ಸಾಂದರ್ಭಿಕ ಚಿತ್ರ 
ದೇಶ

ಚೀನಾದಲ್ಲಿ H9N2 ಉಲ್ಬಣ: ಚಿಕಿತ್ಸೆ ಸನ್ನದ್ಧತೆ ಪರಿಶೀಲನೆಗೆ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸೂಚನೆ

ಚೀನಾದಲ್ಲಿ ಉಲ್ಬಣವಾಗಿರುವ ಹೆಚ್9ಎನ್2 ಸಾಂಕ್ರಾಮಿಕದ ಹಿನ್ನಲೆಯಲ್ಲಿ ಎಚ್ಚೆತ್ತುಕೊಂಡಿರುವ ಕೇಂದ್ರ ಸರ್ಕಾರ ಕೂಡಲೇ ಚಿಕಿತ್ಸೆ ಸನ್ನದ್ಧತೆ ಪರಿಶೀಲನೆ ನಡೆಸುವಂತೆ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ.

ನವದೆಹಲಿ: ಚೀನಾದಲ್ಲಿ ಉಲ್ಬಣವಾಗಿರುವ ಹೆಚ್9ಎನ್2 ಸಾಂಕ್ರಾಮಿಕದ ಹಿನ್ನಲೆಯಲ್ಲಿ ಎಚ್ಚೆತ್ತುಕೊಂಡಿರುವ ಕೇಂದ್ರ ಸರ್ಕಾರ ಕೂಡಲೇ ಚಿಕಿತ್ಸೆ ಸನ್ನದ್ಧತೆ ಪರಿಶೀಲನೆ ನಡೆಸುವಂತೆ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ.

ಹೆಚ್9ಎನ್2 ಸಾಂಕ್ರಾಮಿಕ ಉಲ್ಬಣದ ಬೆನ್ನಲ್ಲೇ ಚೀನಾದಲ್ಲಿ ಉಸಿರಾಟ ಸಂಬಂಧಿ ಅನಾರೋಗ್ಯ ಪ್ರಕರಣಗಳು ಹೆಚ್ಚುತ್ತಿವೆ. ಅದರಲ್ಲೂ ಮಕ್ಕಳಲ್ಲಿ ಉಸಿರಾಟದ ಸಮಸ್ಯೆ ಪ್ರಕರಣಗಳು ಗಣನೀಯವಾಗಿ ಏರಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಭಾರತದಲ್ಲಿ ಅಂತಹ ಪರಿಸ್ಥಿತಿ ಎದುರಾದರೆ ಅದನ್ನು ನಿರ್ವಹಿಸುವ ನಿಟ್ಟಿನಲ್ಲಿ ಚಿಕಿತ್ಸೆಗೆ ಬೇಕಾದ ತಯಾರಿ ಬಗ್ಗೆ ಪರಿಶೀಲನೆ ನಡೆಸಲು ಕೇಂದ್ರದ ಆರೋಗ್ಯ ಸಚಿವಾಲಯ ಮುಂದಾಗಿದೆ. 

ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸರ್ಕಾರಿ ಆಸ್ಪತ್ರೆಗಳಲ್ಲಿ ಸನ್ನದ್ಧತೆಯ ಕ್ರಮಗಳನ್ನು ತಕ್ಷಣವೇ ಪರಿಶೀಲಿಸಬೇಕು ಎಂದು ಅದು ಸಲಹೆ ನೀಡಿದೆ. ದೇಶವು ಕೋವಿಡ್‌ನಿಂದ ಬಳಲಿರುವ ಹಿನ್ನೆಲೆಯಲ್ಲಿ ಅದನ್ನು ಗಮನದಲ್ಲಿಟ್ಟುಕೊಂಡು ಪರಿಷ್ಕೃತ ಕಾರ್ಯಾಚರಣೆಯ ಮಾರ್ಗಸೂಚಿಗಳನ್ನು ಜಾರಿಗೆ ತರಬೇಕು ಎಂದು ತಿಳಿಸಲಾಗಿದೆ. ಶೀತ ಜ್ವರ, ಉಸಿರಾಟ ಸಮಸ್ಯೆಗಳ ಬಗ್ಗೆ ಜಿಲ್ಲಾ ಮತ್ತು ರಾಜ್ಯಮಟ್ಟದಲ್ಲಿ ನಿಕಟವಾಗಿ ಮೇಲ್ವಿಚಾರಣೆ ಮಾಡಬೇಕು. ಮೈಕೋಪ್ಲಾಸ್ಮಾ ನ್ಯುಮೋನಿಯಾ, ಕೋವಿಡ್ ಸೋಂಕಿನಿಂದ ಬಳಲಿದವರಲ್ಲಿ ಉಸಿರಾಟದ ಕಾಯಿಲೆಗಳು ಹೆಚ್ಚಾಗಿದ್ದು, ಆರೋಗ್ಯ ಸಚಿವಾಲಯವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಜನರು ಈ ಬಗ್ಗೆ ಆತಂಕಪಡುವ ಅಗತ್ಯವಿಲ್ಲ ಎಂದು ಅದು ಪ್ರಕಟಣೆಯಲ್ಲಿ ತಿಳಿಸಿದೆ.

'ಸದ್ಯ ನಡೆಯುತ್ತಿರುವ ಇನ್ಫ್ಲುಯೆನ್ಸ ಮತ್ತು ಚಳಿಗಾಲದ ದೃಷ್ಟಿಯಿಂದ ಈ ಕಾರ್ಯಾಚರಣೆ ಅತ್ಯಂತ ಮುಖ್ಯವಾಗಿದ್ದು, ಇದು ಉಸಿರಾಟದ ಕಾಯಿಲೆಯ ಪ್ರಕರಣಗಳಲ್ಲಿ ಹೆಚ್ಚಳಕ್ಕೆ ಕಾರಣವಾಗುತ್ತದೆ. ಭಾರತ ಸರ್ಕಾರವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ಯಾವುದೇ ಎಚ್ಚರಿಕೆಯ ಅಗತ್ಯವಿಲ್ಲ.

ಈ ಸಂಬಂಧ ಕೇಂದ್ರಾಡಳಿತ ಪ್ರದೇಶಗಳೂ ಸೇರಿದಂತೆ ಎಲ್ಲ ರಾಜ್ಯ ಸರ್ಕಾರಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯ ಪತ್ರ ಬರೆದಿದ್ದು, 'ಸಾರ್ವಜನಿಕ ಆರೋಗ್ಯ ಮತ್ತು ಆಸ್ಪತ್ರೆಯ ಸಿದ್ಧತೆಗಳಾದ ಹಾಸಿಗೆಗಳು, ಔಷಧಗಳು ಮತ್ತು ಇನ್ಫ್ಲುಯೆನ್ಸಕ್ಕೆ ಲಸಿಕೆಗಳು, ವೈದ್ಯಕೀಯ ಆಮ್ಲಜನಕ, ಪ್ರತಿಜೀವಕಗಳು, ವೈಯಕ್ತಿಕ ರಕ್ಷಣಾ ಸಾಧನಗಳು, ಪರೀಕ್ಷಾ ಕಿಟ್ ಗಳು ಮತ್ತು ಕಾರಕಗಳ ಲಭ್ಯತೆಯನ್ನು ತಕ್ಷಣವೇ ಪರಿಶೀಲಿಸುವಂತೆ ಸಲಹೆ ನೀಡಿದ್ದಾರೆ. ಇದಲ್ಲದೇ ಆಮ್ಲಜನಕ ಘಟಕಗಳು ಮತ್ತು ವೆಂಟಿಲೇಟರ್‌ಗಳ ಕಾರ್ಯನಿರ್ವಹಣೆ, ಮತ್ತು ಸೋಂಕು ನಿಯಂತ್ರಣ ಅಭ್ಯಾಸಗಳನ್ನು ಪರಿಶೀಲಿಸುವಂತೆ ಸೂಚಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT