ಅಮಿತ್ ಶಾ 
ದೇಶ

ಯಾರಿಂದಲೂ ಸಿಎಎ ಜಾರಿ ತಡೆಯಲು ಸಾಧ್ಯವಿಲ್ಲ: ಕೇಂದ್ರ ಗೃಹ ಸಚಿವ ಅಮಿತ್ ಶಾ

ಕೇಂದ್ರದ ಎನ್ ಡಿಎ ಸರ್ಕಾರದ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ಜಾರಿಗೆ ತರುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಕೋಲ್ಕತಾ: ಕೇಂದ್ರದ ಎನ್ ಡಿಎ ಸರ್ಕಾರದ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ಜಾರಿಗೆ ತರುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತಾದಲ್ಲಿ ನಡೆದ ಬಿಜೆಪಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು,  ಸರ್ಕಾರದ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಕೇಂದ್ರ ಸರ್ಕಾರ ಅದನ್ನು ಜಾರಿಗೊಳಿಸುವುದು ಶತಃಸಿದ್ಝ ಎಂದು ಗೃಹ ಸಚಿವ ಅಮಿತ್ ಶಾ ಬುಧವಾರ ಪ್ರತಿಪಾದಿಸಿದರು.

'ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಲ್ಪ ಸಂಖ್ಯಾತರ ಓಲೈಕೆಯಲ್ಲಿ ತೊಡಗಿದ್ದು, ತುಷ್ಟೀಕರಣ ರಾಜಕೀಯ ಈ ಬಾರಿ ಕೆಲಸ ಮಾಡುವುದಿಲ್ಲ ಎಂದು ಹೇಳಿದರು. ಅಂತೆಯೇ ಅಕ್ರಮ ಒಳನುಸುಳುವಿಕೆ, ಭ್ರಷ್ಟಾಚಾರ ಮತ್ತು ರಾಜಕೀಯ ಹಿಂಸಾಚಾರದ ವಿಷಯಗಳ ಬಗ್ಗೆ ಬಿರುಸಿನ ವಾಗ್ದಾಳಿ ನಡೆಸಿದ ಅವರು, ಈ ಬಾರಿ ಚುನಾವಣೆಯಲ್ಲಿ ಮಮತಾ ಅವರ ಸರ್ಕಾರವನ್ನು ಹೊರಹಾಕಿ ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಆಯ್ಕೆ ಮಾಡುವಂತೆ ಜನರಿಗೆ ಮನವಿ ಮಾಡಿದರು.

ರ್ಯಾಲಿಯಲ್ಲಿ ಸೇರಿರುವ ಜನರ ಸಂಖ್ಯೆ ಜನರ ಮನಸ್ಥಿತಿಯನ್ನು ಸೂಚಿಸುತ್ತದೆ ಮತ್ತು 2026 ರಲ್ಲಿ ರಾಜ್ಯದಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ. 2024 ರ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿಯ ಸಾಧನೆಯು ವಿಧಾನಸಭಾ ಚುನಾವಣೆಯಲ್ಲಿ ಅದರ ಗೆಲುವಿನ ಅಡಿಪಾಯವನ್ನು ಸೃಷ್ಟಿಸುತ್ತದೆ ಎಂದರು. 

ಸಿಎಎ ವಿವಾದಿತಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅಮಿತ್ ಶಾ, ಮಮತಾ ಬ್ಯಾನರ್ಜಿ ಇದನ್ನು ವಿರೋಧಿಸುತ್ತಿದ್ದಾರೆ. ಆದರೆ ಯಾರೊಬ್ಬರೂ ಅದರ ಅನುಷ್ಠಾನವನ್ನು ತಡೆಯಲು ಸಾಧ್ಯವಿಲ್ಲ ಎಂದರು. 2019 ರಲ್ಲಿ ರಾಜ್ಯದ 42 ಸ್ಥಾನಗಳಲ್ಲಿ ಪಕ್ಷವು 18 ಸ್ಥಾನಗಳನ್ನು ಗೆದ್ದುಕೊಂಡಿದ್ದು, ಇದು ಬಂಗಾಳದಲ್ಲಿ ಬಿಜೆಪಿ ಗಳಿಸಿದ ಈವರೆಗಿನ ಅತ್ಯಧಿಕ ಸ್ಥಾನಗಳಾಗಿವೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಆಂಧ್ರ ಪ್ರದೇಶ: ONGC ತೈಲ ಬಾವಿಯಲ್ಲಿ ಅನಿಲ ಸೋರಿಕೆ; ಮುಗಿಲೆತ್ತರಕ್ಕೆ ಚಿಮ್ಮಿದ ಬೆಂಕಿ, ಗ್ರಾಮಸ್ಥರ ಸ್ಥಳಾಂತರ! Video

ತೆಲಂಗಾಣ: BRS ಗೆ ಕವಿತಾ ಗುಡ್ ಬೈ; 'ಹೊಸ ಪಕ್ಷ' ಸ್ಥಾಪನೆಯ ಘೋಷಣೆ!

ಮಡುರೋ ಬಂಧನ ಬೆನ್ನಲ್ಲೇ ಅಮೆರಿಕ ಉಪಾಧ್ಯಕ್ಷ JD Vance ಮನೆಯ ಮೇಲೆ ದಾಳಿ; ಆತಂಕ ಸೃಷ್ಟಿ, ಶಂಕಿತನ ಬಂಧನ!

ಎರಡೆರಡು ಮರಣೋತ್ತರ ಪರೀಕ್ಷೆ, ಬಳ್ಳಾರಿ ಗುಂಡಿನ ದಾಳಿ 'ಮರೆಮಾಚಲು ಕಾಂಗ್ರೆಸ್ ಯತ್ನ', ಸಿಬಿಐ ತನಿಖೆಗೆ HDK ಒತ್ತಾಯ!

Video: ಚಿತ್ರಮಂದಿರದ ಮಹಿಳಾ ಟಾಯ್ಲೆಟ್ ನಲ್ಲಿ ಸೀಕ್ರೆಟ್ ಕ್ಯಾಮೆರಾ, ವಿಡಿಯೋ ಚಿತ್ರೀಕರಿಸುತ್ತಿದ್ದ ಕಿರಾತಕನಿಗೆ ಬಿತ್ತು ಗೂಸಾ! FIR ದಾಖಲು

SCROLL FOR NEXT