ರಾಷ್ಟ್ರಪತಿ ದ್ರೌಪದಿ ಮುರ್ಮು 
ದೇಶ

ದೆಹಲಿ ವಿಳಾಸವುಳ್ಳ ಹೊಸ ಮತದಾರರ ಗುರುತಿನ ಚೀಟಿ ಪಡೆದ ರಾಷ್ಟ್ರಪತಿ ದ್ರೌಪದಿ ಮುರ್ಮು

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಂಗಳವಾರ ರಾಷ್ಟ್ರಭತಿ ಭವನದಲ್ಲಿ ದೆಹಲಿ ಮುಖ್ಯ ಚುನಾವಣಾಧಿಕಾರಿ ಪಿ ಕೃಷ್ಣಮೂರ್ತಿ ಅವರಿಂದ ಬದಲಾದ ವಿಳಾಸದೊಂದಿಗೆ ಹೊಸ ಮತದಾರರ ಚೀಟಿಯನ್ನು ಸ್ವೀಕರಿಸಿದ್ದಾರೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಂಗಳವಾರ ರಾಷ್ಟ್ರಭತಿ ಭವನದಲ್ಲಿ ದೆಹಲಿ ಮುಖ್ಯ ಚುನಾವಣಾಧಿಕಾರಿ ಪಿ ಕೃಷ್ಣಮೂರ್ತಿ ಅವರಿಂದ ಬದಲಾದ ವಿಳಾಸದೊಂದಿಗೆ ಹೊಸ ಮತದಾರರ ಗುರುತಿನ ಚೀಟಿಯನ್ನು ಸ್ವೀಕರಿಸಿದ್ದಾರೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

ಮುರ್ಮು ಅವರು ಇದೀಗ ನವದೆಹಲಿಯ ಜಿಲ್ಲೆಯಿಂದ ಮುಂಬರುವ ಚುನಾವಣೆಯಲ್ಲಿ ಮತ ಚಲಾಯಿಸಲು ಅರ್ಹರಾಗಿರುತ್ತಾರೆ ಎಂದು ಸಿಇಒ ಕಚೇರಿಯ ಹೇಳಿಕೆ ತಿಳಿಸಿದೆ.

ಕೃಷ್ಣಮೂರ್ತಿ ಅವರು ತಮ್ಮ ಭೇಟಿಯ ಸಂದರ್ಭದಲ್ಲಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ರಾಷ್ಟ್ರಪತಿಗಳಿಗೆ ತಿಳಿಸಿದ್ದರು.

ಮುರ್ಮು ಅವರ ಹಳೆಯ ಮತದಾರರ ಚೀಟಿಯಲ್ಲಿ ಅವರ ಒಡಿಶಾದ ಮಯೂರ್‌ಭಂಜ್ ವಿಳಾಸ ಇತ್ತು. ಇದೀಗ ಅದು ದೆಹಲಿಯ ವಿಳಾಸಕ್ಕೆ ಬದಲಾಗಿದೆ.

ದೆಹಲಿ ಸಿಇಒ ಈ ತಿಂಗಳ ಆರಂಭದಲ್ಲಿ ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಿದ್ದು, ಅವರ ಮತದಾರರ ಗುರುತಿನ ಚೀಟಿಯಲ್ಲಿನ ವಿಳಾಸ ಬದಲಾವಣೆಗೆ ಅನುಕೂಲ ಮಾಡಿಕೊಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT