ರಾಹುಲ್ ಗಾಂಧಿ 
ದೇಶ

ಜಾತಿ ಸಮೀಕ್ಷೆ ದೇಶದ ಎಕ್ಸ್ ರೇ ಇದ್ದಂತೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗಣತಿ ಗ್ಯಾರಂಟಿ: ರಾಹುಲ್ ಗಾಂಧಿ

ಜಾತಿ ಗಣತಿ ದೇಶದ 'ಎಕ್ಸ್-ರೇ' ಎಂದು ಬಣ್ಣಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಾತಿ ಗಣತಿ ನಡೆಸಲಾಗುವುದು ಎಂದು ಮಂಗಳವಾರ ಹೇಳಿದ್ದಾರೆ.

ಜೈಪುರ: ಜಾತಿ ಗಣತಿ ದೇಶದ 'ಎಕ್ಸ್-ರೇ' ಎಂದು ಬಣ್ಣಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಾತಿ ಗಣತಿ ನಡೆಸಲಾಗುವುದು ಎಂದು ಮಂಗಳವಾರ ಹೇಳಿದ್ದಾರೆ.

ಇಂದು ರಾಜಸ್ಥಾನದ ಉದಯಪುರದ ವಲ್ಲಭನಗರದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜಸ್ಥಾನದಲ್ಲಿ ಜಾತಿ ಗಣತಿ ನಡೆಸಲಿದೆ ಮತ್ತು ನಮ್ಮ ಪಕ್ಷ ಕೇಂದ್ರದಲ್ಲಿ ಸರ್ಕಾರ ರಚಿಸಿದರೆ ರಾಷ್ಟ್ರ ಮಟ್ಟದಲ್ಲಿಯೂ ಜಾತಿ ಗಣತಿ ಮಾಡುತ್ತೇವೆ ಎಂದು ಭರವಸೆ ನೀಡಿದರು.

ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಇಂದು ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಜಾತಿ ಸಮೀಕ್ಷೆ, ರೈತರಿಗೆ 2 ಲಕ್ಷ ರೂ.ವರೆಗೆ ಬಡ್ಡಿ ರಹಿತ ಸಾಲ ಮತ್ತು 10 ಲಕ್ಷ ಉದ್ಯೋಗಾವಕಾಶಗಳು ಸೇರಿದಂತೆ ಹಲವು ಭರವಸೆಗಳನ್ನು ನೀಡಿದೆ.

ಬಿಹಾರದಲ್ಲಿ ನಡೆಸಿದ ಜಾತಿ ಗಣತಿ ರೀತಿಯಲ್ಲೇ ರಾಜಸ್ಥಾನದಲ್ಲೂ ಜಾತಿ ಸಮೀಕ್ಷೆ ನಡೆಸಲಾಗುವುದು ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಈ ಹಿಂದೆ ಹೇಳಿದ್ದರು.

ಈ ವಿಷಯದ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್, ಈ ಹಿಂದೆ ಪ್ರಧಾನಿ ತಾನು ಒಬಿಸಿ ಎಂದು ಹೇಳುತ್ತಿದ್ದರು. ಆದರೆ ತಾವು ಜಾತಿ ಗಣತಿಗೆ ಬೇಡಿಕೆ ಎತ್ತಿದಾಗ, ಮೋದಿ ಭಾರತದಲ್ಲಿ ಒಂದೇ ಜಾತಿ ಎಂದು ಹೇಳಲು ಪ್ರಾರಂಭಿಸಿದ್ದಾರೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?