ಸಿಕ್ಕಿಂ ಪ್ರವಾಹ 
ದೇಶ

ಸಿಕ್ಕಿಂನಲ್ಲಿ ಮೇಘಸ್ಫೋಟ: ಹಠಾತ್ ಪ್ರವಾಹದಲ್ಲಿ 23 ಸೈನಿಕರು ನಾಪತ್ತೆ; ತೀಸ್ತಾ ನದಿಯಲ್ಲಿ ಕೊಚ್ಚಿಹೋದವರಿಗಾಗಿ ಶೋಧ ಕಾರ್ಯ

ಉತ್ತರ ಸಿಕ್ಕಿಂನ ಲೊನಾಕ್ ಸರೋವರದ ಮೇಘಸ್ಫೋಟದಿಂದಾಗಿ ತೀಸ್ತಾ ನದಿಯಲ್ಲಿ ಹಠಾತ್ ಪ್ರವಾಹ ಉಂಟಾಗಿ ವೆಂಟಿಮೂರು ಸೇನಾ ಸಿಬ್ಬಂದಿ ನಾಪತ್ತೆಯಾಗಿದ್ದಾರೆ. ಅನೇಕ ಪ್ರದೇಶಗಳು ಜಲಾವೃತವಾಗಿವೆ ಎಂದು ವರದಿಯಾಗಿದೆ.

ಗಂಗಟೋಕ್ : ಉತ್ತರ ಸಿಕ್ಕಿಂನ ಲೊನಾಕ್ ಸರೋವರದ ಮೇಘಸ್ಫೋಟದಿಂದಾಗಿ ತೀಸ್ತಾ ನದಿಯಲ್ಲಿ ಹಠಾತ್ ಪ್ರವಾಹ ಉಂಟಾಗಿ ವೆಂಟಿಮೂರು ಸೇನಾ ಸಿಬ್ಬಂದಿ ನಾಪತ್ತೆಯಾಗಿದ್ದಾರೆ.

ಉತ್ತರ ಸಿಕ್ಕಿಂನಲ್ಲಿ ಮೇಘಸ್ಫೋಟ, ಪ್ರವಾಹ ಸಂಭವಿಸಿದ್ದು, 23 ಮಂದಿ ಸೇನಾ ಸಿಬ್ಬಂದಿ ನಾಪತ್ತೆಯಾಗಿದ್ದಾರೆ. ಅನೇಕ ಪ್ರದೇಶಗಳು ಜಲಾವೃತವಾಗಿವೆ, ಪ್ರವಾಹದ ನಂತರ ಚುಂಗ್‌ಥಾಂಗ್ ಅಣೆಕಟ್ಟಿನಿಂದ ನೀರು ಬಿಡುಗಡೆ ಮಾಡಿದ್ದರಿಂದ ಕೆಳಭಾಗದ ಪ್ರದೇಶಗಳಲ್ಲಿ ನೀರಿನ ಮಟ್ಟ ಇದ್ದಕ್ಕಿದ್ದಂತೆ 15-20 ಅಡಿ ಎತ್ತರಕ್ಕೆ ಏರಿದೆ ಎಂದು ವರದಿಯಾಗಿದೆ.

ಸಿಂಘ್‌ಥಾಮ್ ಬಳಿಯ ಬರ್ದಂಗ್‌ನಲ್ಲಿ ನಿಲ್ಲಿಸಲಾಗಿದ್ದ ಸೇನಾ ವಾಹನಗಳು ಮುಳುಗಿವೆ. ಇದಲ್ಲದೇ 23 ಸೇನಾ ಸಿಬ್ಬಂದಿಯೂ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

ನದಿ ಉಕ್ಕಿ ಹರಿಯುತ್ತಿರುವ ಕಾರಣ ತೀಸ್ತಾ ನದಿಯ ಮೇಲಿನ ಸಿಂಥಮ್ ಕಾಲು ಸೇತುವೆ ಕುಸಿದಿದೆ. ಪಶ್ಚಿಮ ಬಂಗಾಳದ ಜಲ್ಪೈಗುರಿ ಆಡಳಿತವು ಮುನ್ನೆಚ್ಚರಿಕೆ ಕ್ರಮವಾಗಿ ನದಿಯ ಕೆಳಗಿನ ಜಲಾನಯನ ಪ್ರದೇಶದಿಂದ ಜನರನ್ನು ಸ್ಥಳಾಂತರಿಸುತ್ತಿದೆ. ಸಿಕ್ಕಿಂ ಸರ್ಕಾರ ರಾಜ್ಯದಲ್ಲಿ ಹೈ ಅಲರ್ಟ್ ಘೋಷಿಸಿದೆ. ತೀಸ್ತಾ ನದಿಯಿಂದ ದೂರ ಇರುವಂತೆ ಜನರಿಗೆ ತಿಳಿಸಲಾಗಿದೆ. ಇನ್ನೂ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ಹಠಾತ್ ಪ್ರವಾಹದಿಂದ ಲಾಚೆನ್ ಕಣಿವೆಯ ಉದ್ದಕ್ಕೂ ಹಲವಾರು ಸೇನಾ ಸಂಸ್ಥೆಗಳಿಗೆ ಹಾನಿಯಾಗಿದೆ. ಇದೀಗ ನಾಪತ್ತೆಯಾಗಿರುವ ಸಿಬ್ಬಂದಿಯ ಪತ್ತೆಗೆ ಶೋಧಕಾರ್ಯ ನಡೆಸಲಾಗುತ್ತಿದೆ. ನದಿ ಉಕ್ಕಿ ಹರಿಯುತ್ತಿರುವುದರಿಂದ ತೀಸ್ತಾ ನದಿಯ ಮೇಲಿನ ಸಿಂಗ್‌ತಮ್ ಕಾಲು ಸೇತುವೆ ಕುಸಿದಿದೆ. ಪಶ್ಚಿಮ ಬಂಗಾಳದಿಂದ ಸಿಕ್ಕಿಂಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 10ರ ಹಲವು ಭಾಗಗಳು ಕೊಚ್ಚಿ ಹೋಗಿವೆ. ಭಾರೀ ಪ್ರವಾಹದ ಹಿನ್ನೆಲೆ ಅನೇಕ ರಸ್ತೆಗಳಲ್ಲಿ ಸಂಚಾರವನ್ನು ನಿರ್ಬಂಧಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!