ಸಾಂದರ್ಭಿಕ ಚಿತ್ರ 
ದೇಶ

ತಮಿಳುನಾಡು: ಕಾರಿಗೆ ಟ್ರಕ್ ಡಿಕ್ಕಿ; ಮದುವೆ ಮುಗಿಸಿ ವಾಪಸಾಗುತ್ತಿದ್ದ ಐವರು ದಾರುಣ ಸಾವು

ಪೆಟ್ರೋಲ್ ಟ್ಯಾಂಕರ್ ಟ್ರಕ್‌- ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದಾರೆ. ತಮಿಳುನಾಡಿನ ತಿರುಪ್ಪುರ ಜಿಲ್ಲೆಯ ಧಾರಾಪುರಂ-ಪಳನಿ ರಸ್ತೆಯಲ್ಲಿ ಗುರುವಾರ ತಡರಾತ್ರಿ ಈ ಅವಘಡ ಸಂಭವಿಸಿದೆ.

ಕೊಯಮತ್ತೂರು: ಪೆಟ್ರೋಲ್ ಟ್ಯಾಂಕರ್ ಟ್ರಕ್‌- ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದಾರೆ. ತಮಿಳುನಾಡಿನ ತಿರುಪ್ಪುರ ಜಿಲ್ಲೆಯ ಧಾರಾಪುರಂ-ಪಳನಿ ರಸ್ತೆಯಲ್ಲಿ ಗುರುವಾರ ತಡರಾತ್ರಿ ಈ ಅವಘಡ ಸಂಭವಿಸಿದೆ.

ಮೃತರನ್ನು ತಮಿಳುಮಣಿ (51), ಚಿತ್ರಾ (49), ಸೆಲ್ವರಾಣಿ (70), ಬಾಲಕೃಷ್ಣನ್ (78), ಮತ್ತು ಕಲಾರಾಣಿ (50) ಎಂದು ಗುರುತಿಸಲಾಗಿದೆ. ಇವರೆಲ್ಲರೂ ದಿಂಡಿಗಲ್ ಜಿಲ್ಲೆಯ ಪಳನಿಯಲ್ಲಿ ನಡೆದ ಮದುವೆ ಕಾರ್ಯಕ್ರಮ ಮುಗಿಸಿ ವಾಪಸ್‌ ಆಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಮಿಳುಮಣಿ ಕಾರು ಚಲಾಯಿಸುತ್ತಿದ್ದರು. ಧಾರಾಪುರಂ-ಪಳನಿ ರಸ್ತೆಯ ಮಣಕ್ಕಡವು-ಆಲಂಕಾಡು ಬಸ್ ನಿಲ್ದಾಣದ ಬಳಿ ಬಂದಾಗ ವಾಹನ ನಿಯಂತ್ರಣ ತಪ್ಪಿದೆ. ಈ ವೇಳೆ ಎದುರಿನಿಂದ ಬರುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.

ತಮಿಳುಮಣಿ, ‌ಚಿತ್ರಾ, ಬಾಲಕೃಷ್ಣನ್ ಮತ್ತು ಸೆಲ್ವರಾಣಿ ಸ್ಥಳದಲ್ಲೇ ಮೃತಪಟ್ಟರೆ, ಕಲಾರಾಣಿ ಅವರನ್ನು ಧಾರಾಪುರಂ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸ್‌ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಘಟನೆ ಸಂಬಂಧ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರು. ಪರಿಹಾರ ಘೋಷಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಉಪಚುನಾವಣೆಯಲ್ಲಿ ಗೆಲುವು, ಜನರೊಂದಿಗೆ NDA ಆಳವಾದ ನಂಟಿನ ಪ್ರತೀಕ: ಪ್ರಧಾನಿ ಮೋದಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಅಸಹ್ಯ, ಅತಿರೇಕ.. ನಿಮ್ಮನ್ನು ಈ ರೀತಿ ನೋಡಲು ಇಚ್ಛಿಸುವುದಿಲ್ಲ, BiggBoss ಶೋ ಬಿಟ್ಟು ಹೊರಬನ್ನಿ': Kichcha Sudeepಗೆ ಪತ್ರ