ಸಾಂದರ್ಭಿಕ ಚಿತ್ರ 
ದೇಶ

ಜಾರ್ಖಂಡ್‌: ಭಾರಿ ಅಗ್ನಿ ಅವಘಡದಲ್ಲಿ ಆರು ವರ್ಷದ ಬಾಲಕಿ ಸಜೀವ ದಹನ, ನಾಲ್ವರ ಸ್ಥಿತಿ ಗಂಭೀರ

ಜಾರ್ಖಂಡ್‌ನ ಹಜಾರಿಬಾಗ್ ಪಟ್ಟಣದಲ್ಲಿ ಸಂಭವಿಸಿದ ದೊಡ್ಡ ಬೆಂಕಿ ಅವಘಡದಲ್ಲಿ ಆರು ವರ್ಷದ ಬಾಲಕಿ ಸುಟ್ಟು ಕರಕಲಾಗಿದ್ದು, ಇತರ ನಾಲ್ವರು ಸುಟ್ಟಗಾಯಗಳಿಂದ ಬಳಲುತ್ತಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಹಜಾರಿಬಾಗ್: ಜಾರ್ಖಂಡ್‌ನ ಹಜಾರಿಬಾಗ್ ಪಟ್ಟಣದಲ್ಲಿ ಸಂಭವಿಸಿದ ದೊಡ್ಡ ಬೆಂಕಿ ಅವಘಡದಲ್ಲಿ ಆರು ವರ್ಷದ ಬಾಲಕಿ ಸುಟ್ಟು ಕರಕಲಾಗಿದ್ದು, ಇತರ ನಾಲ್ವರು ಸುಟ್ಟಗಾಯಗಳಿಂದ ಬಳಲುತ್ತಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಮಾಳವಿಯಾ ಮಾರ್ಗದ ಜನನಿಬಿಡ ಮಾರುಕಟ್ಟೆ ಪ್ರದೇಶದಲ್ಲಿ ಸೋಮವಾರ ಸಂಜೆ ಕಾರ್ತಿಕ ಪೌರ್ಣಮಿ ಅಂಗವಾಗಿ ಜನರು 'ದಿಯಾಸ್' (ಮಣ್ಣಿನ ದೀಪಗಳು) ಹಚ್ಚಿದ ವೇಳೆ ದುರ್ಘಟನೆ ನಡೆದಿದೆ.

ಮಾರುಕಟ್ಟೆ ಪ್ರದೇಶದಲ್ಲಿನ ಖಾಸಗಿ ನಿವಾಸವೊಂದರಲ್ಲಿ ಮೊದಲಿಗೆ ಬೆಂಕಿ ಕಾಣಿಸಿಕೊಂಡಿತು. ತಕ್ಷಣವೇ ಪಕ್ಕದ ಕಟ್ಟಡಗಳಿಗೆ ಹರಡಿತು. ಮಧ್ಯರಾತ್ರಿವರೆಗೂ ಮುಂದುವರಿದ ಐದು ಗಂಟೆಗಳ ಕಾರ್ಯಾಚರಣೆಯ ನಂತರ ಬೆಂಕಿಯನ್ನು ನಂದಿಸಲಾಯಿತು ಎಂದು ಹಜಾರಿಬಾಗ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮನೋಜ್ ರತನ್ ಚೌಥೆ ತಿಳಿಸಿದ್ದಾರೆ. 

ಅಣ್ಣು ಎಂದು ಗುರುತಿಸಲಾದ ಆರು ವರ್ಷದ ಬಾಲಕಿ ಸಾವಿಗೀಡಾಗಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅವರು ಹೇಳಿದರು.

ಗಾಯಾಳುಗಳು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ. ಬೆಂಕಿ ಅವಘಡಕ್ಕೆ ಕಾರಣವೇನು ಎಂಬುದನ್ನು ಖಚಿತಪಡಿಸಿಕೊಳ್ಳಲು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್