ಯೋಗಿ ಆದಿತ್ಯನಾಥ್ 
ದೇಶ

ಇರುವುದೊಂದೇ ಸನಾತನ ಧರ್ಮ, ಅದನ್ನು ಹೊರತುಪಡಿಸಿದರೆ ಉಳಿದೆಲ್ಲವೂ... ಯೋಗಿ ಆದಿತ್ಯನಾಥ್ ವ್ಯಾಖ್ಯಾನವೇನು?

ಸನಾತನ ಧರ್ಮದ ನಿರ್ಮೂಲನೆ ಮಾಡಬೇಕು ಎಂದು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್‌  ನೀಡಿದ ಹೇಳಿಕೆಯು ದೇಶಾದ್ಯಂತ ವಿವಾದ ಸೃಷ್ಟಿಸಿದೆ. ಇದರ ಬೆನ್ನಲ್ಲೇ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌  ಅವರು ಸನಾತನ ಧರ್ಮದ ಕುರಿತು ಹೇಳಿಕೆ ನೀಡಿದ್ದಾರೆ.

ಲಕ್ನೋ: ಸನಾತನ ಧರ್ಮದ ನಿರ್ಮೂಲನೆ ಮಾಡಬೇಕು ಎಂದು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್‌  ನೀಡಿದ ಹೇಳಿಕೆಯು ದೇಶಾದ್ಯಂತ ವಿವಾದ ಸೃಷ್ಟಿಸಿದೆ. ಇದರ ಬೆನ್ನಲ್ಲೇ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌  ಅವರು ಸನಾತನ ಧರ್ಮದ ಕುರಿತು ಹೇಳಿಕೆ ನೀಡಿದ್ದಾರೆ.

ಸನಾತನ ಧರ್ಮದ ಮಹತ್ವವನ್ನು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೋಮವಾರ ಒತ್ತಿಹೇಳಿದ್ದು, ಸನಾತನ ಧರ್ಮ ಏಕೈಕ ಧರ್ಮವಾಗಿದೆ ಮತ್ತು ಉಳಿದೆಲ್ಲವೂ ಪಂಥಗಳು ಮತ್ತು ಪೂಜಾ ವಿಧಾನಗಳು ಎಂದು ಹೇಳಿದ್ದಾರೆ.

ಗೋರಖನಾಥ ದೇವಾಲಯದಲ್ಲಿ ನಡೆದ ‘ಶ್ರೀಮದ್ ಭಾಗವತ್ ಕಥಾ ಜ್ಞಾನ ಯಾಗ’ದ ಸಮಾರೋಪ ಸಮಾರಂಭದಲ್ಲಿ ಭಾಗಿಯಾಗಿ ಮಾತನಾಡಿದ ಅವರು ಸನಾತನ ಧರ್ಮವು ಮಾನವೀಯತೆಯ ಧರ್ಮವಾಗಿದೆ ಮತ್ತು ಅದರ ಮೇಲಿನ ಯಾವುದೇ ದಾಳಿಯು ಇಡೀ ಮಾನವೀಯತೆಯನ್ನು ಅಪಾಯಕ್ಕೆ ತಳ್ಳುತ್ತದೆ ಎಂದು ಹೇಳಿದ್ದಾರೆ.

ಶ್ರೀಮದ್ ಭಾಗವತ್ ಸಾರವನ್ನು ನಿಜವಾಗಿಯೂ ಗ್ರಹಿಸಲು ಮುಕ್ತ ಮನಸ್ಥಿತಿಯನ್ನು ಹೊಂದುವ ಮಹತ್ವವನ್ನು ಒತ್ತಿ ಹೇಳಿದರು. ಜೊತೆಗೆ ಸಂಕುಚಿತ ಮನಸ್ಸಿನ ದೃಷ್ಟಿಕೋನಗಳು ಅದರ ಬೋಧನೆಗಳ ವಿಶಾಲತೆಯನ್ನು ಒಳಗೊಳ್ಳಲು ಹೆಣಗಾಡುತ್ತವೆ ಎಂದರು.

ಭಗವದ್ಗೀತೆ ಕುರಿತು ಮಾತನಾಡಿದ ಯೋಗಿ ಆದಿತ್ಯನಾಥ್‌, “ಭಗವದ್ಗೀತೆಯು ಮನುಕುಲಕ್ಕೆ ದಾರಿದೀಪವಾಗಿದೆ. ಇದರಿಂದ ಮಾನವ ಸರಿಯಾದ ದಾರಿಯಲ್ಲಿ ಸಾಗಲು ಸಾಧ್ಯವಾಗುತ್ತಿದೆ. ಕೆಲವು ಕುತ್ಸಿತ ಹಾಗೂ ಸಂಕುಚಿತ ಮನಸ್ಸುಗಳು ಭಗವದ್ಗೀತೆಯ ಸಾರದ ಬಗ್ಗೆ ನಕಾರಾತ್ಮಕ ಮಾಹಿತಿಯನ್ನು ಹರಡುತ್ತವೆ. ಆದರೆ, ಮನುಕುಲಕ್ಕೆ ಭಗವದ್ಗೀತೆಯು ದೀವಿಗೆಯಾಗಿದೆ” ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Video: ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆ ಮೇಲೆ ಅಮೆರಿಕ ದಾಳಿ; ಕನಿಷ್ಠ 87 ನಾವಿಕರು ಸಾವು

T20 World Cup 2026: Allen ದಾಖಲೆ ಶತಕ; ಅಜೇಯ ಆಫ್ರಿಕಾ ಮಣಿಸಿ ಫೈನಲ್‌ಗೆ ಲಗ್ಗೆ ಇಟ್ಟ ನ್ಯೂಜಿಲ್ಯಾಂಡ್!

'ನರಕ.. ಇರಾನ್ ಅಲ್ಲದವರಾದ್ರೆ ಮುಚ್ಕೊಂ*ರಿ': Khamenei ಸಾವಿಗೆ ಅಳುವ ಭಾರತೀಯ ಮುಸ್ಲಿಂ ಮಹಿಳೆಯರ ಲೇವಡಿ ಮಾಡಿದ ಇರಾನ್ ಮಹಿಳೆಯರು!

ಸೌದಿ ಅರೇಬಿಯಾ ಮೇಲೆ ದಾಳಿ ಬೇಡ: ನಾವು ಯುದ್ಧಕ್ಕೆ ಇಳಿಯಬೇಕಾಗುತ್ತೆ; ಇರಾನ್‌ಗೆ ಪಾಕಿಸ್ತಾನ ನೇರ ಧಮ್ಕಿ!

ವಾಣಿಜ್ಯ, ಕೈಗಾರಿಕಾ ವಲಯಕ್ಕೆ ವಿದ್ಯುತ್ ದರ ಏರಿಕೆ ಶಾಕ್; ಆದ್ರೆ ರೈತರಿಗೆ ಗುಡ್ ನ್ಯೂಸ್!

SCROLL FOR NEXT