UNLF ಗುಂಪು 
ದೇಶ

ಮಣಿಪುರ: ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ UNLF ಬಂಡುಕೋರರ ಗುಂಪು: ಐತಿಹಾಸಿಕ ನಡೆ ಎಂದ ಗೃಹ ಸಚಿವ ಅಮಿತ್ ಶಾ

ಈಶಾನ್ಯದಲ್ಲಿ ಶಾಶ್ವತ ಶಾಂತಿ ಸ್ಥಾಪಿಸಲು ಮೋದಿ ಸರ್ಕಾರದ ಅವಿರತ ಪ್ರಯತ್ನಗಳಿಗೆ ಫಲ ಸಿಕ್ಕಿದ್ದು, ಯುನೈಟೆಡ್ ನ್ಯಾಶನಲ್ ಲಿಬರೇಶನ್ ಫ್ರಂಟ್ (UNLF) ಇಂದು ನವದೆಹಲಿಯಲ್ಲಿ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.

ನವದೆಹಲಿ: ಈಶಾನ್ಯದಲ್ಲಿ ಶಾಶ್ವತ ಶಾಂತಿ ಸ್ಥಾಪಿಸಲು ಮೋದಿ ಸರ್ಕಾರದ ಅವಿರತ ಪ್ರಯತ್ನಗಳಿಗೆ ಫಲ ಸಿಕ್ಕಿದ್ದು, ಯುನೈಟೆಡ್ ನ್ಯಾಶನಲ್ ಲಿಬರೇಶನ್ ಫ್ರಂಟ್ (UNLF) ಇಂದು ನವದೆಹಲಿಯಲ್ಲಿ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ. 

ಮಣಿಪುರದ ಅತ್ಯಂತ ಹಳೆಯ ಶಸ್ತ್ರಸಜ್ಜಿತ ಬಂಡುಕೋರರ ಗುಂಪು UNLF ಹಿಂಸಾಚಾರವನ್ನು ತ್ಯಜಿಸಿ, ಮುಖ್ಯವಾಹಿನಿಗೆ ಸೇರಲು ಒಪ್ಪಿಕೊಂಡಿದೆ. ಇದು ಐತಿಹಾಸಿಕ ಮೈಲಿಗಲ್ಲು ಎಂದು ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.

ಪ್ರಜಾಸತ್ತಾತ್ಮಕ ಪ್ರಕ್ರಿಯೆಗಳಿಗೆ ನಾನು ಅವರನ್ನು ಸ್ವಾಗತಿಸುತ್ತೇನೆ. ಶಾಂತಿ ಮತ್ತು ಪ್ರಗತಿಯ ಹಾದಿಯಲ್ಲಿ ಅವರ ಪ್ರಯಾಣಕ್ಕೆ ಶುಭ ಹಾರೈಸುತ್ತೇನೆ ಎಂದು ಹೇಳಿದರು. ಗೃಹ ಸಚಿವ ಅಮಿತ್ ಶಾ ಮತ್ತೊಂದು ಪೋಸ್ಟ್‌ನಲ್ಲಿ, 'ಭಾರತ ಸರ್ಕಾರ ಮತ್ತು ಮಣಿಪುರ ಸರ್ಕಾರ ಯುಎನ್‌ಎಲ್‌ಎಫ್‌ನೊಂದಿಗೆ ಇಂದು ಸಹಿ ಮಾಡಿದ ಶಾಂತಿ ಒಪ್ಪಂದವು ಆರು ದಶಕಗಳ ಸಶಸ್ತ್ರ ಚಳುವಳಿಯ ಅಂತ್ಯವನ್ನು ಸೂಚಿಸುತ್ತದೆ. ಯುಎನ್‌ಎಲ್‌ಎಫ್ ಮುಖ್ಯವಾಹಿನಿಗೆ ಮರಳುವುದರಿಂದ ಮುಂದಿನ ದಿನಗಳಲ್ಲಿ ಶಾಂತಿ ಪ್ರಕ್ರಿಯೆಯಲ್ಲಿ ಭಾಗವಹಿಸಲು ಕಣಿವೆಯ ಮೂಲದ ಇತರ ಸಶಸ್ತ್ರ ಗುಂಪುಗಳನ್ನು ಉತ್ತೇಜಿಸುತ್ತದೆ ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ಸಬ್ ಕೇ ಸಾಥ್ ಕ್ರಮ ಮತ್ತು ಈಶಾನ್ಯ ಭಾರತದಲ್ಲಿ ಯುವಕರಿಗೆ ಉತ್ತಮ ಭವಿಷ್ಯವನ್ನು ಒದಗಿಸುವ ನಿಟ್ಟಿನಲ್ಲಿ ಇದು ಐತಿಹಾಸಿಕ ಘಟನೆಯಾಗಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದರು. ಮೊದಲ ಬಾರಿಗೆ ಕಣಿವೆ ಮೂಲದ ಮಣಿಪುರಿ ಸಶಸ್ತ್ರ ಗುಂಪು ಹಿಂಸಾಚಾರವನ್ನು ದೂರವಿಟ್ಟು ಮುಖ್ಯವಾಹಿನಿಗೆ ಮರಳಿದೆ. ಭಾರತದ ಸಂವಿಧಾನ ಮತ್ತು ದೇಶದ ಕಾನೂನುಗಳನ್ನು ಗೌರವಿಸಲು ಒಪ್ಪಿಕೊಂಡಿದ್ದಾರೆ. ಈ ಒಪ್ಪಂದವು ಯುಎನ್‌ಎಲ್‌ಎಫ್ ಮತ್ತು ಭದ್ರತಾ ಪಡೆಗಳ ನಡುವಿನ ಸಂಘರ್ಷವನ್ನು ಕೊನೆಗೊಳಿಸುವುದಲ್ಲದೆ, ಅರ್ಧ ಶತಮಾನಕ್ಕೂ ಹೆಚ್ಚು ಕಾಲ ಎರಡೂ ಕಡೆಯ ಅಮೂಲ್ಯ ಜೀವಗಳನ್ನು ಬಲಿತೆಗೆದುಕೊಂಡಿದೆ. ಆದರೆ ಸಮುದಾಯದ ದೀರ್ಘಕಾಲದ ಕಳವಳಗಳನ್ನು ಪರಿಹರಿಸಲು ಅವಕಾಶವನ್ನು ಒದಗಿಸುತ್ತದೆ ಎಂದರು.

PLA, UNLF ಮತ್ತು ಇತರೆ ಉಗ್ರಗಾಮಿ ಸಂಘಟನೆಗಳ ಮೇಲೆ ನಿಷೇಧ ಹೇರಿದ್ದ ಕೇಂದ್ರ ಸರ್ಕಾರ
ಮಣಿಪುರದಲ್ಲಿ ಈ ಹಿಂದೆ ಪೀಪಲ್ಸ್ ಲಿಬರೇಶನ್ ಆರ್ಮಿ ಸೇರಿದಂತೆ 9 ಉಗ್ರಗಾಮಿ ಮೈತೇಯ್ ಸಂಘಟನೆಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿತ್ತು. ಅವರಲ್ಲಿ ಹೆಚ್ಚಿನವರು ಮಣಿಪುರದಲ್ಲಿ ಸಕ್ರಿಯರಾಗಿದ್ದಾರೆ. ಗೃಹ ಸಚಿವಾಲಯ ಹೊರಡಿಸಿದ ಅಧಿಸೂಚನೆಯ ಪ್ರಕಾರ, ಐದು ವರ್ಷಗಳ ಕಾಲ ನಿಷೇಧಿಸಲಾದ ಗುಂಪುಗಳಲ್ಲಿ ಸಾಮಾನ್ಯವಾಗಿ PLA ಎಂದು ಕರೆಯಲ್ಪಡುವ ಪೀಪಲ್ಸ್ ಲಿಬರೇಶನ್ ಆರ್ಮಿ ಮತ್ತು ಅದರ ರಾಜಕೀಯ ವಿಭಾಗ, ಕ್ರಾಂತಿಕಾರಿ ಪೀಪಲ್ಸ್ ಫ್ರಂಟ್ (RPF), ಯುನೈಟೆಡ್ ನ್ಯಾಷನಲ್ ಲಿಬರೇಶನ್ ಫ್ರಂಟ್ (UNLF) ಮತ್ತು ಅದರ ಸಶಸ್ತ್ರ ವಿಭಾಗ ಮಣಿಪುರ ಪೀಪಲ್ಸ್ ಆರ್ಮಿ (MPA) ಸೇರಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT