ಅಸ್ಸಾಂ: ತಿನ್ಸುಕಿಯಾದಲ್ಲಿ ಸೇನಾ ಕ್ಯಾಂಪ್ ಹೊರಗೆ ಗ್ರೆನೇಡ್ ಸ್ಫೋಟ
ಅಸ್ಸಾಂನ ತಿನ್ಸುಕಿಯಾ ಜಿಲ್ಲೆಯ ಸೇನಾ ಶಿಬಿರದ ಹೊರಗೆ ಗ್ರೆನೇಡ್ ಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದೆ.
ತಿನ್ಸುಕಿಯಾ: ಅಸ್ಸಾಂನ ತಿನ್ಸುಕಿಯಾ ಜಿಲ್ಲೆಯ ಸೇನಾ ಶಿಬಿರದ ಹೊರಗೆ ಗ್ರೆನೇಡ್ ಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದೆ.
ನಿನ್ನೆ ಸಂಜೆ ಡಿರಾಕ್ನಲ್ಲಿರುವ ಸೇನಾ ಶಿಬಿರದ ಗೇಟ್ಗಳ ಮುಂದೆ ಸ್ಫೋಟ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಘಟನೆಯಲ್ಲಿ ಯಾವುದೇ ಸಾವುನೋವುಗಳು ಸಂಭವಿಸಿಲ್ಲ ಈ ಬಗ್ಗೆ ಸ್ಥಳೀಯ ಪೊಲೀಸರು ತನಿಖೆ ಆರಂಭಿಸಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಇದನ್ನೂ ಓದಿ: ರಜೌರಿಯಲ್ಲಿ ಉಗ್ರರ ವಿರುದ್ಧ ಎನ್ಕೌಂಟರ್: ಕರ್ನಾಟಕದ ಯೋಧ ಸೇರಿದಂತೆ ನಾಲ್ವರು ಹುತಾತ್ಮ, ಮುಂದುವರೆದ ಕಾರ್ಯಾಚರಣೆ
ನಾವು ಪ್ರಕರಣದ ತನಿಖೆ ನಡೆಸುತ್ತಿದ್ದೇವೆ ಮತ್ತು ಅಪರಾಧಿಗಳನ್ನು ಹಿಡಿಯಲು ಹುಡುಕಾಟವನ್ನು ಪ್ರಾರಂಭಿಸಿದ್ದೇವೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದರು.
ಅಕ್ಟೋಬರ್ 1 ರಿಂದ, ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರಗಳು) ಕಾಯಿದೆ, 1958 (AFSPA) ಅನ್ವಯವನ್ನು ಅಸ್ಸಾಂನ 4 ಜಿಲ್ಲೆಗಳಲ್ಲಿ – ದಿಬ್ರುಗಢ್, ತಿನ್ಸುಕಿಯಾ, ಶಿವಸಾಗರ್ ಮತ್ತು ಚರೈಡಿಯೊದಲ್ಲಿ ವಿಸ್ತರಿಸಲಾಗಿತ್ತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.