ನ್ಯಾಷನಲ್ ಹೆರಾಲ್ಡ್ ಪ್ರಕರಣ 
ದೇಶ

752 ಕೋಟಿ ರೂ ಮೌಲ್ಯದ ನ್ಯಾಷನಲ್ ಹೆರಾಲ್ಡ್ ಆಸ್ತಿ ಜಪ್ತಿ ಮಾಡಿದ ಇಡಿ

ಮಹತ್ವದ ಬೆಳವಣಿಗೆಯಲ್ಲಿ ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಮಾಲೀಕತ್ವದ ಸುಮಾರು 752 ಕೋಟಿ ರೂ ಮೌಲ್ಯದ ಆಸ್ತಿ-ಪಾಸ್ತಿಗಳನ್ನು ಜಪ್ತಿ ಮಾಡಿದೆ.

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಮಾಲೀಕತ್ವದ ಸುಮಾರು 752 ಕೋಟಿ ರೂ ಮೌಲ್ಯದ ಆಸ್ತಿ-ಪಾಸ್ತಿಗಳನ್ನು ಜಪ್ತಿ ಮಾಡಿದೆ.

ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಮಾಲೀಕತ್ವ ಹೊಂದಿರುವ ಕಾಂಗ್ರೆಸ್ ಪಕ್ಷದ ಪ್ರವರ್ತಿತ ಯಂಗ್ ಇಂಡಿಯನ್ ವಿರುದ್ಧ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ 751.9 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ ಎಂದು ಜಾರಿ ನಿರ್ದೇಶನಾಲಯ ಮಂಗಳವಾರ ತಿಳಿಸಿದೆ. ಪತ್ರಿಕೆಯ ಪ್ರಕಾಶಕ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ ಮತ್ತು ಅದರ ಹಿಡುವಳಿ ಕಂಪನಿ ಯಂಗ್ ಇಂಡಿಯನ್ ಸಂಸ್ಥೆ ವಿರುದ್ಧ ಮನಿ ಲಾಂಡರಿಂಗ್ ತಡೆ ಕಾಯ್ದೆಯಡಿ ತಾತ್ಕಾಲಿಕ ಆದೇಶವನ್ನು ಹೊರಡಿಸಲಾಗಿದೆ ಎಂದು ಕೇಂದ್ರ ತನಿಖಾ ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ.

ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ ಭಾರತದ ದೆಹಲಿ, ಮಹಾರಾಷ್ಟ್ರದ ಮುಂಬೈ ಮತ್ತು ಉತ್ತರ ಪ್ರದೇಶದ ಲಖನೌ ನಂತಹ ಅನೇಕ ನಗರಗಳಲ್ಲಿ ಸುಮಾರು 661.69 ಕೋಟಿ ರೂಪಾಯಿಗಳಷ್ಟು ಸ್ಥಿರಾಸ್ತಿಗಳ ರೂಪದಲ್ಲಿ ಅಪರಾಧದ ಆದಾಯವನ್ನು ಹೊಂದಿದೆ ಮತ್ತು ಯಂಗ್ ಇಂಡಿಯನ್ ಸಂಸ್ಥೆ ಕೂಡ ಅಪರಾಧದ ಆದಾಯವನ್ನು ಹೊಂದಿದೆ ಎಂದು ತನಿಖೆಯಿಂದ ತಿಳಿದುಬಂದಿದೆ. ಎಜೆಎಲ್‌ನ ಈಕ್ವಿಟಿ ಷೇರುಗಳಲ್ಲಿ ಹೂಡಿಕೆಯ ರೂಪದಲ್ಲಿ 90.21 ಕೋಟಿ ರೂ. ಹೊಂದಿದೆ ಎಂದು ಇಡಿ ಆರೋಪಿಸಿದೆ.

ಈ ಪ್ರಕರಣದಲ್ಲಿ ಕಾಂಗ್ರೆಸ್‌ ಪಕ್ಷದ ಸೋನಿಯಾ ಗಾಂಧಿ, ಅವರ ಪುತ್ರ ರಾಹುಲ್ ಗಾಂಧಿ ಮತ್ತು ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗಳನ್ನು ಈಗಾಗಲೇ ದಾಖಲಿಸಿತ್ತು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!