ಸಂಜಯ್ ಸಿಂಗ್ ಮನೆ ಮೇಲೆ ED ದಾಳಿ 
ದೇಶ

ಎಎಪಿ ನಾಯಕ ಸಂಜಯ್ ಸಿಂಗ್ ಮನೆ ಮೇಲೆ ED ದಾಳಿ

ಮಹತ್ವದ ಬೆಳವಣಿಗೆಯಲ್ಲಿ ಆಮ್ ಆದ್ಮಿ ಪಕ್ಷದ ನಾಯಕ ಸಂಜಯ್ ಸಿಂಗ್ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಆಮ್ ಆದ್ಮಿ ಪಕ್ಷದ ನಾಯಕ ಸಂಜಯ್ ಸಿಂಗ್ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಮದ್ಯನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ರಾಜ್ಯಸಭಾ ಸಂಸದರೂ ಆಗಿರುವ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಸಂಜಯ್ ಸಿಂಗ್ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ದೆಹಲಿಯಲ್ಲಿರುವ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದ್ದು ವ್ಯಾಪಕ ಪೊಲೀಸರನ್ನು ಮತ್ತು ಭದ್ರತಾ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.

ಈ ಹಿಂದೆ ದೆಹಲಿಯ ಎಎಪಿ ಸರ್ಕಾರದ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು 2021 ರ ದೆಹಲಿ ಸರ್ಕಾರದ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಜೈಲಿನಲ್ಲಿದ್ದಾರೆ. ಈ ಹಿಂದೆ ಏಪ್ರಿಲ್‌ನಲ್ಲಿ ಇದೇ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಸುಮಾರು ಒಂಬತ್ತು ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿತ್ತು. ಇದೀಗ ಇಡಿ ದಾಳಿಯಾಗಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್-ಪ್ರಿಯಾಂಕಾ ವಶಕ್ಕೆ ಪಡೆದ ದೆಹಲಿ ಪೊಲೀಸರು: 9 ಗಂಟೆಗಳ ಇಂಡಿಯಾ ಕೂಟದ ಧರಣಿಗೆ ಬ್ರೇಕ್!

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಕಲಬುರಗಿಯಲ್ಲಿ ಶಾಕಿಂಗ್ ಘಟನೆ: ತೊಗರಿ ಹೊಲದಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ!

ಪ್ರಿಯಕರನೊಂದಿಗೆ ಸೇರಿ ಪತಿ ಹತ್ಯೆ: ಚಾಟ್​ನಿಂದ ಕೊಲೆ ರಹಸ್ಯ ಬಯಲು; ಹೃದಯಾಘಾತದ ಕಥೆ ಕಟ್ಟಿದ್ದ ಪತ್ನಿ ಬಂಧನ!