ವರವರ ರಾವ್ 
ದೇಶ

ಭೀಮಾ ಕೊರೆಗಾಂವ್: ಕಣ್ಣಿನ ಶಸ್ತ್ರಚಿಕಿತ್ಸೆಗೆ ಹೈದರಾಬಾದ್‌ಗೆ ತೆರಳಲು ವರವರ ರಾವ್‌ಗೆ ಮುಂಬೈ ಕೋರ್ಟ್ ಅನುಮತಿ

2018ರ ಎಲ್ಗಾರ್ ಪರಿಷದ್-ಮಾವೋವಾದಿ ನಂಟು ಪ್ರಕರಣದ ಆರೋಪಿ, ಸಾಮಾಜಿಕ ಕಾರ್ಯಕರ್ತ ವರವರ ರಾವ್‌ ಅವರಿಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾಗಲು ಹೈದರಾಬಾದ್‌ಗೆ ತೆರಳಲು ಮುಂಬೈನ ವಿಶೇಷ ಎನ್‌ಐಎ ನ್ಯಾಯಾಲಯವು ಅನುಮತಿ ನೀಡಿದೆ.

ಮುಂಬೈ: 2018ರ ಎಲ್ಗಾರ್ ಪರಿಷದ್-ಮಾವೋವಾದಿ ನಂಟು ಪ್ರಕರಣದ ಆರೋಪಿ, ಸಾಮಾಜಿಕ ಕಾರ್ಯಕರ್ತ ವರವರ ರಾವ್‌ ಅವರಿಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾಗಲು ಹೈದರಾಬಾದ್‌ಗೆ ತೆರಳಲು ಮುಂಬೈನ ವಿಶೇಷ ಎನ್‌ಐಎ ನ್ಯಾಯಾಲಯವು ಅನುಮತಿ ನೀಡಿದೆ.

ನ್ಯಾಯಾಧೀಶ ರಾಜೇಶ್ ಕಟಾರಿಯಾ ಬುಧವಾರ ರಾವ್ ಅವರಿಗೆ ಎಡಗಣ್ಣಿನ ಶಸ್ತ್ರಚಿಕಿತ್ಸೆಗಾಗಿ ಡಿಸೆಂಬರ್ 5 ಮತ್ತು 11ರ ನಡುವೆ ತೆಲಂಗಾಣ ರಾಜ್ಯದ ರಾಜಧಾನಿ ಹೈದರಾಬಾದ್‌ಗೆ ಪ್ರಯಾಣಿಸಲು ಅನುಮತಿ ನೀಡಿದ್ದಾರೆ.

ವರವರ ರಾವ್ ಅವರು ಡಿಸೆಂಬರ್ 4 ರಂದು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ) ವರದಿ ಮಾಡಬೇಕು. ಅವರ ಪ್ರಯಾಣದ ವಿವರಗಳನ್ನು ಮತ್ತು ಅವರು ಹೈದರಾಬಾದ್‌ನಲ್ಲಿ ತಂಗಲಿರುವ ಸ್ಥಳದ ವಿಳಾಸ ಮತ್ತು ಸಂಪರ್ಕ ಸಂಖ್ಯೆಯನ್ನು ಒದಗಿಸಬೇಕು ಎಂದು ನ್ಯಾಯಾಲಯ ಹೇಳಿದೆ.

ಸಾಮಾಜಿಕ ಕಾರ್ಯಕರ್ತ ರಾವ್ ಅವರಿಗೆ ನೀಡಿರುವ ಸ್ವಾತಂತ್ರ್ಯವನ್ನು ದುರುಪಯೋಗಪಡಿಸಿಕೊಳ್ಳದಂತೆ ನ್ಯಾಯಾಲಯ ಎಚ್ಚರಿಕೆ ನೀಡಿದೆ.

ವರವರ ರಾವ್ ಅವರನ್ನು 2018ರಲ್ಲಿ ಎಲ್ಗಾರ್ ಪರಿಷದ್-ಮಾವೋವಾದಿ ನಂಟು ಪ್ರಕರಣದಲ್ಲಿ ಬಂಧಿಸಲಾಯಿತು ಮತ್ತು ಬಾಂಬೆ ಹೈಕೋರ್ಟ್ ಮಾರ್ಚ್ 2021ರಲ್ಲಿ ವೈದ್ಯಕೀಯ ಕಾರಣಗಳಿಗಾಗಿ ತಾತ್ಕಾಲಿಕ ಜಾಮೀನು ನೀಡಿತು. ಆಗಸ್ಟ್ 2022 ರಲ್ಲಿ, ವೈದ್ಯಕೀಯ ಕಾರಣಗಳಿಗಾಗಿ ಸುಪ್ರೀಂ ಕೋರ್ಟ್ ಅವರಿಗೆ ಜಾಮೀನು ನೀಡಿತು.

ಜಾಮೀನು ಆದೇಶದಲ್ಲಿ, ರಾವ್ ಅವರು ನ್ಯಾಯಾಲಯದ ಅನುಮತಿಯಿಲ್ಲದೆ ಮುಂಬೈನ ವಿಶೇಷ ಎನ್‌ಐಎ ನ್ಯಾಯಾಲಯದ ವ್ಯಾಪ್ತಿಯನ್ನು ತೊರೆಯಬಾರದು ಎಂಬ ಷರತ್ತು ವಿಧಿಸಿತ್ತು.

ಕಳೆದ ತಿಂಗಳು, ಬಲಗಣ್ಣಿನ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾಗಲು ರಾವ್ ಅವರಿಗೆ ಹೈದರಾಬಾದ್‌ಗೆ ಒಂದು ವಾರ ಪ್ರಯಾಣಿಸಲು ಹೈಕೋರ್ಟ್ ಅನುಮತಿ ನೀಡಿತ್ತು.

ನ್ಯಾಯಮೂರ್ತಿ ಎಎಸ್ ಗಡ್ಕರಿ ನೇತೃತ್ವದ ವಿಭಾಗೀಯ ಪೀಠವು ಅವರು ಹಿಂದಿರುಗಿದ ನಂತರ ಮತ್ತೊಂದು ಕಣ್ಣಿನ ಶಸ್ತ್ರಚಿಕಿತ್ಸೆಗಾಗಿ ಮತ್ತೊಮ್ಮೆ ಪ್ರಯಾಣಿಸಲು ಅನುಮತಿ ಕೋರಿ ವಿಚಾರಣಾ ನ್ಯಾಯಾಲಯವನ್ನು ಸಂಪರ್ಕಿಸಬಹುದು ಎಂದು ಹೇಳಿತ್ತು.

ಏನಿದು ಪ್ರಕರಣ?

2017ರ ಡಿಸೆಂಬರ್ 31 ರಂದು ಪುಣೆಯಲ್ಲಿ ಎಲ್ಗಾರ್ ಪರಿಷದ್ ಕಾರ್ಯಕ್ರಮ ನಡೆದಿತ್ತು. ಈ ಕಾರ್ಯಕ್ರಮಕ್ಕೆ ಮಾವೋವಾದಿಗಳು ಹಣಕಾಸಿನ ಬೆಂಬಲ ನೀಡಿದ್ದಾರೆ ಎಂದು ಪುಣೆ ಪೊಲೀಸರು ದೂರು ದಾಖಲಿಸಿಕೊಂಡಿದ್ದರು. 

ಅಲ್ಲದೆ, ಈ ಸಮಾವೇಶದಲ್ಲಿ ಪ್ರಚೋದನಕಾರಿ ಭಾಷಣಗಳನ್ನು ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ರಾವ್ ಮತ್ತು ಇತರ ಹಲವು ಎಡ-ಒಲವಿನ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಈ ಭಾಷಣದಿಂದ ಉದ್ದೀಪನಗೊಂಡು ಮರುದಿನ ಭೀಮಾ ಕೊರೆಗಾಂವ್‌ನಲ್ಲಿ ಹಿಂಸಾಚಾರ ನಡೆದಿತ್ತು ಎಂದು ಪೊಲೀಸರು ಆರೋಪಿಸಿದ್ದರು. ಆರೋಪಿಗಳ ಮೇಲೆ ಯುಎಪಿಎ ಕಾಯ್ದೆಯಡಿ ದೂರು ದಾಖಲಿಸಲಾಗಿತ್ತು. ನಂತರ ಪ್ರಕರಣದ ತನಿಖೆಯನ್ನು ಎನ್‌ಐಎ ವಹಿಸಿಕೊಂಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಪಶ್ಚಿಮ ಬಂಗಾಳದಲ್ಲಿ ವಿವಾದಿತ SIR ಕುರಿತು ಮಾತುಕತೆಗೆ ಟಿಎಂಸಿಗೆ ಚುನಾವಣಾ ಆಯೋಗ ಆಹ್ವಾನ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

SCROLL FOR NEXT