ದೇಶ

ಚೆನ್ನೈನಲ್ಲಿರುವ ಕರ್ನಾಟಕ ಮೂಲದ ಜವಳಿ ಉದ್ಯಮಿಯ ಮನೆ ಮೇಲೆ ಐಟಿ ದಾಳಿ

Ramyashree GN

ಚೆನ್ನೈ: ತಮಿಳುನಾಡಿನ ಚೆನ್ನೈನ ತ್ಯಾಗರಾಯನಗರ ರಾಧಾಕೃಷ್ಣನ್ ಸ್ಟ್ರೀಟ್‌ನಲ್ಲಿರುವ ಕರ್ನಾಟಕ ಮೂಲದ ಜವಳಿ ಉದ್ಯಮಿಯೊಬ್ಬರ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದಾರೆ.

ಆದಾಯ ತೆರಿಗೆ ಅಧಿಕಾರಿಯೊಬ್ಬರ ಕಾರು ಮನೆಯ ಹೊರಗೆ ನಿಲ್ಲಿಸಿರುವ ದೃಶ್ಯಗಳು ಕಂಡುಬಂದಿದ್ದು, ಚೆನ್ನೈ ಪೊಲೀಸರನ್ನೂ ಭದ್ರತೆಗೆ ನಿಯೋಜಿಸಲಾಗಿದೆ.

ಈ ಸಂಬಂಧ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

ಇದಕ್ಕೂ ಮುನ್ನ ನವೆಂಬರ್ 7 ರಂದು ತಿರುವಣ್ಣಾಮಲೈನಲ್ಲಿ ತಮಿಳುನಾಡಿನ ಲೋಕೋಪಯೋಗಿ ಮತ್ತು ಹೆದ್ದಾರಿ ಇಲಾಖೆ ಸಚಿವ ಇವಿ ವೇಲು ಅವರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು. ಸಚಿವರಿಗೆ ಸಂಬಂಧವಿದೆ ಎನ್ನಲಾದ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ.

ಈ ಹಿಂದೆ, ಇಂಡಿಯಾ ಪ್ರೈವೇಟ್ ಲಿಮಿಟೆಡ್ ಮತ್ತು ರಾಧಾ ಇಂಜಿನಿಯರಿಂಗ್ ವರ್ಕ್ಸ್ ಪ್ರೈವೇಟ್ ಲಿಮಿಟೆಡ್‌ ಸೇರಿದಂತೆ ಚೆನ್ನೈನ ಸುಮಾರು 10 ಸ್ಥಳಗಳಲ್ಲಿ ದಾಳಿಗಳನ್ನು ನಡೆಸಲಾಯಿತು.

ಅಕ್ಟೋಬರ್‌ನಲ್ಲಿ, ಡಿಎಂಕೆ ಸಂಸದ ಎಸ್ ಜಗತ್ರಕ್ಷಕನ್‌ಗೆ ಸಂಬಂಧಿಸಿದ ಅನೇಕ ಸ್ಥಳಗಳಲ್ಲಿ ಕೂಡ ಐಟಿ ಅಧಿಕಾರಿಗಳು ಶೋಧ ನಡೆಸಿದ್ದರು. ಶಂಕಿತ ತೆರಿಗೆ ವಂಚನೆಗೆ ಸಂಬಂಧಿಸಿದಂತೆ ಅರಕ್ಕೋಣಂ ಸಂಸದರ ಅಡ್ಯಾರ್‌ನಲ್ಲಿರುವ ನಿವಾಸ ಮತ್ತು ಕಚೇರಿ ಮತ್ತು ಕೆಲವು ಶಿಕ್ಷಣ ಸಂಸ್ಥೆಗಳು ಸೇರಿದಂತೆ 40 ಕ್ಕೂ ಹೆಚ್ಚು ಸ್ಥಳಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

SCROLL FOR NEXT