ಸಂಗ್ರಹ ಚಿತ್ರ 
ದೇಶ

ವಾರ್ಷಿಕ ಶಬರಿಮಲೆ ಯಾತ್ರೆ ಪ್ರಾರಂಭ: ಭಕ್ತರಿಗೆ ಬಾಗಿಲು ತೆರೆದ ಅಯ್ಯಪ್ಪ ಸ್ವಾಮಿ ದೇಗುಲ

ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ತೆರೆಯಲಾಗಿದೆ.

ಶಬರಿಮಲೆ: ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ತೆರೆಯಲಾಗಿದೆ.

ಎರಡು ತಿಂಗಳ ದೀರ್ಘ ವಾರ್ಷಿಕ ಯಾತ್ರಾ ಋತುವಿನ ಆರಂಭ ವಾರ್ಷಿಕ ಮಂಡಲಂ-ಮಕರವಿಳಕ್ಕು ಉತ್ಸವಕ್ಕಾಗಿ ಶಬರಿಮಲೆಯ ಅಯ್ಯಪ್ಪ ದೇವಾಲಯದ ಬಾಗಿಲನ್ನು ಗುರುವಾರ ತೆರೆಯಲಾಗಿದ್ದು. ಶುಕ್ರವಾರದಿಂದ 41 ದಿನಗಳ ತೀರ್ಥಯಾತ್ರೆ ಆರಂಭವಾಗಿದೆ.

ಈ ಸಮಯದಲ್ಲಿ ಬೇರೆ ಬೇರೆ ರಾಜ್ಯಗಳ ಲಕ್ಷಾಂತರ ಮಂದಿ ಅಯ್ಯಪ್ಪ ಭಕ್ತರು ಶಬರಿಮಲೆಗೆ ಯಾತ್ರೆ ಕೈಗೊಳ್ಳಲಿದ್ದಾರೆ.

ಗುರುವಾರ ದೇವಾಲಯದ ‘ತಂತ್ರಿ’ (ಮುಖ್ಯ ಅರ್ಚಕ) ಮಹೇಶ್ ಮೋಹನರು ಅವರ ನೇತೃತ್ವದಲ್ಲಿ ಅಯ್ಯಪ್ಪ ಸನ್ನಿಧಿಯ ಗರ್ಭಗುಡಿಯ ಬಾಗಿಲನ್ನು ತೆರೆಯಲಾಗಿದೆ. ಇದರ ಜೊತೆಗೆ ಮತ್ತೊಬ್ಬ ಮುಖ್ಯ ಅರ್ಚಕ ಕೆ ಜಯರಾಮನ್ ನಂಬೂತಿರಿ ಅವರ ಸಮ್ಮುಖದಲ್ಲಿ ಹಲವು ಧಾರ್ಮಿಕ ಕಾರ್ಯಕ್ರಮಗಳು ನಡೆದಿದೆ.

ತೀರ್ಥಯಾತ್ರೆ ಮೂಲಕ ದೊಡ್ಡ ಸಂಖ್ಯೆಯಲ್ಲಿ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಆಗಮಿಸುವುದರಿಂದ ಸಾಲುಗಳನ್ನು ನಿಯಂತ್ರಿಸಲು ಸಿಬ್ಬಂದಿ ನೇಮಕ ಕೂಡ ಮಾಡಲಾಗಿದೆ.

ಈಗಾಗಲೇ ದೇವರ ದರ್ಶನ ಪಡೆಯಲು ಸಾವಿರಾರು ಭಕ್ತರು ಆಗಮಿಸಿದ್ದು, ಸರತಿ ಸಾಲಿನಲ್ಲಿ ನಿಂತು ಅಯ್ಯಪ್ಪ ಸ್ವಾಮಿಯ ದರ್ಶನ ಪಡೆಯುತ್ತಿದ್ದಾರೆ.

ಮಲಯಾಳಂ ಕ್ಯಾಲೆಂಡರ್​ ಪ್ರಕಾರ 41 ದಿನಗಳ ಕಾಲ ದೇಗುಲದಲ್ಲಿ ಮಂಡಲ ಪೂಜೆ ಹಾಗೂ ಮಕರವಿಳಕ್ಕು ಯಾತ್ರೆ ಆರಂಭವಾಗಲಿದೆ. ಜನವರಿ 15ರ ಮಕರ ಸಂಕ್ರಮಣ ದಿನದಂದು ಮಕರವಿಳಕ್ಕು ನೆರವೇರಲಿದ್ದು, ದೇಶದಾದ್ಯಂತ ಲಕ್ಷಾಂತರು ಭಕ್ತರು ಶಬರಿಮಲೆಗೆ ಭೇಟಿ ನೀಡಿ ದರ್ಶನ ಪಡೆಯಲಿದ್ದಾರೆ.

ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಆಗಮಿಸುವ ಭಕ್ತರಿಗಾಗಿ ಮೂಲ ಸೌಕರ್ಯಗಳನ್ನು ಕೈಗೊಳ್ಳಲಾಗಿದೆ. ಕುಡಿಯುವ ನೀರಿನ ವ್ಯವಸ್ಥೆ, ಆಸ್ಪತ್ರೆ, ಶೌಚಾಲಯ ಸೇರಿದಂತೆ ಭಕ್ತರಿಗೆ ತಂಗುವ, ಪಾರ್ಕಿಂಗ್​ ವ್ಯವಸ್ಥೆಗಳನ್ನು ಮಾಡಲಾಗಿದೆ. ಅಲ್ಲದೇ ಕೇರಳ ಸರ್ಕಾರದಿಂದ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.

ಜನಸಂದಣಿಯನ್ನು ನಿರ್ವಹಿಸಲು ಆರು ಹಂತಗಳಲ್ಲಿ 13,000 ಪೊಲೀಸ್ ಅಧಿಕಾರಿಗಳನ್ನು ಕರ್ತವ್ಯಕ್ಕೆ ನಿಯೋಜಿಸಲಾಗುವುದು ಮತ್ತು ಇಡೀ ಯಾತ್ರಾ ವಲಯವನ್ನು ಕಟ್ಟುನಿಟ್ಟಾದ ಕಣ್ಗಾವಲು ಜಾಲದ ಅಡಿಯಲ್ಲಿ ತರಲಾಗಿದೆ.

ಮೂರು ತಾತ್ಕಾಲಿಕ ಪೊಲೀಸ್ ಠಾಣೆಗಳನ್ನು – ಸನ್ನಿಧಾನಂ, ನಿಲಕಲ್ ಮತ್ತು ವಡಸ್ಸೆರಿಕ್ಕರಾದಲ್ಲಿ ತಲಾ ಒಂದು ತೆರೆಯಲಾಗಿದೆ. ನಿಲಕಲ್ ಮತ್ತು ಸುತ್ತಮುತ್ತಲಿನ 17 ಮೈದಾನಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದ್ದು, ವರ್ಚುವಲ್ ಕ್ಯೂಗಳಿಗಾಗಿ 15 ಕೌಂಟರ್‌ಗಳನ್ನು ತೆರೆಯಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT