ದೇಶ

ಛತ್ತೀಸ್‌ಗಢದಿಂದ ಕಾಂಗ್ರೆಸ್ ನಿರ್ಗಮನಕ್ಕೆ ಕ್ಷಣಗಣನೆ ಆರಂಭ: ಪ್ರಧಾನಿ ಮೋದಿ

Nagaraja AB

ಮುಂಗೇಲಿ: ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಸರ್ಕಾರದ ನಿರ್ಗಮನಕ್ಕೆ ಕ್ಷಣಗಣನೆ ಆರಂಭವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಪ್ರತಿಪಾದಿಸಿದ್ದಾರೆ. ಛತ್ತೀಸ್‌ಗಢದ ಮುಂಗೇಲಿಯಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಪ್ರಧಾನಿ,ಮೊದಲ ಹಂತದ ಚುನಾವಣೆಯ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಂತ್ಯಗೊಳ್ಳಲಿದೆ ಎಂದು ಭವಿಷ್ಯ ನುಡಿದರು.

ಕಾಂಗ್ರೆಸ್‌ನ ಕೆಟ್ಟ ಆಡಳಿತದ ಅಂತ್ಯದ ಮಾತುಗಳು ಕೇಳಿಬರುತ್ತಿದೆ. ಇದೀಗ ಕಾಂಗ್ರೆಸ್ ನ 'ಬಿದಾಯಿ'ಯ ಕ್ಷಣಗಣನೆ ಶುರುವಾಗಿದೆ. ಐದು ವರ್ಷ ನಿಮ್ಮನ್ನು ಲೂಟಿ ಮಾಡಿದ ಕಾಂಗ್ರೆಸ್ ನಾಯಕರ ಬೀಳ್ಕೊಡುವ ಸಮಯ ಬಂದಿದೆ. ರಾಜ್ಯದಿಂದ ಕಾಂಗ್ರೆಸ್ ಕಿತ್ತೂಗೆಯಲು ರಾಜ್ಯದ ಜನರು ಉತ್ಸುಕರಾಗಿದ್ದಾರೆ. ಸಾರ್ವಜನಿಕರು ಇನ್ನು ಮುಂದೆ ಕಾಂಗ್ರೆಸ್ ಬಯಸುವುದಿಲ್ಲ ಎಂದು ಪ್ರಧಾನಿ ಹೇಳಿದರು.

ಛತ್ತೀಸ್‌ಗಢದ ಸಿಎಂ ಭೂಪೇಶ್ ಬಘೇಲ್ ಅವರ ವಿರುದ್ಧದ  ಭ್ರಷ್ಟಾಚಾರದ ಆರೋಪದ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಭ್ರಷ್ಟಾಚಾರದ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. 

SCROLL FOR NEXT