ಸಾಂದರ್ಭಿಕ ಚಿತ್ರ 
ದೇಶ

ಉರಿ ಸೆಕ್ಟರ್ ನಲ್ಲಿ ಉಗ್ರರ ಒಳನುಸುಳುವಿಕೆ ಪ್ರಯತ್ನ: ಟೆರರ್ ಲಾಂಚ್ ಕಮಾಂಡರ್ ಹತ್ಯೆ!

ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ಉಗ್ರರ ಒಳನುಸುಳುವಿಕೆ ಪ್ರಯತ್ನ ವಿಫಲಗೊಳಿಸಿರುವ ಭದ್ರತಾ ಪಡೆಗಳು ಪ್ರಮುಖ ಟೆರರ್ ಲಾಂಚ್ ಕಮಾಂಡರ್ ಬಶೀರ್ ಅಹ್ಮದ್ ಮಲ್ಲಿಕ್ ನನ್ನು ಗುಂಡಿಟ್ಟು ಹತ್ಯೆ ಮಾಡಿದೆ  ಎಂದು ಸೇನೆ ಗುರುವಾರ ತಿಳಿಸಿದೆ. 

ಬಾರಾಮುಲ್ಲಾ: ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ಉಗ್ರರ ಒಳನುಸುಳುವಿಕೆ ಪ್ರಯತ್ನ ವಿಫಲಗೊಳಿಸಿರುವ ಭದ್ರತಾ ಪಡೆಗಳು ಪ್ರಮುಖ ಟೆರರ್ ಲಾಂಚ್ ಕಮಾಂಡರ್ ಬಶೀರ್ ಅಹ್ಮದ್ ಮಲ್ಲಿಕ್ ನನ್ನು ಗುಂಡಿಟ್ಟು ಹತ್ಯೆ ಮಾಡಿದೆ  ಎಂದು ಸೇನೆ ಗುರುವಾರ ತಿಳಿಸಿದೆ. 

ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಮಲ್ಲಿಕ್ ಮತ್ತು ಮತ್ತೋರ್ವ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ.  ಮಲ್ಲಿಕ್ ಬಶೀರ್ ಪಾಕ್ ಆಕ್ರಮಿತ ಪ್ರದೇಶ ಉತ್ತರದ ಲೀಪಾದಿಂದ ದಕ್ಷಿಣದ ರಜೌರಿಯವರೆಗೂ ಗಡಿಯಾಚೆಗಿನ ಭಯೋತ್ಪಾದನೆಯ ಪ್ರಮುಖ ಕಮಾಂಡರ್ ಆಗಿದ್ದ ಎಂದು ಸೇನಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ಕಳೆದ 30 ವರ್ಷಗಳಿಂದ ಸಕ್ರಿಯರಾಗಿದ್ದ ಮಲಿಕ್, ಹಲವು ಉಗ್ರರನ್ನು ಒಳನುಸುಳುವಲ್ಲಿ ಯಶಸ್ವಿಯಾಗಿದ್ದ. ಇದರಿಂದಾಗಿ ಅನೇಕ ಭಾರತೀಯ ನಾಗರಿಕರು, ಭದ್ರತಾ ಪಡೆಗಳ ಸಾವಿಗೂ ಕಾರಣನಾಗಿದ್ದ. ಆತನ ಹತ್ಯೆ ನಿಯಂತ್ರಣ ರೇಖೆಯಾದ್ಯಂತ ಉಗ್ರರಿಗೆ  ಮೂಲಸೌಕರ್ಯ ಒದಗಿಸುತ್ತಿದ್ದವರಿಗೆ  ದೊಡ್ಡ ಹೊಡೆತವಾಗಿದೆ ಎಂದು ಅಧಿಕಾರಿ ಹೇಳಿದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT