ಕಾರ್ಮಿಕರ ಮೊದಲ ವಿಡಿಯೋ 
ದೇಶ

ನಿರ್ಮಾಣ ಹಂತದ ಸುರಂಗ ಕುಸಿತ: ಒಳಗಡೆ ಸಿಲುಕಿರುವ ಕಾರ್ಮಿಕರ ಮೊದಲ ವಿಡಿಯೋ ಬಿಡುಗಡೆ!

ಉತ್ತರಾಖಂಡ ರಾಜ್ಯದ ಉತ್ತರಕಾಶಿಯಲ್ಲಿ ಕುಸಿದ ಬಿದ್ದ ನಿರ್ಮಾಣ ಹಂತದ ಸುರಂಗದ ಒಳಗಡೆ ಸಿಲುಕಿರುವ ಕಾರ್ಮಿಕರ ಮೊದಲ ವಿಡಿಯೋ ಬಿಡುಗಡೆಯಾಗಿದೆ.

ಉತ್ತರಕಾಶಿ: ಉತ್ತರಾಖಂಡ ರಾಜ್ಯದ ಉತ್ತರಕಾಶಿಯಲ್ಲಿ ಕುಸಿದ ಬಿದ್ದ ನಿರ್ಮಾಣ ಹಂತದ ಸುರಂಗದ ಒಳಗಡೆ ಸಿಲುಕಿರುವ ಕಾರ್ಮಿಕರ ಮೊದಲ ವಿಡಿಯೋ ಬಿಡುಗಡೆಯಾಗಿದೆ.

ನಿನ್ನೆ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವವರಿಗೆ 6 ಇಂಚಿನ ಪೈಪ್ ಮೂಲಕ ಹೆಚ್ಚಿನ ಪ್ರಮಾಣದಲ್ಲಿ ಆಹಾರ, ಆಮ್ಲಜನಕ ಪೂರೈಕೆ ಮಾಡುವುದಕ್ಕಾಗಿ ವ್ಯವಸ್ಥೆ ಮಾಡಲಾಗಿತ್ತು. ಈ ಪೈಪ್ ನ ಮೂಲಕ, 8 ದಿನಗಳಿಂದ ಸುರಂಗದ ಒಳಗೆ ಸಿಲುಕಿರುವ 41 ಕಾರ್ಮಿಕರ ದೃಶ್ಯಗಳನ್ನು ಪಡೆಯುವುದಕ್ಕೆ ಸಾಧ್ಯವಾಗಿದೆ. ಇದಕ್ಕೂ ಮುನ್ನ ಸುರಂಗದ ಮೇಲ್ಭಾಗದಲ್ಲಿದ್ದ 4 ಇಂಚಿನ ಟ್ಯೂಬ್ ಮೂಲಕ ಆಮ್ಲಜನಕ ಹಾಗೂ ಅಗತ್ಯ ವಸ್ತುಗಳನ್ನು ಪೂರೈಕೆ ಮಾಡಲಾಗುತ್ತಿತ್ತು. 

"ನಾವು 53 ಮೀಟರ್ ಪೈಪ್ ನ್ನು ಅವಶೇಷಗಳ ಇನ್ನೊಂದು ಬದಿಗೆ ಕಳುಹಿಸಿದ್ದೇವೆ ಮತ್ತು ಸಿಲುಕಿರುವ ಕಾರ್ಮಿಕರು ನಮ್ಮ ಧ್ವನಿ ಕೇಳುವುದಕ್ಕೆ ಸಾಧ್ಯವಾಗುತ್ತದೆ ಎಂದು ರಾಷ್ಟ್ರೀಯ ಹೆದ್ದಾರಿಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ನಿರ್ದೇಶಕ ಅಂಶು ಮನೀಶ್ ಖಲ್ಖೋ ತಿಳಿಸಿದ್ದಾರೆ. 

ಉತ್ತರ ಕಾಶಿ ಜಿಲ್ಲೆಯ ಬ್ರಹ್ಮಖಾಲ್-ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಲ್ಕ್ಯಾರ್ ಮತ್ತು ದಾಂಡಲ್ ಗಾಂವ್ ನಡುವೆ ನಿರ್ಮಿಸಲಾಗುತ್ತಿರುವ ನಾಲ್ಕೂವರೆ ಕಿ.ಮೀ ಉದ್ದದ ಸುರಂಗದ 150 ಮೀಟರ್ ನಷ್ಟು ಭಾಗ ನವೆಂಬರ್ 12 ರಂದು ಕುಸಿದಿತ್ತು. ಅದರ ಒಳಗಡೆ 41 ಕಾರ್ಮಿಕರು ಸಿಲುಕಿದ್ದು,ಕಳೆದ ಎಂಟು ದಿನಗಳಿಂದಲೂ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ