ಗೂಗಲ್ ಡೂಡಲ್. 
ದೇಶ

ICC Cricket World Cup 2023 Final: ವಿಶೇಷ ಡೂಡಲ್ ಮೂಲಕ ಸಂಭ್ರಮಿಸಿದ ಗೂಗಲ್

ಐಸಿಸಿ ಏಕದಿನ ವಿಶ್ವಕಪ್ ಫೈನಲ್ ಹಣಾಹಣಿಗೆ ವೇದಿಕೆ ಸಿದ್ಧವಾಗಿದ್ದು, ಜಿದ್ದಾಜಿದ್ದಿನ ಪ್ರಶಸ್ತಿ ಫೈಟ್'ಗೆ ಬದ್ಧವೈರಿಗಳಾದ ಭಾರತ ಹಾಗೂ ಆಸ್ಟ್ರೇಲಿಯಾ ಆಟಗಾರರು ಸಜ್ಜಾಗುತ್ತಿದ್ದಾರೆ. ಫೈನಲ್ ಪಂದ್ಯಕ್ಕೆ ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣ ಸಾಕ್ಷಿಯಾಗಲಿದೆ. ಈ ಗೂಗಲ್ ತನ್ನ ಸರ್ಚ್ ಹೋಮ್ ಪೇಜ್ ನಲ್ಲಿ ವಿಶೇಷ ಡೂಡಲ್ ಬಿಡಿಸಿ, ಸಂಭ್ರಮಿಸುತ್ತಿದೆ.

ನವದೆಹಲಿ: ಐಸಿಸಿ ಏಕದಿನ ವಿಶ್ವಕಪ್ ಫೈನಲ್ ಹಣಾಹಣಿಗೆ ವೇದಿಕೆ ಸಿದ್ಧವಾಗಿದ್ದು, ಜಿದ್ದಾಜಿದ್ದಿನ ಪ್ರಶಸ್ತಿ ಫೈಟ್'ಗೆ ಬದ್ಧವೈರಿಗಳಾದ ಭಾರತ ಹಾಗೂ ಆಸ್ಟ್ರೇಲಿಯಾ ಆಟಗಾರರು ಸಜ್ಜಾಗುತ್ತಿದ್ದಾರೆ. ಫೈನಲ್ ಪಂದ್ಯಕ್ಕೆ ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣ ಸಾಕ್ಷಿಯಾಗಲಿದೆ. ಈ ಗೂಗಲ್ ತನ್ನ ಸರ್ಚ್ ಹೋಮ್ ಪೇಜ್ ನಲ್ಲಿ ವಿಶೇಷ ಡೂಡಲ್ ಬಿಡಿಸಿ, ಸಂಭ್ರಮಿಸುತ್ತಿದೆ.

ಇಂದಿನ ಡೂಡಲ್ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 2023 ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ ಫೈನಲ್‌ ಪಂದ್ಯವನ್ನು ಸಂಭ್ರಮಿಸುವುದಾಗಿದೆ ಎಂದು ಗೂಗಲ್ ತನ್ನ ಡೂಡಲ್ ಅನ್ನು ವಿವರಿಸಿದೆ.

ಇಂದಿನ ಡೂಡಲ್ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 2023 ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ ಅನ್ನು ಆಚರಿಸುತ್ತಿದೆ ಎಂದು ಹೇಳಿದೆ,

ಐಕಾನಿಕ್ ಕ್ರಿಕೆಟ್ ಅಂಶಗಳ ನಡುವೆ ವಿಶ್ವಕಪ್‌ ಕಣ್ಣಗೆ ಕಟ್ಟುವಂತೆ ಗೂಗಲ್ ಡೂಡಲ್ ಗ್ರಾಂಡ್ ಫೈನಲ್ ಪಂದ್ಯದ ಸಾರವನ್ನು ಸೆರೆಹಿಡಿದಿದೆ.

ಇಡೀ ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತವು ಸತತ 10 ಪಂದ್ಯಗಳನ್ನು ಗೆದ್ದಿದೆ. ಒಂದೇ ಒಂದು ಪಂದ್ಯವನ್ನು ಸೋಲದೆ ಅಜೇಯವಾಗಿ ಫೈನಲ್‌ಗೆ ತಲುಪಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಮೊದಲ ಸೆಮಿಫೈನಲ್‌ನಲ್ಲಿ ಭಾರತ ತಂಡವು ನ್ಯೂಜಿಲೆಂಡ್ ತಂಡವನ್ನು 70 ರನ್‌ಗಳಿಂದ ಸೋಲಿಸಿತು.

ಕೋಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ನವೆಂಬರ್ 16 ರಂದು ನಡೆದ ಎರಡನೇ ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ದಕ್ಷಿಣ ಆಫ್ರಿಕಾವನ್ನು 3 ವಿಕೆಟ್‌ಗಳಿಂದ ಸೋಲಿಸಿತು. ಆಸ್ಟ್ರೇಲಿಯಾ ತನ್ನ ಆರಂಭಿಕ ಪಂದ್ಯದಲ್ಲಿ ಭಾರತ ಮತ್ತು ಲೀಗ್ ಹಂತದಲ್ಲಿ ತನ್ನ ಎರಡನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಸೋಲು ಅನುಭವಿಸಿದೆ. ಆದರೆ ನಂತರ ನಡೆದ ಸತತ ಎಂಟು ಪಂದ್ಯಗಳನ್ನು ಗೆದ್ದುಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್