ಪ್ರಧಾನಿ ಮೋದಿ 
ದೇಶ

ನಾಗರಿಕರ ಸಾವನ್ನು ಭಾರತ ತೀವ್ರವಾಗಿ ಖಂಡಿಸುತ್ತದೆ: ಹಮಾಸ್-ಇಸ್ರೇಲ್ ಸಂಘರ್ಷದ ಬಗ್ಗೆ ಪ್ರಧಾನಿ ಮೋದಿ

ಹಮಾಸ್-ಇಸ್ರೇಲ್ ಸಂಘರ್ಷದಲ್ಲಿ ಸಂಭವಿಸುತ್ತಿರುವ ಅಮಾಯಕ ನಾಗರಿಕರ ಸಾವನ್ನು ತೀವ್ರವಾಗಿ ಖಂಡಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಮಾತುಕತೆ ಮೂಲಕ ಈ ಸಂಘರ್ಷವನ್ನು ತಪ್ಪಿಸಬೇಕು ಎಂದು ಶುಕ್ರವಾರ ಹೇಳಿದ್ದಾರೆ.

ನವದೆಹಲಿ: ಹಮಾಸ್-ಇಸ್ರೇಲ್ ಸಂಘರ್ಷದಲ್ಲಿ ಸಂಭವಿಸುತ್ತಿರುವ ಅಮಾಯಕ ನಾಗರಿಕರ ಸಾವನ್ನು ತೀವ್ರವಾಗಿ ಖಂಡಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಮಾತುಕತೆ ಮೂಲಕ ಈ ಸಂಘರ್ಷವನ್ನು ತಪ್ಪಿಸಬೇಕು ಎಂದು ಶುಕ್ರವಾರ ಹೇಳಿದ್ದಾರೆ.

ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಈ ಸಂಘರ್ಷದಿಂದ ಹೊಸ ಸವಾಲುಗಳು ಹೊರಹೊಮ್ಮುತ್ತಿವೆ ಮತ್ತು ಜಾಗತಿಕ ಒಳಿತಿಗಾಗಿ, ಜಾಗತಿಕ ದಕ್ಷಿಣದ ದೇಶಗಳು ಒಂದೇ ಧ್ವನಿಯಲ್ಲಿ ಮಾತನಾಡುವ ಸಮಯ ಬಂದಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಭಾರತ ಆಯೋಜಿಸಿದ್ದ ವರ್ಚುವಲ್ ವಾಯ್ಸ್ ಆಫ್ ಗ್ಲೋಬಲ್ ಸೌತ್ ಶೃಂಗಸಭೆಯ ಎರಡನೇ ಆವೃತ್ತಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಹಮಾಸ್-ಇಸ್ರೇಲ್ ಸಂಘರ್ಷದಿಂದ ಉದ್ಭವಿಸುವ ಪರಿಸ್ಥಿತಿಯನ್ನು ಎದುರಿಸಲು ಸಂಯಮದ ಜೊತೆಗೆ ಮಾತುಕತೆ ಮತ್ತು ರಾಜತಾಂತ್ರಿಕತೆಗೆ ದೆಹಲಿ ಒತ್ತು ನೀಡಿದೆ ಎಂದರು.

ಅಕ್ಟೋಬರ್ 7 ರಂದು ಇಸ್ರೇಲ್ ಅನಾಗರಿಕರ ಮೇಲೆ ಹಮಾಸ್ ನಡೆಸಿದ ಉಗ್ರ ದಾಳಿಯನ್ನು ಭಾರತ ಖಂಡಿಸಿದೆ. ಅದೇ ಸಮಯದಲ್ಲಿ ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷದಲ್ಲಿ ನಾಗರಿಕರ ಸಾವನ್ನು ಭಾರತ ಬಲವಾಗಿ ಖಂಡಿಸುತ್ತದೆ ಎಂದು ಪ್ರಧಾನಿ ಹೇಳಿದ್ದಾರೆ.

"ಪಶ್ಚಿಮ ಏಷ್ಯಾದಲ್ಲಿನ ಈ ಬೆಳವಣಿಗೆಗಳಿಂದ ಹೊಸ ಸವಾಲುಗಳು ಹೊರಹೊಮ್ಮುತ್ತಿರುವುದನ್ನು ನಾವು ನೋಡುತ್ತಿದ್ದೇವೆ. ಫ್ಯಾಲೆಸ್ತೀನ್ ಅಧ್ಯಕ್ಷ ಮಹಮೂದ್ ಅಬ್ಬಾಸ್ ಅವರೊಂದಿಗೆ ಮಾತನಾಡಿದ ನಂತರ, ನಾವು ಫ್ಯಾಲೆಸ್ತೀನ್ ಜನರಿಗೆ ಮಾನವೀಯ ನೆರವನ್ನು ಕೂಡಾ ಕಳುಹಿಸಿದ್ದೇವೆ. ಜಾಗತಿಕ ದಕ್ಷಿಣದ ದೇಶಗಳು ಹೆಚ್ಚಿನ ಜಾಗತಿಕ ಒಳಿತಿಗಾಗಿ ಒಂದಾಗಬೇಕಾದ ಸಮಯ ಇದು" ಎಂದು ಪ್ರಧಾನಿ ಮೋದಿ ಕರೆ ನೀಡಿದ್ದಾರೆ.

"ವಾಯ್ಸ್ ಆಫ್ ಗ್ಲೋಬಲ್ ಸೌತ್ 21ನೇ ಶತಮಾನದ ಬದಲಾಗುತ್ತಿರುವ ಜಗತ್ತನ್ನು ಪ್ರತಿಬಿಂಬಿಸುವ ಅತ್ಯಂತ ವಿಶಿಷ್ಟವಾದ ವೇದಿಕೆಯಾಗಿದೆ" ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ

ನಮ್ಮ ಆಚರಣೆಯ ನಡುವೆ ಬೇರೆಯದನ್ನು ಯಾಕೆ ತರುತ್ತೀರಾ: ದಸರಾದಲ್ಲಿ ಕಂಬಳ ಆಯೋಜನೆಗೆ ಯದುವೀರ್- ಪ್ರತಾಪ್ ಸಿಂಹ ವಿರೋಧ!

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್