ಸಾಂಕೇತಿಕ ಚಿತ್ರ 
ದೇಶ

ನಾಗಾಲ್ಯಾಂಡ್‌; ಪಟಾಕಿ ಕಿಡಿ ತಗುಲಿ ಬೆಂಕಿ ಅವಘಡ, ಮಕ್ಕಳು ಸೇರಿ ಒಂದೇ ಕುಟುಂಬದ ಐವರು ಸಜೀವ ದಹನ

ನಾಗಾಲ್ಯಾಂಡ್‌ನ ದಿಮಾಪುರ್ ಜಿಲ್ಲೆಯ ನಹರ್ಬರಿ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸಜೀವ ದಹನಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ದಿಮಾಪುರ: ನಾಗಾಲ್ಯಾಂಡ್‌ನ ದಿಮಾಪುರ್ ಜಿಲ್ಲೆಯ ನಹರ್ಬರಿ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸಜೀವ ದಹನಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ಭಾನುವಾರ ರಾತ್ರಿ 10.45 ರ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ನಾಗ ಸಮುದಾಯವಲ್ಲದ ಜನರು ವಾಸಿಸುವ ಹುಲ್ಲಿನ ಮನೆಗಳ ಸಾಲುಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅವರು ಹೇಳಿದರು.

ದೀಪಾವಳಿ ಆಚರಣೆ ವೇಳೆ ಪಟಾಕಿ ಸಿಡಿಸಿದ್ದರಿಂದ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ. ಬೆಂಕಿಯಿಂದಾಗಿ ಸುಮಾರು 50 ಕುಟುಂಬಗಳು ತೊಂದರೆಗೀಡಾಗಿವೆ ಎಂದು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಅಧಿಕಾರಿ ತಿಳಿಸಿದ್ದಾರೆ.

ಆರು ಅಗ್ನಿಶಾಮಕ ವಾಹನಗಳು ಸುಮಾರು ಎರಡು ಗಂಟೆಗಳ ಕಾರ್ಯಾಚರಣೆಯ ನಂತರ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿವೆ.

ಆದರೆ, ಅಗ್ನಿ ಅವಘಡಕ್ಕೆ ನಿಖರ ಕಾರಣ ತನಿಖೆಯ ನಂತರವೇ ತಿಳಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತರ ಶವಗಳನ್ನು ಪೊಲೀಸರಿಗೆ ಹಸ್ತಾಂತರಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!

'ನ್ಯಾಯಾಂಗ ತನಿಖೆಗೆ ಒಪ್ಪಿಸಿ, ₹1 ಕೋಟಿ ಪರಿಹಾರ ನೀಡಿ': ಹನೂರು ಶೂಟೌಟ್ ಪ್ರಕರಣದ ಮಹಿಮಾ ದಾಸ್ ಸೇರಿ ಸಂತ್ರಸ್ತರ ಆಗ್ರಹ