ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಜಮ್ಮು ಮತ್ತು ಕಾಶ್ಮೀರ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಅಟಲ್ ಡುಲ್ಲೊ ನೇಮಕ

ಜಮ್ಮು ಮತ್ತು ಕಾಶ್ಮೀರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಅಟಲ್ ಡುಲ್ಲೊ ಅವರನ್ನು ಕೇಂದ್ರ ಗೃಹ ಸಚಿವಾಲಯ ಬುಧವಾರ ನೇಮಕ ಮಾಡಿದೆ.

ಅಟಲ್ ಡುಲ್ಲೊ
Lingaraj Badiger
Updated On : 29 Nov 2023, 5:47 pm

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಅಟಲ್ ಡುಲ್ಲೊ ಅವರನ್ನು ಕೇಂದ್ರ ಗೃಹ ಸಚಿವಾಲಯ ಬುಧವಾರ ನೇಮಕ ಮಾಡಿದೆ.

ಪ್ರಸ್ತುತ ಮುಖ್ಯ ಕಾರ್ಯದರ್ಶಿ ಅರುಣ್ ಕುಮಾರ್ ಮೆಹ್ತಾ ಅವರು 30.11.2023 ರಂದು ನಿವೃತ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ 1989ನೇ ಬ್ಯಾಚ್ ನ ಐಎಎಸ್ ಅಧಿಕಾರಿ ಅಟಲ್ ಡುಲ್ಲೊ ಅವರನ್ನು ನೇಮಕ ಮಾಡಲಾಗಿದೆ.

ಇದನ್ನು ಓದಿ: ವಿಶ್ವಕಪ್ ನಲ್ಲಿ ಭಾರತದ ಸೋಲನ್ನು ಸಂಭ್ರಮಿಸಿದ ಆರೋಪ: ಯುಎಪಿಎ ಅಡಿ ಏಳು ಕಾಶ್ಮೀರಿ ವಿದ್ಯಾರ್ಥಿಗಳ ಬಂಧನ

Advertisement

Advertisement

ಕೇಂದ್ರಾಡಳಿತ ಪ್ರದೇಶಗಳು ಅಥವಾ ಅರುಣಾಚಲ ಪ್ರದೇಶ-ಗೋವಾ-ಮಿಜೋರಾಂ ಮತ್ತು ಕೇಂದ್ರಾಡಳಿತ ಪ್ರದೇಶ ಕೇಡರ್‌ನ 1989ನೇ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ಡುಲ್ಲೋ ಅವರು ಜಮ್ಮು ಮತ್ತು ಕಾಶ್ಮೀರ ಸೇವೆಗೆ ವಾಪಸಾಗುವ ಮುನ್ನ ಕೇಂದ್ರ ಗೃಹ ಸಚಿವಾಲಯದ ಅಡಿಯಲ್ಲಿ ಗಡಿ ನಿರ್ವಹಣಾ ಇಲಾಖೆಯ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement