ಸಂಜಯ್ ಸಿಂಗ್ ಬಂಧನ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು. 
ದೇಶ

ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಬಂಧನ: ಕೇಂದ್ರ ಸರ್ಕಾರದ ವಿರುದ್ಧ ಎಎಪಿ ಪ್ರತಿಭಟನೆ, ಪೊಲೀಸರಿಂದ ಅಶ್ರುವಾಯು ಪ್ರಯೋಗ

ಮದ್ಯದ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಬಂಧನಕ್ಕೊಳಪಡಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಗುರುವಾರ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ನವದೆಹಲಿ: ಮದ್ಯದ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಬಂಧನಕ್ಕೊಳಪಡಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಗುರುವಾರ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಡಿಡಿಯು ಮಾರ್ಗದಲ್ಲಿರುವ ಆಮ್ ಆದ್ಮಿ ಪಕ್ಷದ (ಎಎಪಿ) ಕಚೇರಿಗೆ ಆಗಮಿಸಿರುವ ನೂರಾರು ಕಾರ್ಯಕರ್ತರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾರೆ. ಅಲ್ಲದೆ, ಸಂಜಯ್ ಸಿಂಗ್ ಬಿಡುಗಡೆ ಮಾಡುವಂತೆ ಒತ್ತಾಯಿಸುತ್ತಿದ್ದಾರೆ.

ಪ್ರತಿಭಟನಾಕಾರರು ಬಿಜೆಪಿ ಕಚೇರಿಗೆ ತೆರಳುತ್ತಿದ್ದು, ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಅಶ್ರುವಾಯು ಪ್ರಯೋಗ ನಡೆಸಿದ್ದಾರೆ.

ಸಂಸತ್ತಿನಲ್ಲಿ ಅದಾನಿ ಗ್ರೂಪ್‌ಗೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದ್ದರಿಂದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸಂಜಯ್ ಸಿಂಗ್ ಅವರನ್ನು ಬಂಧನಕ್ಕೊಳಪಡಿಸಿದ್ದಾರೆಂದು ಆರೋಪಿಸಿದ್ದಾರೆ.

ಅಧಿಕಾರದ ಆಧಾರದ ಮೇಲೆ ಕೇಂದ್ರೀಯ ಸಂಸ್ಥೆಗಳನ್ನು ಬಳಸಿಕೊಂಡು ಚುನಾವಣೆ ಗೆಲ್ಲಬಹುದು ಮತ್ತು ಸರ್ವಾಧಿಕಾರವನ್ನು ಹೇರಬಹುದು ಎಂದು ಬಿಜೆಪಿ ಭಾವಿಸಿದೆ. ಆದರೆ, ಇದಕ್ಕೆ ಸಾರ್ವಜನಿಕರು ಉತ್ತರ ನೀಡುತ್ತಾರೆ ಎಂಬುದಕ್ಕೆ ಇತಿಹಾಸವೇ ಸಾಕ್ಷಿ ಎಂದು ದೆಹಲಿ ಸಚಿವ ಗೋಪಾಲ್ ರೈ ಹೇಳಿದ್ದಾರೆ.

ದೆಹಲಿಯ ಅಬಕಾರಿ ನೀತಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರವಷ್ಟೇ ದೆಹಲಿಯಲ್ಲಿರುವ ಸಂಜಯ್ ಸಿಂಗ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದರು. ಹಲವು ಗಂಟೆಗಳ ಕಾಲ ವಿಚಾರಣೆ ನಡೆಸಿದ ನಂತರ ಸಂಜಯ್ ಅವರನ್ನು ಬಂಧನಕ್ಕೊಳಪಡಿಸಿದ್ದರು. ಪ್ರಕರಣ ಸಂಬಂಧ ಈ ಹಿಂದೆ ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಅವರನ್ನು ಬಂಧನಕ್ಕೊಳಪಡಿಸಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT