ಪ್ರಧಾನಿ ಮೋದಿ 
ದೇಶ

ತೆಲಂಗಾಣ ಚುನಾವಣೆ 2023: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಪ್ರಧಾನಿ ಮೋದಿ ಕರೆ

119 ಸದಸ್ಯ ಬಲದ ತೆಲಂಗಾಣ ವಿಧಾನಸಭೆಗೆ ನಡೆಯುತ್ತಿರುವ ಚುನಾವಣೆಯಲ್ಲಿ ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಜ್ಯದ ಜನತೆಗೆ ಗುರುವಾರ ಕರೆ ನೀಡಿದ್ದಾರೆ. 

ನವದೆಹಲಿ: 119 ಸದಸ್ಯ ಬಲದ ತೆಲಂಗಾಣ ವಿಧಾನಸಭೆಗೆ ನಡೆಯುತ್ತಿರುವ ಚುನಾವಣೆಯಲ್ಲಿ ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಜ್ಯದ ಜನತೆಗೆ ಗುರುವಾರ ಕರೆ ನೀಡಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ (ಟ್ವಿಟರ್)ನಲ್ಲಿ ಪೋಸ್ಟ್ ಮಾಡಿರುವ ಅವರು, 'ಪ್ರಜಾಪ್ರಭುತ್ವವನ್ನು ಬಲಪಡಿಸಲು ಹಾಗೂ ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ನಾನು ತೆಲಂಗಾಣದ ನನ್ನ ಸಹೋದರ, ಸಹೋದರಿಯರಿಗೆ ಮನವಿ ಮಾಡುತ್ತೇನೆ. ವಿಶೇಷವಾಗಿ ಯುವ ಮತ್ತು ಮೊದಲ ಬಾರಿಗೆ ಮತ ಚಲಾಯಿಸುವವರಿಗೆ ಶುಭಾಶಯಗಳು' ಎಂದು ಹೇಳಿದ್ದಾರೆ.

ಮೆಗಾಸ್ಟಾರ್ ಚಿರಂಜೀವಿ, ಪತ್ನಿ ಸುರೇಖಾ ಹಾಗೂ ಮಗಳು ಶ್ರೀಜಾ ಅವರೊಂದಿಗೆ ಹೈದರಾಬಾದ್‌ನ ಜುಬಿಲಿ ಹಿಲ್ಸ್‌ನಲ್ಲಿರುವ ಮತಗಟ್ಟೆಗೆ ಮತ ಚಲಾಯಿಸಲು ಆಗಮಿಸಿದರು. ಸರತಿ ಸಾಲಿನಲ್ಲಿ ನಿಂತು ಅವರು ಮತ ಚಲಾಯಿಸಿದ್ದಾರೆ.

ಮೆಗಾಸ್ಟಾರ್ ಚಿರಂಜೀವಿ ಈ ಹಿಂದೆ ರಾಜಕೀಯದಲ್ಲಿ ತೊಡಗಿಸಿಕೊಂಡಿದ್ದರು. 2008ರಲ್ಲಿ ಅಂದಿನ ಸಂಯುಕ್ತ ಆಂಧ್ರಪ್ರದೇಶದಲ್ಲಿ ಪ್ರಜಾರಾಜ್ಯಂ ಪಕ್ಷವನ್ನು ಸ್ಥಾಪಿಸಿದರು. 2009ರ ಸಾರ್ವತ್ರಿಕ ಚುನಾವಣೆಯಲ್ಲಿ, ಪಕ್ಷ ಆಂಧ್ರ ಪ್ರದೇಶ ವಿಧಾನಸಭೆಯ 294 ಸ್ಥಾನಗಳಲ್ಲಿ 18 ಸ್ಥಾನಗಳನ್ನು ಗೆದ್ದಿತು.

2011ರಲ್ಲಿ, ಚಿರಂಜೀವಿ ಪ್ರಜಾರಾಜ್ಯಂ ಪಕ್ಷವನ್ನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನೊಂದಿಗೆ ವಿಲೀನಗೊಳಿಸಿದರು. 2012ರ ಮಾರ್ಚ್ 29ರಂದು ರಾಜ್ಯಸಭೆಗೆ ನಾಮನಿರ್ದೇಶನಗೊಂಡರು. 2014ರ ಚುನಾವಣೆಯ ನಂತರ ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದಾರೆ.

ತೆಲಂಗಾಣ ವಿಧಾನಸಭೆ ಚುನಾವಣೆಗೆ ಇಂದು ಬೆಳಗ್ಗೆ 7 ಗಂಟೆಯಿಂದಲೇ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಸರದಿ ಸಾಲಿನಲ್ಲಿ ನಿಂತು ಜನರು ಮತದಾನ ಮಾಡುತ್ತಿದ್ದಾರೆ. ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ನಕ್ಸಲ್ ಪೀಡಿತ 13 ಕ್ಷೇತ್ರಗಳಲ್ಲಿ ಬೆಳಿಗ್ಗೆ 7 ರಿಂದ ಸಂಜೆ 4 ರವರೆಗೆ ಮತದಾನ ನಡೆಯಲಿದೆ.

119 ಸ್ಥಾನಗಳ ವಿಧಾನಸಭೆಗೆ ನಡೆಯುವ ಚುನಾವಣೆಯಲ್ಲಿ 2,290 ಅಭ್ಯರ್ಥಿಗಳ ರಾಜಕೀಯ ಭವಿಷ್ಯವನ್ನು 3.26 ಕೋಟಿಗೂ ಹೆಚ್ಚು ಮತದಾರರು ನಿರ್ಧರಿಸಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT