ಸಾಂದರ್ಭಿಕ ಚಿತ್ರ 
ದೇಶ

ಜಾರ್ಖಂಡ್‌: ವಿದ್ಯುತ್ ತಗುಲಿ ಎರಡು ಮರಿಯಾನೆ ಸೇರಿ ಐದು ಆನೆ ಸಾವು

ಜಾರ್ಖಂಡ್‌ನ ಪೂರ್ವ ಸಿಂಗ್‌ಭೂಮ್ ಜಿಲ್ಲೆಯಲ್ಲಿ ಸೋಮವಾರ ರಾತ್ರಿ ಎರಡು ಆನೆ ಮರಿ ಸೇರಿದಂತೆ ಐದು ಆನೆಗಳು ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿವೆ ಎಂದು ಅರಣ್ಯ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಪೂರ್ವ ಸಿಂಗ್‌ಭೂಮ್: ಜಾರ್ಖಂಡ್‌ನ ಪೂರ್ವ ಸಿಂಗ್‌ಭೂಮ್ ಜಿಲ್ಲೆಯಲ್ಲಿ ಸೋಮವಾರ ರಾತ್ರಿ ಎರಡು ಆನೆ ಮರಿ ಸೇರಿದಂತೆ ಐದು ಆನೆಗಳು ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿವೆ ಎಂದು ಅರಣ್ಯ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಘಟ್‌ಸಿಲಾ ಉಪವಿಭಾಗದ ಜಮ್‌ಶೆಡ್‌ಪುರದಿಂದ ಸುಮಾರು 45 ಕಿಮೀ ದೂರದಲ್ಲಿರುವ ಮುಸಾಬಾನಿಯ ಕಾಪರ್ ಟೌನ್‌ಶಿಪ್‌ನಲ್ಲಿರುವ ಬೆನಿಯಾಸಾಯಿ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ವಿಭಾಗೀಯ ಅರಣ್ಯಾಧಿಕಾರಿ ಮಮತಾ ಪ್ರಿಯದರ್ಶಿ ಅವರು ಪಿಟಿಐಗೆ ತಿಳಿಸಿದ್ದಾರೆ.

ಅರಣ್ಯಾಧಿಕಾರಿಗಳು ಸ್ಥಳಕ್ಕೆ ಧಾವಿಸಿ, ಅದೇ ಹಿಂಡಿನ ಇನ್ನೂ ನಾಲ್ಕು ಆನೆಗಳನ್ನು ಓಡಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಇತರ ನಾಲ್ಕು ಆನೆಗಳನ್ನು ಸುರಕ್ಷಿತವಾಗಿ ಓಡಿಸಿದ ನಂತರವೇ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT