ಸಿಬಿಐ ಸಾಂದರ್ಭಿಕ ಚಿತ್ರ 
ದೇಶ

ಮಣಿಪುರದಲ್ಲಿ ಇಬ್ಬರು ವಿದ್ಯಾರ್ಥಿಯ ಭೀಕರ ಹತ್ಯೆ ಪ್ರಕರಣ: ನಾಲ್ವರನ್ನು ಬಂಧಿಸಿದ ಸಿಬಿಐ!

ಜುಲೈನಲ್ಲಿ ಮಣಿಪುರದಲ್ಲಿ ನಡೆದ ಇಬ್ಬರು ವಿದ್ಯಾರ್ಥಿಗಳ ಭೀಕರ ಹತ್ಯೆಗೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ(ಸಿಬಿಐ) ನಾಲ್ವರನ್ನು ಬಂಧಿಸಿ ಇಬ್ಬರನ್ನು ವಶಕ್ಕೆ ಪಡೆದಿದೆ.

ಇಂಫಾಲ/ನವದೆಹಲಿ: ಜುಲೈನಲ್ಲಿ ಮಣಿಪುರದಲ್ಲಿ ನಡೆದ ಇಬ್ಬರು ವಿದ್ಯಾರ್ಥಿಗಳ ಭೀಕರ ಹತ್ಯೆಗೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ(ಸಿಬಿಐ) ನಾಲ್ವರನ್ನು ಬಂಧಿಸಿ ಇಬ್ಬರನ್ನು ವಶಕ್ಕೆ ಪಡೆದಿದೆ. 

ಕಳೆದ ವಾರ ಸಾಮಾಜಿಕ ಮಾಧ್ಯಮದಲ್ಲಿ ವಿದ್ಯಾರ್ಥಿಗಳ ಫೋಟೋಗಳನ್ನು ಇವರೇ ಬಹಿರಂಗಪಡಿಸಿದ್ದರು. ಈ ನಾಲ್ವರ ಪೈಕಿ ಇಬ್ಬರು ಮಹಿಳೆಯರು ಮತ್ತು ಇಬ್ಬರು ಪುರುಷರಾಗಿದ್ದಾರೆ. ರಾಜ್ಯದ ರಾಜಧಾನಿ ಇಂಫಾಲದಲ್ಲಿ ಇಬ್ಬರು ಯುವತಿಯನ್ನು ಬಂಧಿಸಲಾಗಿದೆ. ಬಂಧಿತ ನಾಲ್ವರನ್ನು ಅಸ್ಸಾಂನ ಗುವಾಹಟಿಗೆ ಕರೆದೊಯ್ಯಲಾಗಿದೆ.

ಇಂಫಾಲ್‌ನಿಂದ 51 ಕಿ.ಮೀ ದೂರದಲ್ಲಿರುವ ಗುಡ್ಡಗಾಡು ಜಿಲ್ಲೆ ಚುರಾಚಂದ್‌ಪುರದಲ್ಲಿ ಪೊಲೀಸರು ಮತ್ತು ಸೇನೆಯ ಜಂಟಿ ಕಾರ್ಯಾಚರಣೆಯಲ್ಲಿ ಶಂಕಿತರು ಸಿಕ್ಕಿಬಿದ್ದಿದ್ದಾರೆ. ಮೇ 3ರಂದು ಚುರಚಂದಪುರದಲ್ಲಿಯೇ ಜಾತಿ ಹಿಂಸಾಚಾರ ಪ್ರಾರಂಭವಾಗಿತ್ತು.

ಇತ್ತೀಚೆಗಷ್ಟೇ ಹಿರಿಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕಗೊಂಡ ಕರ್ನಲ್ (ನಿವೃತ್ತ) ನೆಕ್ಟರ್ ಸಂಜೆನ್‌ಬಾಮ್ ಅವರು ಚುರಾಚಂದ್‌ಪುರದಲ್ಲಿ ಶಂಕಿತರನ್ನು ಬಂಧಿಸಲು ರಹಸ್ಯ ಕಾರ್ಯಾಚರಣೆಯನ್ನು ನಡೆಸಿದರು. ಚುರಚಂದ್‌ಪುರದಲ್ಲಿ ಹಲವಾರು ಕುಕಿ ದಂಗೆಕೋರ ಗುಂಪುಗಳಿವೆ.

ಜುಲೈನಲ್ಲಿ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಶವಗಳ ಫೋಟೋಗಳು ಸೆಪ್ಟೆಂಬರ್ 26ರಂದು ಸಾಮಾಜಿಕ ಮಾಧ್ಯಮದಲ್ಲಿ ಬಹಿರಂಗವಾಗಿತ್ತು. ಇದರ ನಂತರ, ಮಣಿಪುರ ಸರ್ಕಾರವು ತಕ್ಷಣ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿತ್ತು.

ಫಿಜಾಮ್ ಹೇಮಂಜಿತ್ ಮತ್ತು ಹಿಜಾಮ್ ಲಿಂತೋಯಿಂಗಂಬಿ ಅವರ ಅಪಹರಣ ಮತ್ತು ಹತ್ಯೆಗೆ ಕಾರಣವಾದ ಕೆಲವು ಪ್ರಮುಖ ಆರೋಪಿಗಳನ್ನು ಇಂದು ಚುರಾಚಂದ್‌ಪುರದಿಂದ ಬಂಧಿಸಲಾಗಿದೆ ಎಂದು ಹಂಚಿಕೊಳ್ಳಲು ನನಗೆ ಸಂತೋಷವಾಗಿದೆ ಎಂದು ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಟ್ವಿಟರ್‌ನಲ್ಲಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT