ದೇಶ

ದೆಹಲಿ ಅಬಕಾರಿ ಹಗರಣ: ಸಿಸೋಡಿಯಾ ನ್ಯಾಯಾಂಗ ಬಂಧನ ಡಿಸೆಂಬರ್ 11 ರವರೆಗೆ ವಿಸ್ತರಣೆ

Lingaraj Badiger

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮಾಜಿ ಉಪಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಅವರ ನ್ಯಾಯಾಂಗ ಬಂಧನ ಅವಧಿಯನ್ನು ರೂಸ್‌ ಅವೆನ್ಯೂ ಕೋರ್ಟ್ ಮಂಗಳವಾರ ಡಿಸೆಂಬರ್‌ 11ರವರೆಗೆ ವಿಸ್ತರಿಸಿದೆ.

ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯ, ಜಾರಿ ನಿರ್ದೇಶನಾಲಯವು ಇನ್ನೂ ಹಲವಾರು ದಾಖಲೆಗಳನ್ನು ಸಲ್ಲಿಸಬೇಕಾಗಿದೆ ಎಂಬುದನ್ನು ಗಮನಿಸಿತು ಮತ್ತು ಆರೋಪಿಯ ನ್ಯಾಯಾಂಗ ಬಂಧನವನ್ನು ಡಿಸೆಂಬರ್ 11ರ ವರೆಗೆ ವಿಸ್ತರಿಸಿ ಆದೇಶಿಸಿದೆ.

ಫೆಬ್ರವರಿ 2023 ರಲ್ಲಿ, ದೆಹಲಿಯ ಹೊಸ ಅಬಕಾರಿ ನೀತಿ ರಚನೆ ಮತ್ತು ಅನುಷ್ಠಾನದಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿದೆ. ಅಬಕಾರಿ ನೀತಿಯಲ್ಲಿ ಅಕ್ರಮ ನಡೆದಿದೆ ಎಂದು ಪ್ರತಿಪಕ್ಷಗಳು ಆರೋಪಿಸಿದ ನಂತರ ಈ ನೀತಿಯನ್ನು ಹಿಂಪಡೆಯಲಾಗಿದೆ. 

ಸದ್ಯ ಸಿಸೋಡಿಯಾ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಸುಪ್ರೀಂ ಕೋರ್ಟ್ ಕೂಡ ಎಎಪಿ ನಾಯಕನಿಗೆ ಜಾಮೀನು ನಿರಾಕರಿಸಿದೆ.

SCROLL FOR NEXT