ಸಾಂದರ್ಭಿಕ ಚಿತ್ರ 
ದೇಶ

ಪತ್ನಿ, ಪುತ್ರಿಯರನ್ನು ಗುಂಡಿಕ್ಕಿ ಕೊಂದು, ಆಂಧ್ರ ಪೊಲೀಸ್ ಹೆಡ್ ಕಾನ್ ಸ್ಟೆಬಲ್ ಆತ್ಮಹತ್ಯೆಗೆ ಶರಣು!

ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಗುಂಡಿಕ್ಕಿ ಕೊಂದ 55 ವರ್ಷದ ಆಂಧ್ರ ಪ್ರದೇಶದ ಪೊಲೀಸ್ ಹೆಡ್ ಕಾನ್ ಸ್ಟೆಬಲ್ ಒಬ್ಬರು ಬಳಿಕ ತಾನೂ ಕೂಡಾ ಗುಂಡು ಹಾರಿಸಿಕೊಂಡು ಸಾವನ್ನಪಿದ್ದಾರೆ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ಕಡಪಾ: ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಗುಂಡಿಕ್ಕಿ ಕೊಂದ 55 ವರ್ಷದ ಆಂಧ್ರ ಪ್ರದೇಶದ ಪೊಲೀಸ್ ಹೆಡ್ ಕಾನ್ ಸ್ಟೆಬಲ್ ಒಬ್ಬರು ಬಳಿಕ ತಾನೂ ಕೂಡಾ ಗುಂಡು ಹಾರಿಸಿಕೊಂಡು ಸಾವನ್ನಪಿದ್ದಾರೆ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ವೈಯಕ್ತಿಕ ಕಾರಣಗಳಿಂದಾಗಿ ನಡೆದಿರುವ ಘಟನೆಯು ಗುರುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. 1993 ರ ಬ್ಯಾಚ್ ನ ಪೊಲೀಸ್‌ ಮನೆಯಿಂದ ಸೂಸೈಡ್ ನೋಟ್ ವಶಕ್ಕೆ ಪಡೆಯಲಾಗಿದೆ.

ಕಡಪಾ ಪಟ್ಟಣ ಪೊಲೀಸ್ ಠಾಣೆಯಲ್ಲಿ ರೈಟರ್ ಆಗಿ ಕೆಲಸ ಮಾಡುತ್ತಿದ್ದ ವೆಂಕಟೇಶ್ವರಲು, ನಿನ್ನೆ (ಬುಧವಾರ) ರಾತ್ರಿ 11 ಗಂಟೆಯವರೆಗೂ ಕೆಲಸ ಮಾಡಿ ಠಾಣೆಯಿಂದ ಪಿಸ್ತೂಲ್ ಮತ್ತು ಕೆಲವು ಗುಂಡಿನ ಸುತ್ತುಗಳನ್ನು ತೆಗೆದುಕೊಂಡು ಮನೆಗೆ ಹೋಗಿದ್ದಎಂದು ಕಡಪ ಉಪ- ವಿಭಾಗೀಯ ಪೊಲೀಸ್ ಅಧಿಕಾರಿ ಎಂ.ಡಿ.ಶರೀಫ್ ಸುದ್ದಿಸಂಸ್ಥೆ ಪಿಟಐಗೆ ತಿಳಿಸಿದ್ದಾರೆ. 

ವೆಂಕಟೇಶ್ವರಲು ಅವರ ಹಿರಿಯ ಮಗಳು, ಸುಮಾರು 20 ವರ್ಷ ವಯಸ್ಸಿನವಳಾಗಿದ್ದು, ಮೊದಲ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದು, ಕಿರಿಯವಳು 10 ನೇ ತರಗತಿಯಲ್ಲಿ ಓದುತ್ತಿದ್ದಳು, ಕಾನ್ ಸ್ಟೇಬಲ್ ಅವರ ಹೆಂಡತಿಗೆ ಸುಮಾರು 45 ವರ್ಷ ವಯಸ್ಸಾಗಿತ್ತು ಎಂದು ಅವರು ವಿವರಿಸಿದರು. 

ಷೇರು ಮಾರುಕಟ್ಟೆ ವಹಿವಾಟಿನಲ್ಲಿ ಹಣವನ್ನು ಕಳೆದುಕೊಂಡಿದ್ದ ಹೆಡ್ ಕಾನ್‌ಸ್ಟೆಬಲ್ ಕೆಲವು ಕೌಟುಂಬಿಕ ಸಮಸ್ಯೆಗಳಿಂದ ಸಂಕಷ್ಟಕ್ಕೆ ಸಿಲುಕಿದ್ದರು ಎಂದು ಮೂಲಗಳು ತಿಳಿಸಿವೆ.  ವೆಂಕಟೇಶ್ವರಲು ಮನೆಗೆ ಕಡಪಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ್ ಕೌಶಲ್ ಭೇಟಿ ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ