸಲಾಗುತ್ತಿದೆ. ಎಲ್ಲರನ್ನು ಶೀಘ್ರದಲ್ಲೇ ರಕ್ಷಿಸಲಾಗುವುದು ಎಂದು ಭರವಸೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT