ಸಾಂದರ್ಭಿಕ ಚಿತ್ರ 
ದೇಶ

ಇಂದೋರ್‌ಗೆ ತೆರಳುತ್ತಿದ್ದ ವಿಮಾನದಲ್ಲಿ ಎನ್‌ಆರ್‌ಐ ಮಹಿಳೆಗೆ ಕಿರುಕುಳ: ದೂರು ದಾಖಲು

ರಾಜಸ್ಥಾನದ ಉದಯಪುರದಿಂದ ಇಂದೋರ್‌ಗೆ ತೆರಳುತ್ತಿದ್ದ ವಿಮಾನದಲ್ಲಿ ಅನಿವಾಸಿ ಭಾರತೀಯ ಮಹಿಳೆಯೊಬ್ಬರು, ಪ್ರಯಾಣದ ವೇಳೆ ತಮಕೆ ಕಿರುಕುಳ ನೀಡಲಾಗಿದೆ ಎಂದು ಆರೋಪಿ ಇಂದೋರ್ ಜಿಲ್ಲೆಯ ಪೊಲೀಸ್ ಠಾಣೆಯಲ್ಲಿ ದೂರು...

ಇಂದೋರ್‌: ರಾಜಸ್ಥಾನದ ಉದಯಪುರದಿಂದ ಇಂದೋರ್‌ಗೆ ತೆರಳುತ್ತಿದ್ದ ವಿಮಾನದಲ್ಲಿ ಅನಿವಾಸಿ ಭಾರತೀಯ ಮಹಿಳೆಯೊಬ್ಬರು, ಪ್ರಯಾಣದ ವೇಳೆ ತಮಕೆ ಕಿರುಕುಳ ನೀಡಲಾಗಿದೆ ಎಂದು ಆರೋಪಿ ಇಂದೋರ್ ಜಿಲ್ಲೆಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ವಿಮಾನದಲ್ಲಿ ಸಹ ಪ್ರಯಾಣಿಕರಿಂದ ಕಿರುಕುಳಕ್ಕೊಳಗಾದ ಮಹಿಳೆ, ಇಂದೋರ್ ತಲುಪಿದ ನಂತರ ನಗರದ ಏರೋಡ್ರೋಮ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಹೆಚ್ಚುವರಿ ಉಪ ಪೊಲೀಸ್ ಕಮಿಷನರ್ ರಾಜೇಶ್ ದಂಡೋಟಿಯಾ ಮಾತನಾಡಿ, "ಅಮೆರಿಕದಿಂದ ಉದಯಪುರ ಮೂಲಕ ಇಂದೋರ್ ತಲುಪಿದ ಎನ್‌ಆರ್‌ಐ ಮಹಿಳೆಯೊಬ್ಬರು ದೂರು ನೀಡಿದ್ದು, ಗುರುವಾರ ವಿಮಾನದಲ್ಲಿ ವ್ಯಕ್ತಿಯೊಬ್ಬರು ತಮಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿರುವುದಾಗಿ ತಿಳಿಸಿದ್ದಾರೆ.

ಮಹಿಳೆ ಅಮೆರಿಕದಲ್ಲಿ ವಾಸವಾಗಿದ್ದು, ಅಲ್ಲಿ ಟ್ರೈನಿ ಪೈಲಟ್ ಆಗಿದ್ದಾರೆ. ಮಹಿಳೆಯ ದೂರಿನ ಮೇರೆಗೆ ಪೊಲೀಸರು ಅಪರಿಚಿತ ಆರೋಪಿಯ ವಿರುದ್ಧ ಐಪಿಸಿ ಸೆಕ್ಷನ್ 354 ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಆರೋಪಿಯ ಬಗ್ಗೆ ಏರ್‌ಲೈನ್‌ನಿಂದ ಮಾಹಿತಿ ಕೇಳಲಾಗಿದ್ದು, ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!