ಸಾಂದರ್ಭಿಕ ಚಿತ್ರ 
ದೇಶ

ಡೀಪ್‌ಫೇಕ್‌ಗೆ ಕಡಿವಾಣ ಹಾಕಲು ಶೀಘ್ರದಲ್ಲೇ ಹೊಸ ಕಾನೂನು; ಐಟಿ ಸಚಿವ ಅಶ್ವಿನಿ ವೈಷ್ಣವ್

ಡೀಪ್‌ಫೇಕ್‌ಗಳು ಪ್ರಜಾಪ್ರಭುತ್ವಕ್ಕೆ ಹೊಸ ಅಪಾಯ ಎಂದ ಕೇಂದ್ರ ಐಟಿ ಸಚಿವ ಅಶ್ವಿನಿ ವೈಷ್ಣವ್ ಅವರು, ಡೀಪ್‌ಫೇಕ್‌ಗಳಿಗೆ ಕಡಿವಾಣ ಹಾಕಲು ಸರ್ಕಾರ ಶೀಘ್ರದಲ್ಲೇ ಹೊಸ ನಿಯಮಾವಳಿಗಳನ್ನು ರೂಪಿಸಲಿದೆ ಎಂದು ಗುರುವಾರ...

ನವದೆಹಲಿ: ಡೀಪ್‌ಫೇಕ್‌ಗಳು ಪ್ರಜಾಪ್ರಭುತ್ವಕ್ಕೆ ಹೊಸ ಅಪಾಯ ಎಂದ ಕೇಂದ್ರ ಐಟಿ ಸಚಿವ ಅಶ್ವಿನಿ ವೈಷ್ಣವ್ ಅವರು, ಡೀಪ್‌ಫೇಕ್‌ಗಳಿಗೆ ಕಡಿವಾಣ ಹಾಕಲು ಸರ್ಕಾರ ಶೀಘ್ರದಲ್ಲೇ ಹೊಸ ನಿಯಮಾವಳಿಗಳನ್ನು ರೂಪಿಸಲಿದೆ ಎಂದು ಗುರುವಾರ ಹೇಳಿದ್ದಾರೆ.

ಇಂದು ಡೀಪ್‌ಫೇಕ್ ಕುರಿತು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳನ್ನು ಭೇಟಿ ಮಾಡಿ, ಚರ್ಚಿಸಿದ ಸಚಿವರು, ಪತ್ತೆ, ತಡೆಗಟ್ಟುವಿಕೆ, ವರದಿ ಮಾಡುವ ಕಾರ್ಯವಿಧಾನವನ್ನು ಬಲಪಡಿಸುವುದು ಮತ್ತು ಬಳಕೆದಾರರಿಗೆ ಜಾಗೃತಿ ಮೂಡಿಸುವಂತಹ ಕೆಲಸದ ಅಗತ್ಯವನ್ನು ಕಂಪನಿಗಳು ಒಪ್ಪಿಕೊಂಡಿವೆ ಎಂದರು.

"ನಾವು ಇಂದೇ ಕರಡು ನಿಯಮಾವಳಿಯನ್ನು ಸಿದ್ಧಪಡಿಸಲು ಪ್ರಾರಂಭಿಸುತ್ತೇವೆ ಮತ್ತು ಕಡಿಮೆ ಸಮಯದಲ್ಲಿ ಡೀಪ್‌ಫೇಕ್‌ಗಳಿಗಾಗಿ ಹೊಸ ನಿಯಮಾವಳಿಗಳನ್ನು ರೂಪಿಸುತ್ತೇವೆ; ಇದು ಅಸ್ತಿತ್ವದಲ್ಲಿರುವ ಚೌಕಟ್ಟನ್ನು ತಿದ್ದುಪಡಿ ಮಾಡುವ ಅಥವಾ ಹೊಸ ನಿಯಮಗಳು ಅಥವಾ ಹೊಸ ಕಾನೂನನ್ನು ತರುವ ರೂಪದಲ್ಲಿರಬಹುದು" ಎಂದು ವೈಷ್ಣವ್ ಹೇಳಿದ್ದಾರೆ.

ಡೀಪ್‌ಫೇಕ್‌ಗಳು ಪ್ರಜಾಪ್ರಭುತ್ವಕ್ಕೆ ಹೊಸ ಬೆದರಿಕೆಯಾಗಿ ಹೊರಹೊಮ್ಮಿದೆ. ಇದನ್ನು ಎದುರಿಸಲು ನಾವು ನಮ್ಮ ಮುಂದಿನ ಸಭೆಯನ್ನು ಡಿಸೆಂಬರ್ ಮೊದಲ ವಾರದಲ್ಲಿ ನಡೆಸುತ್ತೇವೆ. ಅದು ಇಂದಿನ ನಿರ್ಧಾರಗಳ ಮೇಲೆ ಮುಂದಿನ ಕ್ರಮ ಮತ್ತು ಕರಡು ನಿಯಮಾವಳಿಯಲ್ಲಿ ಏನನ್ನು ಸೇರಿಸಬೇಕು ಎಂಬುದರ ಬಗ್ಗೆಯೂ ಚರ್ಚಿಸುತ್ತೇವೆ" ಎಂದು ವೈಷ್ಣವ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್