ಸಾಂದರ್ಭಿಕ ಚಿತ್ರ 
ದೇಶ

ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಡ್ರೋನ್‌ ಒದಗಿಸಲು 1,261 ಕೋಟಿ ರೂ. ಯೋಜನೆಗೆ ಕೇಂದ್ರ ಅನುಮೋದನೆ

ಮುಂದಿನ ಹಣಕಾಸು ವರ್ಷದಿಂದ ಎರಡು ವರ್ಷಗಳವರೆಗೆ ಒಟ್ಟು ರೂ. 1, 261 ಕೋಟಿ ವೆಚ್ಚದೊಂದಿಗೆ  15,000 ಮಹಿಳಾ ಸ್ವ-ಸಹಾಯ ಗುಂಪುಗಳಿಗೆ (ಎಸ್‌ಎಚ್‌ಜಿ) ಡ್ರೋನ್‌ಗಳನ್ನು ಒದಗಿಸುವ ಕೇಂದ್ರ ಯೋಜನೆಗೆ ಕೇಂದ್ರ ಸಂಪುಟ ಒಪ್ಪಿಗೆ ನೀಡಿದೆ.

ನವದೆಹಲಿ: ಮುಂದಿನ ಹಣಕಾಸು ವರ್ಷದಿಂದ ಎರಡು ವರ್ಷಗಳವರೆಗೆ ಒಟ್ಟು ರೂ. 1, 261 ಕೋಟಿ ವೆಚ್ಚದೊಂದಿಗೆ 15,000 ಮಹಿಳಾ ಸ್ವ-ಸಹಾಯ ಗುಂಪುಗಳಿಗೆ (ಎಸ್‌ಎಚ್‌ಜಿ) ಡ್ರೋನ್‌ಗಳನ್ನು ಒದಗಿಸುವ ಕೇಂದ್ರ ಯೋಜನೆಗೆ ಕೇಂದ್ರ ಸಂಪುಟ ಒಪ್ಪಿಗೆ ನೀಡಿದೆ. ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಆಗಸ್ಟ್ 15 ರಂದು ಪ್ರಧಾನಮಂತ್ರಿಯವರು ಕೆಂಪು ಕೋಟೆಯಿಂದ ಮಾಡಿದ ತಮ್ಮ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಡ್ರೋನ್ ತಂತ್ರಜ್ಞಾನದೊಂದಿಗೆ ಮಹಿಳಾ ಸ್ವ ಸಹಾಯ ಸಂಘಗಳನ್ನು ಸಬಲೀಕರಣಗೊಳಿಸುವುದಾಗಿ ಘೋಷಿಸಿದ್ದರು. ಅಲ್ಲದೇ ಗ್ರಾಮೀಣ ಅಭಿವೃದ್ಧಿಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಸಾಮರ್ಥ್ಯವನ್ನು ಹೆಚ್ಚಿಸುವುದಾಗಿ ಹೇಳಿದ್ದರು. 

ಕೃಷಿ ಉದ್ದೇಶಗಳಿಗಾಗಿ ರೈತರಿಗೆ ಬಾಡಿಗೆ ಸೇವೆಗಳನ್ನು ಒದಗಿಸಲು 2023-24 ರಿಂದ 2025-2026 ರ ಅವಧಿಯಲ್ಲಿ ಆಯ್ದ 15,000 ಮಹಿಳಾ ಸ್ವಸಹಾಯ ಗುಂಪುಗಳಿಗೆ ಡ್ರೋನ್‌ಗಳನ್ನು ಒದಗಿಸುವ ಗುರಿಯನ್ನು ಈ ಯೋಜನೆ ಹೊಂದಿದೆ.
ಈ ಯೋಜನೆಯು ಮಹಿಳಾ ಸ್ವಸಹಾಯ ಗುಂಪುಗಳನ್ನು ಸಬಲೀಕರಣಗೊಳಿಸಲು ಮತ್ತು ಕೃಷಿ ವಲಯದಲ್ಲಿ ಡ್ರೋನ್ ಸೇವೆಗಳ ಮೂಲಕ ಹೊಸ ತಂತ್ರಜ್ಞಾನಗಳನ್ನು ತರಲು ಪ್ರಯತ್ನಿಸುತ್ತದೆ.

ಈ ಯೋಜನೆಯು ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆ ಮತ್ತು ರಸಗೊಬ್ಬರ ಇಲಾಖೆ, ಮಹಿಳಾ ಸ್ವಸಹಾಯಗಳು ಮತ್ತು ಪ್ರಮುಖ ರಸಗೊಬ್ಬರ ಕಂಪನಿಗಳ (LFCs) ಸಂಪನ್ಮೂಲಗಳು ಮತ್ತು ಪ್ರಯತ್ನಗಳನ್ನು ಒಟ್ಟುಗೂಡಿಸುವ ಮೂಲಕ ಸಮಗ್ರ ಮಧ್ಯಸ್ಥಿಕೆಗಳನ್ನು ಅನುಮೋದಿಸುತ್ತದೆ.

ಗುರುತಿಸಲಾದ ಕ್ಲಸ್ಟರ್‌ಗಳಲ್ಲಿ ವಿವಿಧ ರಾಜ್ಯಗಳಲ್ಲಿ ಹಂತಹಂತವಾಗಿ 15,000 ಮಹಿಳಾ ಸ್ವಸಹಾಯ ಗುಂಪುಗಳನ್ನು ಡ್ರೋನ್‌ಗಳನ್ನು ಒದಗಿಸಲು ಆಯ್ಕೆ ಮಾಡಲಾಗುತ್ತದೆ. ಡ್ರೋನ್‌ನ ವೆಚ್ಚದ ಶೇ. 80 ರಷ್ಟು ಕೇಂದ್ರ ಹಣಕಾಸು ನೆರವು ನೀಡುತ್ತದೆ. ಡ್ರೋನ್ ಖರೀದಿಗಾಗಿ ಪರಿಕರಣಗಳ ಶುಲ್ಕವಾಗಿ ಗರಿಷ್ಠ ಗರಿಷ್ಠ ರೂ.8 ಲಕ್ಷದವರೆಗೂ ಮಹಿಳಾ ಸಂಘಗಳಿಗೆ ನೀಡಲಾಗುತ್ತದೆ.

ಡ್ರೋನ್‌ಗಳನ್ನು ಸಂಗ್ರಹಿಸುವಲ್ಲಿ ಮತ್ತು ದುರಸ್ತಿ ಮತ್ತು ನಿರ್ವಹಣೆ ಕೈಗೊಳ್ಳುವಲ್ಲಿ ಸ್ವಸಹಾಯ ಗುಂಪುಗಳು ಎದುರಿಸಬಹುದಾದ ತೊಂದರೆಗಳನ್ನು ಪರಿಗಣಿಸಿ ಡ್ರೋನ್ ಪೂರೈಕೆದಾರ ಕಂಪನಿಗಳು ಮತ್ತು ಮಹಿಳಾ ಸ್ವಸಹಾಯ ಗುಂಪುಗಳ ನಡುವೆ ಪ್ರಮುಖ ರಸಗೊಬ್ಬರ ಕಂಪನಿಗಳು ಸೇತುವೆಯಾಗಿ ಕಾರ್ಯನಿರ್ವಹಿಸುತ್ತವೆ.

ಈ ಯೋಜನೆಯು ಕೃಷಿಯಲ್ಲಿ ಸುಧಾರಿತ ತಂತ್ರಜ್ಞಾನ, ಬೆಳೆ ಇಳುವರಿ ಹೆಚ್ಚಿಸಲು ಮತ್ತು ರೈತರ ಅನುಕೂಲಕ್ಕಾಗಿ ಕಾರ್ಯಾಚರಣೆಯ ವೆಚ್ಚವನ್ನು ಕಡಿಮೆ ಮಾಡುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT