ಸಾಂದರ್ಭಿಕ ಚಿತ್ರ 
ದೇಶ

ರಾಜಸ್ಥಾನದಲ್ಲಿ ಭೀಕರ ರಸ್ತೆ ಅಪಘಾತ; ಚುನಾವಣಾ ಕರ್ತವ್ಯಕ್ಕೆ ತೆರಳುತ್ತಿದ್ದ ಐವರು ಪೊಲೀಸರು ಸಾವು

ಭಾನುವಾರ ಮುಂಜಾನೆ ರಾಜಸ್ಥಾನದ ಚುರು ಜಿಲ್ಲೆಯಲ್ಲಿ ನಿಂತಿದ್ದ ಟ್ರಕ್‌ಗೆ ವಾಹನ ಡಿಕ್ಕಿ ಹೊಡೆದ ಪರಿಣಾಮ ಐವರು ಪೊಲೀಸರು ಸಾವಿಗೀಡಾಗಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ. ಸುಜನ್‌ಗಢ್ ಸದರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಚುರು ಪೊಲೀಸ್ ವರಿಷ್ಠಾಧಿಕಾರಿ ಪ್ರವೀಣ್ ನಾಯಕ್ ತಿಳಿಸಿದ್ದಾರೆ.

ಜೈಪುರ: ಭಾನುವಾರ ಮುಂಜಾನೆ ರಾಜಸ್ಥಾನದ ಚುರು ಜಿಲ್ಲೆಯಲ್ಲಿ ನಿಂತಿದ್ದ ಟ್ರಕ್‌ಗೆ ವಾಹನ ಡಿಕ್ಕಿ ಹೊಡೆದ ಪರಿಣಾಮ ಐವರು ಪೊಲೀಸರು ಸಾವಿಗೀಡಾಗಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ.

ಸುಜನ್‌ಗಢ್ ಸದರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಚುರು ಪೊಲೀಸ್ ವರಿಷ್ಠಾಧಿಕಾರಿ ಪ್ರವೀಣ್ ನಾಯಕ್ ತಿಳಿಸಿದ್ದಾರೆ.

ಚುನಾವಣಾ ಕರ್ತವ್ಯಕ್ಕೆಂದು ಪೊಲೀಸರು ತಾರಾನಗರಕ್ಕೆ ತೆರಳುತ್ತಿದ್ದರು. ಮೃತರನ್ನು ಖಿಂವ್ಸರ್ ಪೊಲೀಸ್ ಠಾಣೆಯ ಎಎಸ್‌ಐ ರಾಮಚಂದ್ರ, ಕಾನ್‌ಸ್ಟೆಬಲ್‌ಗಳಾದ ಕುಂಭರಾಮ್, ಸುರೇಶ್ ಮೀನಾ, ಥನರಾಮ್ ಮತ್ತು ಮಹೇಂದ್ರ ಎಂದು ಗುರುತಿಸಲಾಗಿದೆ.

ಅಪಘಾತದಲ್ಲಿ ಮೃತಪಟ್ಟವರಿಗೆ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸಂತಾಪ ಸೂಚಿಸಿದ್ದಾರೆ.

'ಇಂದು ಮುಂಜಾನೆ, ಚುರುವಿನ ಸುಜನ್‌ಗಢ್ ಸದರ್ ಪ್ರದೇಶದಲ್ಲಿ ಸಂಭವಿಸಿದ ವಾಹನ ಅಪಘಾತದಲ್ಲಿ ಪೊಲೀಸರ ಸಾವು-ನೋವುಗಳ ಬಗ್ಗೆ ದುಃಖದ ಸುದ್ದಿ ಬಂದಿದೆ. ಈ ಅಪಘಾತದಲ್ಲಿ ಮೃತಪಟ್ಟ ಎಲ್ಲಾ ಪೊಲೀಸರ ಕುಟುಂಬಗಳಿಗೆ ನಮ್ಮ ತೀವ್ರ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ' ಎಂದು ಅವರು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್

ಶಕ್ತಿ, ಜ್ಞಾನ, ಸಂಸ್ಕೃತಿ, ಸಮಾನತೆಯ ಸಂಗಮ ಮೈಸೂರು ದಸರಾ: ಸಿಎಂ ಡಿಕೆ ಶಿವಕುಮಾರ್