ಕಟ್ಟಡದಲ್ಲಿ ಸಿಲುಕಿದ್ದ ಮಗುವನ್ನು ರಕ್ಷಣೆ ಮಾಡುತ್ತಿರುವುದು. 
ದೇಶ

ಹೈದರಾಬಾದ್: ರಾಸಾಯನಿಕ ಗೋದಾಮಿನಲ್ಲಿ ಅಗ್ನಿ ಅವಘಡ, 9 ಮಂದಿ ಸಜೀವ ದಹನ

ಹೈದಾರಾಬಾದ್'ನಲ್ಲಿ ದೀಪಾವಳಿ ಹಬ್ಬದಂದೇ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ದುರಂತದಲ್ಲಿ 9 ಮಂದಿ ಸಜೀವ ದಹನಗೊಂಡಿದ್ದಾರೆ.

ಹೈದರಾಬಾದ್​(ತೆಲಂಗಾಣ): ಹೈದಾರಾಬಾದ್'ನಲ್ಲಿ ದೀಪಾವಳಿ ಹಬ್ಬದಂದೇ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ದುರಂತದಲ್ಲಿ 9 ಮಂದಿ ಸಜೀವ ದಹನಗೊಂಡಿದ್ದಾರೆ.

ನಾಂಪಲ್ಲಿ ಬಜಾರ್ ಘಾಟ್‌ನಲ್ಲಿ ನಾಲ್ಕು ಅಂತಸ್ತಿನ ರಾಸಾಯನಿಕ ಗೋದಾಮಿನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಸ್ಥಳದಲ್ಲಿ 16 ಮಂದಿಯನ್ನು ರಕ್ಷಣೆ ಮಾಡಲಾಗಿದ್ದು, ಮೂವರಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

'ಕಟ್ಟಡದ ನೆಲಮಹಡಿಯಲ್ಲಿ ಕಾರ್‌ ರಿಪೇರಿ ಮಾಡಲಾಗುತ್ತಿತ್ತು. ಈ ವೇಳೆ ಅಲ್ಲೇ ಇದ್ದ ರಾಸಾಯನಿಕ ತುಂಬಿದ್ದ ಡ್ರಮ್‌ಗಳಿಗೆ ಬೆಂಕಿ ತಗುಲಿ ಬೆಳಿಗ್ಗೆ 9.30ರ ಸುಮಾರಿಗೆ ಅವಘಡ ಸಂಭವಿಸಿದೆ. ಕೆಲ ಹೊತ್ತಿನಲ್ಲೇ ಉಳಿದ ಮಹಡಿಗಳಿಗೂ ಬೆಂಕಿ ವ್ಯಾಪಿಸಿದೆ' ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅಗ್ನಿ ಅವಘಡದಲ್ಲಿ ಗೋದಾಮಿನಲ್ಲಿದ್ದ ಕಾರು ಹಾಗೂ ಎರಡು ಸೈಕಲ್ ಸುಟ್ಟು ಕರಕಲಾಗಿವೆ. ಸ್ಥಳದಲ್ಲಿ ಬೆಂಕಿ ನಂದಿಸುವ ಹಾಗೂ ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ಮೃತರ ಸಂಖ್ಯೆ 165ಕ್ಕೆ ಏರಿಕೆ; ನಾಪತ್ತೆಯಾದವರಲ್ಲಿ 133 ಮಂದಿ ಭಾರತೀಯರು

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ