ದೇಶ

ತಿರುಪತಿ ದೇಗುಲಕ್ಕೆ ಪ್ರಧಾನಿ ಭೇಟಿ, 140 ಕೋಟಿ ಭಾರತೀಯರ ಶ್ರೇಯಸ್ಸಿಗೆ ಪ್ರಾರ್ಥಿಸಿದೆ ಎಂದ ಮೋದಿ

Manjula VN

ತಿರುಪತಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಿರುಪತಿ ಬಾಲಾಜಿ ದೇವಸ್ಥಾನಕ್ಕೆ ಸೋಮವಾರ ಭೇಟಿ ನೀಡಿದ್ದು, ವೆಂಕಟೇಶ್ವರನ ದರ್ಶನ ಪಡೆದು ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದಿದ್ದಾರೆ.

ಈ ಕುರಿತ ಚಿತ್ರಗಳನ್ನು ಸ್ವತಃ ಪ್ರಧಾನಿ ಮೋದಿ ಅವರೇ ತಮ್ಮ ಅಧಿಕೃತ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಪೋಸ್ಟ್ ನಲ್ಲಿ '140 ಕೋಟಿ ಭಾರತೀಯರ ಸಮೃದ್ಧಿ ಮತ್ತು ಉತ್ತಮ ಆರೋಗ್ಯಕ್ಕಾಗಿ ವೆಂಕಟೇಶ್ವರನ ಬಳಿ ಪ್ರಾರ್ಥಿಸಿದೆ ಎಂದು ಹೇಳಿದ್ದಾರೆ.

ಭಾನುವಾರ ರಾತ್ರಿಯೇ ಪ್ರಧಾನಿ ತಿರುಮಲಕ್ಕೆ ಆಗಮಿಸಿದ್ದರು. ಆಂಧ್ರಪ್ರದೇಶದ ರಾಜ್ಯಪಾಲ ಎಸ್. ಅಬ್ದುಲ್ ನಜೀರ್ ಮತ್ತು ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು ರೇಣಿಗುಂಟಾ ವಿಮಾನ ನಿಲ್ದಾಣದಲ್ಲಿ ಮೋದಿ ಅವರನ್ನು ಬರಮಾಡಿಕೊಂಡಿದ್ದರು. ದೇವರ ದರ್ಶನದ ನಂತರ ಪ್ರಧಾನಿ ತೆಲಂಗಾಣಕ್ಕೆ ತೆರಳಲಿದ್ದಾರೆ.

ತೆಲಂಗಾಣದ 119 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 30 ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 3 ರಂದು ಫಲಿತಾಂಶ ಹೊರ ಬೀಳಲಿದೆ. ತೆಲಂಗಾಣಕ್ಕೂ ಮುನ್ನ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ಮಿಜೋರಾಂ ವಿಧಾನಸಭೆ ಚುನಾವಣೆಗೆ ಮತದಾನ ನಡೆದಿದೆ.

SCROLL FOR NEXT